Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Crime News

ಶಿವಲಿಂಗಪ್ಪನವರನ್ನು ಕೊಲೆ ಮಾಡಿದ ಹಂತಕರನ್ನು ಬಂಧಿಸಿ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಮಡಿವಾಳ ಸಮಾಜದ ಬಿ.ಶಿವಲಿಂಗಪ್ಪನವರನ್ನು ಭೀಕರವಾಗಿ ಹತ್ಯೆಗೈದಿರುವುದನ್ನು ಖಂಡಿಸಿ ಜಿಲ್ಲಾ ಮಡಿವಾಳರ ಸಂಘ ಹಾಗೂ ಸಾಮಾಜಿಕ ಸಂಘರ್ಷ ಸಮಿತಿಯಿಂದ ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿ ಹೆಚ್ಚುವರಿ ರಕ್ಷಣಾಧಿಕಾರಿ ಡಾ.ಆರ್.ಶಿವಕುಮಾರ್‌ಗೆ ಮನವಿ ಸಲ್ಲಿಸಲಾಯಿತು.


ಪ್ರವಾಸಿ ಮಂದಿರದಿಂದ ಮೆರವಣಿಗೆ ಮೂಲಕ ರಕ್ಷಣಾಧಿಕಾರಿ ಕಚೇರಿಗೆ ತೆರಳಿದ ಪ್ರತಿಭಟನಾಕಾರರು ದಾರಿಯುದ್ದಕ್ಕೂ ಹತ್ಯೆಕೋರರ ವಿರುದ್ದ ಧಿಕ್ಕಾರಗಳನ್ನು ಕೂಗಿದರು.

ಮಡಿವಾಳ ಜನಾಂಗಕ್ಕೆ ಸೇರಿದ ಬಿ.ಶಿವಲಿಂಗಪ್ಪನವರು ರಾಜಕಾರಣ ಹಾಗೂ ಉದ್ಯಮದಲ್ಲಿ ವೇಗವಾಗಿ ಬೆಳೆಯುತ್ತಿರುವುದನ್ನು ಕಂಡು ಸಹಿಸದವರಿಂದ ಹತ್ಯೆಯಾಗಿರಬಹುದೆಂಬ ಅನುಮಾನವಿದ್ದು, ತನಿಖೆ ನಡೆಸಿ ಶೀಘ್ರವೇ ಹಂತಕರನ್ನು ಬಂಧಿಸಿ ಕಠಿಣ ಶಿಕ್ಷೆಗೊಳಪಡಿಸಿದಾಗ ದುಃಖತಪ್ತ ಕುಟುಂಬಕ್ಕೆ ನ್ಯಾಯ ಒದಗಿಸಿದಂತಾಗುತ್ತದೆಂದು ಪ್ರತಿಭಟನೆಯ ಮುಂದಾಳತ್ವ ವಹಿಸಿದ್ದ ಜಿಲ್ಲಾ ಮಡಿವಾಳರ ಸಂಘದ ಗೌರವಾಧ್ಯಕ್ಷ ಡಾ.ವಿ.ಬಸವರಾಜ್ ಹೆಚ್ಚುವರಿ ರಕ್ಷಣಾಧಿಕಾರಿಯವರನ್ನು ಒತ್ತಾಯಿಸಿದರು.

ಮನವಿ ಸ್ವೀಕರಿಸಿದ ಹೆಚ್ಚುವರಿ ರಕ್ಷಣಾಧಿಕಾರಿ ಡಾ.ಆರ್.ಶಿವಕುಮಾರ್, ಮೃತದೇಹ ಪತ್ತೆಯಾದ ಜಾಗಕ್ಕೆ ಜಿಲ್ಲಾ ರಕ್ಷಣಾಧಿಕಾರಿ, ನಾನು ಮತ್ತು ಡಿವೈಎಸ್ಪಿ. ಭೇಟಿ ನೀಡಿದೇವೆ. ಹಂತಕರ ಪತ್ತೆಗೆ ತಂಡ ರಚಿಸಿದ್ದು, ಆದಷ್ಟು ಬೇಗನೆ ಹತ್ಯೆಕೋರರನ್ನು ಬಂಧಿಸಿ ಅವರ ಕುಟುಂಬಕ್ಕೆ ನ್ಯಾಯ ಒದಗಿಸುವ ಭರವಸೆ ನೀಡಿದರು.

ಜಿಲ್ಲಾ ಮಡಿವಾಳರ ಸಂಘದ ಅಧ್ಯಕ್ಷ ಬಿ.ರಾಮಜ್ಜ, ಪ್ರಧಾನ ಕಾರ್ಯದರ್ಶಿ ಕೆ.ಆರ್.ಮಂಜುನಾಥ್, ಮಡಿವಾಳ ಸಮಾಜದ ವಿರುಪಾಕ್ಷಪ್ಪ, ಲೋಕೇಶ್ವರಪ್ಪ, ರಾಮಕೃಷ್ಣ, ಧ್ರುವಕುಮಾರ್, ಬಸವರಾಜ್, ನಾಗಣ್ಣ, ಮಂಜುನಾಥ್, ಟಿ.ರುದ್ರಮುನಿ, ರಮೇಶ್, ರಂಗಮ್ಮ, ಪ್ರಕಾಶ್ ಎಸ್‌ಜೆಎಂಐಟಿ, ರಮೇಶ್ ಜಗಳೂರು, ಮಾದಿಗರ ಸಾಂಸ್ಕೃತಿಕ ಸಂಘದ ಪ್ರಧಾನ ಕಾರ್ಯದರ್ಶಿ ಹಿರೇಹಳ್ಳಿ ಮಲ್ಲಿಕಾರ್ಜುನ್, ಸಾಮಾಜಿಕ ಸಂಘರ್ಷ ಸಮಿತಿಯ ಪ್ರೊ.ಸಿ.ಕೆ.ಮಹೇಶ್, ಟಿ.ರಾಮು, ರಾಮುಗೋಸಾಯಿ, ಸಿ.ಎ.ಚಿಕ್ಕಣ್ಣ, ಅಖಿಲ ಕರ್ನಾಟಕ ಕೊರಚ ಮಹಾ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ವೈ.ಕುಮಾರ್ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು