Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Crime News

ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಜ್ಯೋತಿಷಿಗೆ 200 ವರ್ಷ ಕಠಿಣ ಶಿಕ್ಷೆ

ಚಂದ್ರವಳ್ಳಿ ನ್ಯೂಸ್, ಶಿವಗಂಗಾ (ತಮಿಳುನಾಡು):
ಅಪ್ರಾಪ್ತ ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಜ್ಯೋತಿಷಿಗೆ ಜಿಲ್ಲಾ ಪೋಕ್ಸೋ ತ್ವರಿತ ನ್ಯಾಯಾಲಯವು 200 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ತಮಿಳುನಾಡಿನ ಶಿವಗಂಗಾ ಜಿಲ್ಲೆಯ ಮನಗಿರಿ ಪ್ರದೇಶದ ರಾಮಕೃಷ್ಣನ್ (
52) ಶಿಕ್ಷೆಗೆ ಒಳಗಾದ ಜ್ಯೋತಿಷಿ. ಅಪರಾಧಿ ಜ್ಯೋತಿಷ್ಯ ಹೇಳುವುದು ಮತ್ತು ದೋಷ ನಿವಾರಣೆಗೆ ಪರಿಕಾರ ಪೂಜೆ ನಡೆಸುವುದನ್ನು ರಾಮಕೃಷ್ಣನ್ ವೃತ್ತಿಯಾಗಿ ಮಾಡಿಕೊಂಡಿದ್ದ.

ಮಹಿಳೆಯೊಬ್ಬರು ತನ್ನ 18 ಮತ್ತು 14 ವರ್ಷ ವಯಸ್ಸಿನ ಇಬ್ಬರು ಹೆಣ್ಣು ಮಕ್ಕಳು ಓದಿನಲ್ಲಿ ಹಿಂದಿದ್ದು ಇದಕ್ಕೆ ಪರಿಹಾರ ಸೂಚಿಸುವಂತೆ 2021ರ ನವೆಂಬರ್ ನಲ್ಲಿ ಈ ಜ್ಯೋತಿಷಿಯ ಸಂಪರ್ಕ ಮಾಡಿದ್ದಳು. ಕೆಲವು ಆಚರಣೆಗಳಿದ್ದು, ಪರಿಹಾರಕ್ಕಾಗಿ ಇಬ್ಬರು ಹೆಣ್ಣುಮಕ್ಕಳನ್ನು ತನ್ನ ಮನೆಗೆ ಕರೆತರುವಂತೆ ಜ್ಯೋತಿಷಿ ಸೂಚಿಸಿದ್ದನು. ಇದನ್ನು ನಂಬಿದ ಮಹಿಳೆ, ತನ್ನ ಇಬ್ಬರು ಹೆಣ್ಣು ಮಕ್ಕಳನ್ನು ಆತನ ಮನೆಗೆ ಕರೆದೊಯ್ದಿದ್ದಳು.

ಅಲ್ಲಿ, ಮಹಿಳೆಯನ್ನು ಪ್ರತ್ಯೇಕ ಕೋಣೆಯಲ್ಲಿ ಇರಲು ಹೇಳಿದ್ದ ಜ್ಯೋತಿಷಿ, ಇಬ್ಬರು ಬಾಲಕಿಯರನ್ನು ಬೇರೆ ಕೋಣೆಗೆ ಕರೆದೊಯ್ದು, ಅವರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿತ್ತು.


ಇದಲ್ಲದೇ, ಈ ವಿಷಯ ಬಹಿರಂಗಪಡಿಸಿದರೆ ಪೋಷಕರ ಜೀವ ತೆಗೆಯಲಾಗುತ್ತದೆ ಎಂದು ಬೆದರಿಕೆ ಹಾಕಿದ್ದರಿಂದ ಭಯಭೀತರಾದ ಯುವತಿಯರು ಹಲವು ದಿನಗಳ ಕಾಲ ಯಾರಿಗೂ ಹೇಳಿರಲಿಲ್ಲ.
ಸುಮಾರು ಎರಡು ವರ್ಷಗಳ ನಂತರ
ಮಕ್ಕಳಲ್ಲಿ ಆರೋಗ್ಯ ಸಮಸ್ಯೆ ಕಂಡು ಬಂದಿದ್ದು ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅಲ್ಲಿ ನಡೆಸಲಾದ ವೈದ್ಯಕೀಯ ಪರೀಕ್ಷೆಯಲ್ಲಿ ಅವರಿಗೆ ಲೈಂಗಿಕವಾಗಿ ಹರಡುವ ರೋಗವಿದೆ ಎಂದು ವೈದ್ಯರು ಪತ್ತೆ ಮಾಡಿದ್ದರು.


ಬಳಿಕ ಸೂಕ್ಷ್ಮವಾಗಿ ಕೇಳಿದಾಗ ನಡೆದ ಘಟನೆ ಗೊತ್ತಾಗಿದೆ. ಇದರಿಂದ ಆಘಾತಕ್ಕೊಳಗಾದ ಪೋಷಕರು ಲೈಂಗಿಕ ದೌರ್ಜನ್ಯ ಎಸಗಿದ ಜೋತಿಷಿ ವಿರುದ್ಧ ತಿರುಪತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ದೂರು ನೀಡಿದ್ದರು. ದಾಖಲಾದ ದೂರು ಆಧರಿಸಿ ಜ್ಯೋತಿಷಿಯನ್ನು ಬಂಧಿಸಿದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಟ್ಟಿ ಸಲ್ಲಿಸಿದ್ದರು.

ಶಿವಗಂಗಾ ಜಿಲ್ಲಾ ಪೋಕ್ಸೋ ಫಾಸ್ಟ್ ಟ್ರ್ಯಾಕ್ ನ್ಯಾಯಾಲಯವು ಮಹತ್ವದ ತೀರ್ಪು ಪ್ರಕಟಿಸಿದೆ. ಆರೋಪಿ ತಪ್ಪಿತಸ್ಥರೆಂದು ಸಾಬೀತಾಗಿದ್ದು, ಜ್ಯೋತಿಷಿ ರಾಮಕೃಷ್ಣನ್ ಅವರಿಗೆ 200 ವರ್ಷಗಳ ಜೈಲು ಶಿಕ್ಷೆ ಮತ್ತು 2 ಲಕ್ಷ ರೂ. ದಂಡ ವಿಧಿಸಲಾಗಿದೆ ಎಂದು ನ್ಯಾಯಾಲಯದ ನ್ಯಾಯಾಧೀಶ ಗೋಕುಲ್ ಮುರುಗನ್ ಅವರು ತೀರ್ಪು ನೀಡಿದ್ದಾರೆ. ಅಲ್ಲದೆ ತಮಿಳುನಾಡು ಸರ್ಕಾರವು ಸಂತ್ರಸ್ತ ಇಬ್ಬರು ಬಾಲಕಿಯರಿಗೆ ತಲಾ 10 ಲಕ್ಷ ರೂ. ಪರಿಹಾರ ನೀಡಬೇಕು ಎಂದೂ ನ್ಯಾಯಾಧೀಶರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು