ಚಂದ್ರವಳ್ಳಿ ನ್ಯೂಸ್, ಬೆಳಗಾವಿ:
ಉತ್ತರ ಭಾರತದಿಂದ ಬಂದಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಬಲೆಗೆ ಬೀಳಿಸಲು ಪ್ರಯತ್ನಿಸಿದ್ದರು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಗುರುವಾರ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ತಮ್ಮನ್ನು ಸಿಲುಕಿಸಲು ಯಾರೋ ಬಂದಿದ್ದರು ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ಅಲ್ಲದೆ, 'ಅವರು ನನ್ನ ಬಳಿಗೆ ಬಂದಿದ್ದರೆ, ನಿಮ್ಮ ಬಳಿಗೂ ಬರುವುದು ಅವರಿಗೆ ದೊಡ್ಡ ವಿಷಯವೇನಲ್ಲ' ಎಂದು ಎಚ್ಚರಿಸಿದ್ದಾರೆ" ಎಂದು ಮಾಹಿತಿ ನೀಡಿದರು.
ಕಾಂಗ್ರೆಸ್ ಸರ್ಕಾರದ ವರ್ಚಸ್ಸಿಗೆ ಧಕ್ಕೆ ತರುವ ಹಾಗೂ ಸಚಿವರನ್ನು ರಾಜಕೀಯವಾಗಿ ಸಿಲುಕಿಸುವ ಉದ್ದೇಶದಿಂದ ವ್ಯವಸ್ಥಿತ ಪ್ರಯತ್ನಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಸಚಿವರು ಮತ್ತು ಪಕ್ಷದ ಹಿರಿಯ ನಾಯಕರು ಹೆಚ್ಚಿನ ಎಚ್ಚರಿಕೆಯಿಂದ ಇರಬೇಕೆಂದು ಸಿಎಂ ಸೂಚನೆ ನೀಡಿದ್ದಾರೆ ಎಂದು ಅವರು ಸ್ಪಷ್ಟಪಡಿಸಿದರು.
ಮುಂದುವರೆದು ಮಾತನಾಡಿದ ಸಚಿವರು, ರಾಜಕೀಯದಲ್ಲಿ ಇಂತಹ ಷಡ್ಯಂತ್ರಗಳು ಹೊಸದಲ್ಲವಾದರೂ ಮುನ್ನೆಚ್ಚರಿಕೆ ವಹಿಸುವುದು ಅವಶ್ಯಕ ಎಂದರು. ಅಲ್ಲದೆ, ಸ್ಟಿಂಗ್ ಆಪರೇಷನ್ಗಳನ್ನು ನಡೆಸಲು ಕೆಲವು ಖಾಸಗಿ ಏಜೆನ್ಸಿಗಳನ್ನು ಬಳಸಿಕೊಳ್ಳಲಾಗುತ್ತಿದೆ ಎಂಬ ಮಾಹಿತಿ ಕೂಡ ಲಭ್ಯವಿದೆ ಎಂದು ಅವರು ತಿಳಿಸಿದರು.




