Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಪ್ಲಾಸ್ಟಿಕ್ ತ್ಯಜಿಸಿ ಬಟ್ಟೆ ಕೈಚೀಲಗಳನ್ನು ಬಳಸಿ-ಎ.ವಾಸೀಂ

ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಅತೀ ಹೆಚ್ಚು ಪ್ಲಾಸ್ಟಿಕ್ ಬಳಸುವ ಬದಲಾಗಿ ಬಟ್ಟೆಯಿಂದ ತಯಾರಿಸಿದ ಕೈಚೀಲ ಗಳನ್ನು ಬಳಸುವುದರಿಂದ ವನ್ಯ ಜೀವಿಗಳ ಸಂರಕ್ಷಣೆ ಮತ್ತು ಪರಿಸರ ಮಾಲಿನ್ಯವನ್ನು ತಡೆಗಟ್ಟುವ ಬಹುದು ಪ್ಲಾಸ್ಟಿಕ್ ವಸ್ತುಗಳ ಬಳಕೆಯಿಂದ ಆರೋಗ್ಯದ ಮೇಲೆ ಬೀರುವ ಪರಿಣಾಮಗಳನ್ನು ಸಾರ್ವಜನಿಕರಿಗೆ ಅರಿವು ಮೂಡಿಸುವುದು ಅಗತ್ಯವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.


ಅವರು ಹಿರಿಯೂರು ನಗರಸಭೆಯಿಂದ ವಿತರಿಸಲು ತಯಾರಿಸಿದ ಬಟ್ಟೆಯ ಕೈಚೀಲವನ್ನು ಬಿಡುಗಡೆಗೊಳಿಸಿ ಮಾತನಾಡಿದರು.

ಪ್ಲಾಸ್ಟಿಕ್ ವಸ್ತುಗಳ ಬಳಕೆಯಿಂದ ಮಾರಕವಾದ ಕ್ಯಾನ್ಸರ್ ರೋಗಗಳು ಮನುಷ್ಯರಲ್ಲಿ ಭಾದಿಸುತ್ತಿದೆ. ಹಣ್ಣು ತರಕಾರಿ ಊಟದ ಪೊಟ್ಟಣ್ಣಗಳನ್ನು ಕಟ್ಟಲು ಪ್ಲಾಸ್ಟಿಕ್ ಪೇಪರ್ ಗಳ ಬಳಕೆಯನ್ನು ಮಾಡಬಾರದು ಪ್ಲಾಸ್ಟಿಕ್ ಪೇಪರ್  ವಿಷಕಾರಿ ಅಂಶಗಳನ್ನು ಒಳಗೊಂಡಿದ್ದು ಇದರ ಬಗ್ಗೆ ಎಚ್ಚರ ವಹಿಸುವುದು ಅಗತ್ಯವಾಗಿದೆ ಎಂದರು.

ಜಿಲ್ಲಾಧಿಕಾರಿ ಹಾಗೂ ನಗರಸಭೆ ಆಡಳಿತಾಧಿಕಾರಿ ಟಿ.ವೆಂಕಟೇಶ್  ಮಾತನಾಡಿ  ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬಳಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಬೇಕು ಇಲ್ಲವಾದಲ್ಲಿ ಮುಂದಿನ ಪೀಳಿಗೆಗೆ ದೊಡ್ಡ ಮಾರಕವಾಗುವುದು ಎಂದರು.

ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್ ಮಾತನಾಡಿ ಸಹ ನಿಷೇಧಿತ ಪ್ಲಾಸ್ಟಿಕ್ ಬಳಕೆ  ಮುಂದಿನ ದಿನಗಳಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಕಡ್ಡಾಯವಾಗಿ ನಿಲ್ಲಿಸುವ ವ್ಯವಸ್ಥೆ ಮಾಡಲಾಗುವುದು ಬಳಸಿದವರಿಗೆ ದಂಡ ವಿಧಿಸುವುದರ ಮೂಲಕ ಎಚ್ಚರಿಕೆ ನೀಡಲಾಗುವುದು ಎಂದರು.

ಪೌರಾಯುಕ್ತ ಎ.ವಾಸೀಂ ಮಾತನಾಡಿ ನಿಷೇದಿತ ಪ್ಲಾಸ್ಟಿಕ್ ಬಳಕೆ   ನಗರದ ಸ್ವಚ್ಛತೆಗೆ ಪ್ಲಾಸ್ಟಿಕ್ ಬಳಕೆ ನಿಷೇದ ಮಾಡುವುದರಿಂದ ಸಾರ್ವಜನಿಕರ ಆರೋಗ್ಯ ದೃಷ್ಟಿ ಉತ್ತಮವಾಗಿರುತ್ತದೆ ಪ್ಲಾಸ್ಟಿಕ್ ಬಳಕೆಯಿಂದ ಹಲವಾರು ರೋಗಗಳು ಹರಡುವುದರಿಂದ ಸಾರ್ವಜನಿಕರ ಎಚ್ಚೆತ್ತುಕೊಂಡು ಬಟ್ಟೆ ಬ್ಯಾಗುಗಳನ್ನು ಬಳಸುವುದರಿಂದ ನೀವು ಆರೋಗ್ಯವಾಗಿರಲು ಸಾಧ್ಯವಾಗುತ್ತದೆ ಪ್ಲಾಸ್ಟಿಕ್ ಮುಕ್ತ ನಗರವನ್ನ ಮಾಡಲು ಸಾರ್ವಜನಿಕರು ಸಹಕರಿಸಬೇಕು ಪ್ಲಾಸ್ಟಿಕ್  ನಿಷೇಧ ಅಂತ್ಯವಾಗಬೇಕೆಂದು ತಿಳಿಸಿದರು ಎಂದರು.

ತಾಲ್ಲೂಕು ದಂಢಾಧಿಕಾರಿ ಸಿದ್ದೇಶ್ ಮಾತನಾಡಿ ಸರ್ಕಾರಿ ಕಛೇರಿಗಳಲ್ಲಿಯೂ ಸಹ  ನಿಷೇಧಿತ ಪ್ಲಾಸ್ಟಿಕ್ ಬಳಕೆ ಮಾಡದಂತೆ ಕಛೇರಿ ಸಿಬ್ಬಂದಿ ವರ್ಗದವರು ಪಾಲಿಸಬೇಕು ಎಂದರು.



ಹಿರಿಯೂರು ನಗರಸಭೆ ವತಿಯಿಂದ ನಿಷೇಧಿತ ಪ್ಲಾಸ್ಟಿಕ್ ಬಳಕೆಯ ಬದಲಾಗಿ ಐ.ಇ.ಸಿ ಅನುದಾನದಡಿ ಬಟ್ಟೆ  ಬ್ಯಾಗ್ ಗಳನ್ನು ತಯಾರಿಮಾಡಿಸಿ ವಿತರಣೆ ಮಾಡುವ ನಗರಸಭೆಯ ಧ್ಯೇಯ ಉದ್ದೇಶವಾಗಿರುತ್ತದೆ.
ಎ.ವಾಸೀಂ, ಪೌರಾಯುಕ್ತರು, ನಗರಸಭೆ, ಹಿರಿಯೂರು.


ಎಡಿಸಿ ಕುಮಾರಸ್ವಾಮಿ, ನಗರಸಭೆ ವ್ಯವಸ್ಥಾಪಕಿ ಬಿ.ಆರ್.ಮಂಜುಳ, ಆರೋಗ್ಯ ನಿರೀಕ್ಷಕಿ ಸಂಧ್ಯಾ, ಕಂದಾಯ ನಿರೀಕ್ಷಕ ಜಬೀವುಲ್ಲಾ, ರಮೇಶ್ ಸೇರಿದಂತೆ ಮತ್ತಿತರರು ಇದ್ದರು.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು