Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Health & Fitness

ಕೆಮ್ಮಿನ ಸಿರಪ್‌ಗಳ ಮಾರಾಟ ಮತ್ತು ಖರೀದಿ ನಿಷೇಧ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೆಮ್ಮಿನ ಸಿರಪ್​​​ ಸೇವಿಸಿ ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ 12 ಮಕ್ಕಳು ಸಾವನ್ನಪ್ಪಿದ ಘಟನೆಯಿಂದ ಎಚ್ಚೆತ್ತುಕೊಂಡಿರುವ ಕರ್ನಾಟಕ ಸರ್ಕಾರ ಶ್ರೀಸನ್ ಫಾರ್ಮಾ ಮತ್ತು ಕೇಸನ್ಸ್ ಫಾರ್ಮಾ ಪೂರೈಸುವ ಕೆಮ್ಮಿನ ಸಿರಪ್‌ಗಳ ಮಾರಾಟ ಮತ್ತು ಖರೀದಿಯನ್ನು ನಿಷೇಧಿಸಿ ಆದೇಶ ಹೊರಡಿಸಿದೆ.

ರಾಜ್ಯ ಪರವಾನಗಿ ಪ್ರಾಧಿಕಾರ ಮತ್ತು ಹೆಚ್ಚುವರಿ ಡ್ರಗ್ಸ್ ಕಂಟ್ರೋಲರ್‌ಅವರು ಈ ಬಗ್ಗೆ ಸುತ್ತೋಲೆ ಹೊರಡಿಸಿ ತಮಿಳುನಾಡಿನ ಕಾಂಚೀಪುರಂ ಮೂಲದ ಶ್ರೀಸನ್ ಫಾರ್ಮಾ ತಯಾರಿಸಿದ 'ಕೋಲ್ಡ್‌ ರಿಫ್ ಸಿರಪ್' ಮತ್ತು ಜೈಪುರದ ಕೇಸನ್ಸ್ ಫಾರ್ಮಾ ತಯಾರಿಸಿದ 'ಡೆಕ್ಸ್ಟ್ರೋಮೆಥೋರ್ಫಾನ್ ಹೈಡ್ರೋಬ್ರೋಮೈಡ್ ಸಿರಪ್'ಗಳ ಮಾರಾಟ ಮತ್ತು ಖರೀದಿಯನ್ನು ಕರ್ನಾಟಕದಲ್ಲಿ ನಿಷೇಧಿಸಲಾಗಿದೆ. ಈ ಸಿರಪ್‌ಗಳು ಮಧ್ಯಪ್ರದೇಶ (ಎಂಪಿ) ಮತ್ತು ರಾಜಸ್ಥಾನದಲ್ಲಿ ಮಕ್ಕಳ ಸಾವಿಗೆ ಕಾರಣವಾಗಿರುವ ಶಂಕೆಯನ್ನು ವ್ಯಕ್ತಪಡಿಸಲಾಗಿದೆ.

ಜಿಲ್ಲಾ ಆರೋಗ್ಯ ಅಧಿಕಾರಿಗಳು, ವೈದ್ಯಕೀಯ ಸಂಸ್ಥೆಗಳು, ಸರ್ಕಾರಿ ಆಸ್ಪತ್ರೆಗಳು, ಔಷಧ ಸಂಗ್ರಹಕಾರರು (ಡ್ರಗ್ ಸ್ಟಾಕಿಸ್ಟ್‌ಗಳು), ವಿತರಕರು ಮತ್ತು ಚಿಲ್ಲರೆ ವ್ಯಾಪಾರಿಗಳು ಈ ಕೆಮ್ಮಿನ ಸಿರಪ್‌ಗಳ ಖರೀದಿಯನ್ನು ಮತ್ತು ಮಾರಾಟವನ್ನು ತಡೆಯಲು ಜಾಗರೂಕರಾಗಿರುವಂತೆ ಸುತ್ತೋಲೆಯಲ್ಲಿ ಸೂಚಿಸಲಾಗಿದೆ.


ಯಾವುದೇ ಸ್ಟಾಕ್ ಲಭ್ಯವಿದ್ದಲ್ಲಿ, ಅದನ್ನು ಹಿಂಪಡೆಯಲು ಮತ್ತು ಹೆಚ್ಚಿನ ಕ್ರಮಕ್ಕಾಗಿ ಸಂಬಂಧಪಟ್ಟ ಅಧಿಕಾರ ವ್ಯಾಪ್ತಿಯ ಸಹಾಯಕ ಔಷಧ ನಿಯಂತ್ರಣಾಧಿಕಾರಿ ಕಚೇರಿಗೆ ಮಾಹಿತಿ ನೀಡುವಂತೆಯೂ ಸಹ ಅವರಿಗೆ ಸೂಚಿಸಲಾಗಿದೆ.

ಸಚಿವಾಲಯವು ರಾಜ್ಯದಲ್ಲಿ ಮಾರಾಟವಾಗುತ್ತಿರುವ ಅದೇ ರಿತಿಯ ಎಲ್ಲಾ ಕೆಮ್ಮಿನ ಸಿರಪ್‌ಗಳ ಮಾದರಿಗಳ ಪ್ರಯೋಗಾಲಯ ಪರೀಕ್ಷೆ ಮತ್ತು ವಿಶ್ಲೇಷಣೆಗೆ ಆದೇಶಿಸಿದೆ.


ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಈ ಕುರಿತು ಮಾತನಾಡಿ, ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಸಾವಿಗೆ ಕಾರಣವಾದ ಕೆಮ್ಮಿನ ಸಿರಪ್‌ಗಳು ರಾಜ್ಯಕ್ಕೆ ಸರಬರಾಜಾಗಿಲ್ಲ. ಆದರೂ ಮುನ್ನೆಚ್ಚರಿಕಾ ಕ್ರಮವಾಗಿ ಎಲ್ಲಾ ಕೆಮ್ಮಿನ ಸಿರಪ್‌ಗಳ ಮಾದರಿಗಳನ್ನು ಪರೀಕ್ಷಿಸುವಂತೆ ಇಲಾಖೆ ಆದೇಶಿಸಿದೆ. ವಾಸ್ತವವಾಗಿ, ಈ ಪ್ರಕ್ರಿಯೆಯು ಈಗಾಗಲೇ ಪ್ರಾರಂಭವಾಗಿದೆ ಎಂದು ಅವರು ತಿಳಿಸಿದ್ದಾರೆ.

ಔಷಧಿಗಳು ಮತ್ತು ಮಾತ್ರೆಗಳ ಕಲಬೆರಕೆ ಪ್ರಕರಣಗಳನ್ನು ನಿಭಾಯಿಸಲು ಕಟ್ಟುನಿಟ್ಟಿನ ಕಾನೂನುಗಳ ಅವಶ್ಯಕತೆ ಒತ್ತಿಹೇಳಿದ ಗುಂಡೂರಾವ್ ಅವರು, ಕಲಬೆರಕೆ ಮತ್ತು ಕಳಪೆ ಔಷಧಗಳು ಹಾಗೂ ಅವುಗಳ ಪರಿಶೀಲನೆಯ ಬಗ್ಗೆ ರಾಜ್ಯಗಳ ನಡುವೆ ಮಾಹಿತಿ ಹಂಚಿಕೆ ಖಚಿತಪಡಿಸಿಕೊಳ್ಳಲು ಒಂದು ವ್ಯವಸ್ಥೆ ಜಾರಿಗೆ ತರುವಂತೆ ಕೇಂದ್ರಕ್ಕೆ ಪತ್ರ ಬರೆದಿದ್ದೇವೆ. ಕೇಂದ್ರ ಸರ್ಕಾರ ಈ ಸಲಹೆ ಪರಿಗಣಿಸಿ ಮಾಹಿತಿ ಹಂಚಿಕೆಗೆ ಒಂದು ವ್ಯವಸ್ಥೆ ರೂಪಿಸಬೇಕು ಎಂದು ಸಚಿವರು ತಿಳಿಸಿದರು.

 

 

 

 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಖಾಸಗಿ ವಿವಿಗಳು ಲಾಭಕೋರ ವ್ಯಾಪಾರಿ ಸಂಸ್ಥೆಗಳಲ್ಲ: ಸುಪ್ರೀಂ ಕೋರ್ಟ್ ಖಡಕ್ ಎಚ್ಚರಿಕೆ ಪಿಎಸ್‌ಐಗೆ ಕಪಾಳಮೋಕ್ಷ: ಎಸ್‌ಐ ಸವಿತಾ ಪಾಟೀಲ್ ಬಳಿ ವಿಡಿಯೋ ಮೂಲಕ ಕ್ಷಮೆ ಕೋರಿದ ಶಾಸಕ ಸುರೇಶ್ ಗೌಡ ಪುತ್ರಿ ಐಶ್ವರ್ಯಾ ಗೌಡಸರ್ಕಾರಿ ಬಸ್ ಗ್ಲಾಸ್ ಒಡೆದು ಕರ್ತವ್ಯಕ್ಕೆ ಅಡ್ಡಿ; 15 ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ಕಾಡು ಹಂದಿ ಬೇಟೆ: ವನ್ಯಜೀವಿ ಕಾಯ್ದೆಯಡಿ ಪೊಲೀಸರೇ ನೇರ ದೂರು ದಾಖಲಿಸುವುದು ಕಾನೂನುಬಾಹಿರ-ಹೈಕೋರ್ಟ್ಬೆಳ್ಳಂಬೆಳಗ್ಗೆ ಲೋಕಾಯುಕ್ತ ಕದನ: 8 ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ200 ರೂ. ಆಸೆಗೆ ಬಿದ್ದು 9.30 ಲಕ್ಷ ರೂ. ಕಳೆದುಕೊಂಡ ಯುವತಿ: 'ವರ್ಕ್ ಫ್ರಮ್ ಹೋಮ್' ಸೈಬರ್ ವಂಚನೆ ಬಯಲುಸಾಮಾನ್ಯ ಜನರಿಗೆ ಬೆಲೆ ಏರಿಕೆ ಬಿಸಿ: ದಿಢೀರ್ ಹೆಚ್ಚಾದ ಅಕ್ಕಿ ದರ, ಒಂದೇ ತಿಂಗಳಲ್ಲಿ ಎರಡನೇ ಬಾರಿ ಏರಿಕೆಉತ್ತರ ಪ್ರದೇಶ, ಉತ್ತರಾಖಂಡ ರಾಜ್ಯಸಭಾ ಚುನಾವಣೆ ಹಾಗೂ ಬಂಗಾಳ ಉಪಚುನಾವಣೆ ಘೋಷಣೆ ಸಚಿವ ಶಿವಲಿಂಗೇಗೌಡರ ವಿವಾದಾತ್ಮಕ ಹೇಳಿಕೆ: ಲೋಕಾಯುಕ್ತಕ್ಕೆ ದೂರು ದಾಖಲು, ರಾಜೀನಾಮೆಗೆ ಆಗ್ರಹಬೆಂಗಳೂರು ವಿಮಾನ ನಿಲ್ದಾಣದಲ್ಲಿ 28 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಹಾಗೂ ಚಿನ್ನ ವಶ, 6 ಜನರ ಬಂಧನ