E-PAPER
24 Nov 2026, 03:53:59 AM|
Gold₹12536/gGold24K ₹12,536/g - 22K ₹11,481/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
International News

 “ಬೆಂಗಳೂರು” ಈ ನೆಲಮೂಲದ ಹೆಗ್ಗುರುತು, ಕನ್ನಡಿಗರ ಪ್ರತಿಧ್ವನಿ 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಿದ್ದರಾಮಯ್ಯ
ಅವರೇ ಬೆಂಗಳೂರು ವಿಶ್ವವಿದ್ಯಾಲಯ ನಿಮ್ಮ ಮನೆತನದ  ಆಸ್ತಿಯಲ್ಲ. ಕಾಂಗ್ರೆಸ್ ಪಕ್ಷದ ಆಸ್ತಿಯೂ ಅಲ್ಲ ಎಂದು ಜೆಡಿಎಸ್ ಹರಿಹಾಯ್ದಿದೆ. “ಬೆಂಗಳೂರು” ಎಂಬುದು ಈ ನೆಲಮೂಲದ ಹೆಗ್ಗುರುತು. ಸಮಸ್ತ ಕನ್ನಡಿಗರ ಹೆಮ್ಮೆ. ಹಾಗೂ ಕನ್ನಡಿಗರ ಪ್ರತಿಧ್ವನಿ. ಬೆಂಗಳೂರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತಿ ಪಡೆದ ನಗರ.

ಬೆಂಗಳೂರು ಎಂಬುದೇ ಒಂದು ವಿಶ್ವ ಪ್ರಸಿದ್ಧ ಬ್ರ್ಯಾಂಡ್. ಅದೇ ಬೆಂಗಳೂರು ಹೆಸರಿಗೆ ಇರುವ  ಶಕ್ತಿ ಎಂದು ಜೆಡಿಎಸ್ ತಿಳಿಸಿದೆ. ನಮಗೆ ಡಾ.ಮನಮೋಹನ್ ಸಿಂಗ್ ಅವರ ಮೇಲೆ ಅಪಾರವಾದ ಗೌರವವಿದೆ. ಆದರೆ “ಬೆಂಗಳೂರು ನಗರ ವಿವಿ”ಗೆ ಪರ್ಯಾಯವಾಗಿ ಬೇರೆ ಯಾವುದೇ ಹೆಸರಿಡಲು ತೀವ್ರ ವಿರೋಧವಿದೆ. ಈ ವಿಚಾರದಲ್ಲಿ ಕರ್ನಾಟಕದ ಜನತೆಯೂ ಸಹ  ಕರ್ನಾಟಕ ಕಾಂಗ್ರೆಸ್ ಸರ್ಕಾರದ ಈ ನಿರ್ಧಾರವನ್ನು ಒಪ್ಪುವುದಿಲ್ಲ ಎಂದು ಜೆಡಿಎಸ್ ತಿಳಿಸಿದೆ.

ರಾಜ್ಯದಲ್ಲಿ ಕನ್ನಡ ಭಾಷೆ, ನೆಲ, ಜಲ ನಾಡಿಗಾಗಿ ಹೋರಾಡಿದ ಸಾವಿರಾರು ಕನ್ನಡಿಗ ಸಾಧಕರು ಇದ್ದಾರೆ. ಹಲವು ಕ್ಷೇತ್ರಗಳಲ್ಲಿ ಸಾಧನೆ ಮಾಡಿ ಕರ್ನಾಟಕಕ್ಕೆ ಕೀರ್ತಿ ತಂದ ಮಹನೀಯರಿದ್ದಾರೆ. ಆ ಕನ್ನಡಿಗರು ಕಾಂಗ್ರೆಸ್ಸಿಗರ ಕಣ್ಣಿಗೆ ಬೀಳಲಿಲ್ಲವೇ? ಎಂದು ಜೆಡಿಎಸ್ ಖಾರವಾಗಿ ಪ್ರಶ್ನಿಸಿದೆ.

 ಸಿದ್ದರಾಮಯ್ಯನವರೇ  ಅಷ್ಟು ಅಭಿಮಾನ, ಗೌರವ ಇದ್ದರೆ ಮೈಸೂರಿನಲ್ಲಿ ನಿರ್ಮಿಸುತ್ತಿರುವ ನಿಮ್ಮ ಹೊಸ ಮನೆಗೆ ಮನಮೋಹನ್ ಸಿಂಗ್ ನಿವಾಸ ಎಂದು ಹೆಸರಿಟ್ಟು ಕೊಳ್ಳಿ. ನಿಮ್ಮ ಸೊಸೆಯ ಒಡೆತನದಲ್ಲಿರುವ ಬಹುಕೋಟಿ ಮೌಲ್ಯದ ಐಶಾರಾಮಿ ಕ್ಲಬ್ ಗೆ ಮರು ನಾಮಕರಣ ಮಾಡಿಕೊಳ್ಳಿ ಎಂದು ಜೆಡಿಎಸ್ ತಿರುಗೇಟು ನೀಡಿದೆ.

ದೆಹಲಿಯ ಹೊಸದಾಗಿ ನಿರ್ಮಿಸಿದ ಕಾಂಗ್ರೆಸ್‌ಕಚೇರಿಗೆ "ಇಂದಿರಾ ಭವನ"‌ಎಂದು ಹೆಸರಿಟ್ಟಿರಿ. ಅದಕ್ಕೆ ಮನಮೋಹನ್‌ಸಿಂಗ್‌ಹೆಸರಿಡಲು ಇಟಲಿ ಕಾಂಗ್ರೆಸ್ ನ ಆಪ್ತರ ಗುಂಪು ಒಪ್ಪಲಿಲ್ಲ ಎಂಬುದು ತಮಗೆ ತಿಳಿದಿರುವ ವಿಷಯ. ಆದರೆ ಕರ್ನಾಟಕದಲ್ಲಿ ಕಾಂಗ್ರೆಸ್ ನೇತೃತ್ವದ ಆಡಳಿತ ವಿರುವ ಕಾರಣ "ಗುಲಾಮಿ ಕಾಂಗ್ರೆಸ್‌" ನಾಯಕರು, ಬೆಂಗಳೂರಿನಲ್ಲಿ ಬೇಳೆ ಬೇಯಿಸಿಕೊಳ್ಳುತ್ತೀರಿ ಎಂದು ಜೆಡಿಎಸ್ ವಾಗ್ದಾಳಿ ಮಾಡಿದೆ.

ಕೆಲ ತಿಂಗಳ ಹಿಂದಷ್ಟೆ ಬೆಂಗಳೂರಿನಲ್ಲಿ ರಾಜೀವ್ ಗಾಂಧಿ ಕಂಚಿನ ಪ್ರತಿಮೆ ಅನಾವರಣಗೊಳಿಸಲಾಗಿತ್ತು. ಈಗ ಬೆಂಗಳೂರು ವಿವಿಗೆ ಮನಮೋಹನ್‌ಸಿಂಗ್‌ಹೆಸರು ನಾಮಕರಣ ಮಾಡುವುದಾಗಿ ಘೋಷಿಸಿದ್ದೀರಿ. ಹೈಕಮಾಂಡ್‌ಗುಲಾಮಗಿರಿಗೆ ಸದಾ “ಸಿದ್ಧ”ರಾಮಯ್ಯ ಎಂದು ಜೆಡಿಎಸ್ ಟೀಕಿಸಿದೆ.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೂರು ಕರಡಿಗಳೊಂದಿಗೆ ಹೋರಾಡಿ ಪ್ರಾಣ ಉಳಿಸಿಕೊಂಡ ರೈತ; ತಲೆಗೆ ಗಂಭೀರ ಗಾಯ, ಸ್ಥಿತಿ ಚಿಂತಾಜನಕ!ಹಿರಿಯೂರಿನಲ್ಲಿ ಪುಂಗಿ ಊದಿ ಹೋದ ಸಿಎಂ: ಗೋವಿಂದ ಕಾರಜೋಳ ಕಿಡಿಸಂಭ್ರದಿಂದ ನಡೆದ ತುಳಸಿ ಹಬ್ಬದ ಆಚರಣೆಭೀಕರ ರಸ್ತೆ ಅಪಘಾತ: ದೇಗುಲ ದರ್ಶನ ಮುಗಿಸಿ ಮರಳುತ್ತಿದ್ದ ಒಂದೇ ಕುಟುಂಬದ 9 ಮಂದಿ ದುರ್ಮರಣಹಿರಿಯೂರು ಉಪಚುನಾವಣೆ: ಅಮಿತ್ ಶಾ ಅಂಗಳಕ್ಕೆ ಅಭ್ಯರ್ಥಿ ಆಯ್ಕೆ ಚೆಂಡುಡಿ.ಕೆ. ಶಿವಕುಮಾರ್ ಔತಣಕೂಟ ವಿವಾದ: ಬಿ.ವೈ ವಿಜಯೇಂದ್ರ ಅಸಮಾಧಾನಕ್ಕೆ ಜನಾರ್ದನ ರೆಡ್ಡಿ ತಿರುಗೇಟುಭಾರತ್ ಜೋಡೋ ಯೋಜನೆಯಲ್ಲಿ ಪಕ್ಷಪಾತ ಆರೋಪ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ6ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ: ಪ್ರತಿಭಟನೆ ಮತ್ತಷ್ಟು ತೀವ್ರಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣ ಕಡ್ಡಾಯ ಜಾಮೀನಿಗೆ ಹೈಕೋರ್ಟ್ ಅಸ್ತು!ರೌಡಿಗಳಿಗೆ ಖಾಕಿ ಶಾಕ್: 30ಕ್ಕೂ ಹೆಚ್ಚು ಕಡೆ ಏಕಕಾಲಕ್ಕೆ ದಾಳಿ, ಆರ್ಥಿಕ ಮೂಲಗಳಿಗೂ ಕತ್ತರಿ!