Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
International News

ಹಿಂದೂ ಯುವಕನನ್ನು ಕ್ರೂರವಾಗಿ ಕೊಂದ ಬಾಂಗ್ಲಾ

ಚಂದ್ರವಳ್ಳಿ ನ್ಯೂಸ್, ಢಾಕಾ:
ಬಾಂಗ್ಲಾದೇಶದ ಮೈಮೆನ್ಸಿಂಗ್ ಜಿಲ್ಲೆಯಲ್ಲಿ ಗುಂಪೊಂದು ಧರ್ಮನಿಂದೆಯ ಆರೋಪದ ಮೇಲೆ ಹಿಂದೂ ಯುವಕನನ್ನು ಕ್ರೂರವಾಗಿ ಕೊಲ್ಲಲಾಗಿದೆ. ಮೃತ ವ್ಯಕ್ತಿಯನ್ನು ದೀಪು ಚಂದ್ರ ದಾಸ್ ಎಂದು ಗುರುತಿಸಲಾಗಿದ್ದು, ಭಲುಕಾ ಉಪ ಜಿಲ್ಲೆಯ ದುಬಾಲಿಯಾ ಪಾರಾ ಪ್ರದೇಶದಲ್ಲಿ ಜವಳಿ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು.

ಭೀಕರ ಘಟನೆಯಲ್ಲಿ, ಗುಂಪೊಂದು ದೀಪು ಚಂದ್ರ ಅವರನ್ನು ಮರಕ್ಕೆ ಕಟ್ಟಿ ಥಳಿಸಿ ಕೊಲ್ಲುವ ಮೂಲಕ ಬಾಂಗ್ಲಾದೇಶದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಹಿಂಸಾಚಾರ ಮತ್ತು ಪ್ರತಿಭಟನೆಗಳ ಮಧ್ಯೆ, ಮೂಲಭೂತವಾದದ ಭಯಾನಕ ಮುಖ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ.


ವಿಪಕ್ಷ ನಾಯಕ ಷರೀಫ್ ಉಸ್ಮಾನ್ ಹಾದಿ ಕೊಲೆ ಬಳಿಕ ನಂತರ ದೇಶಾದ್ಯಂತ ವ್ಯಾಪಕ ಹಿಂಸಾಚಾರ ಮತ್ತು ಪ್ರತಿಭಟನೆಗಳು ನಡೆಯುತ್ತಿರುವಾಗಲೇ ಈ ಘಟನೆ ನಡೆದಿದೆ.

ಪೊಲೀಸರ ಪ್ರಕಾರ, ಗುರುವಾರ ರಾತ್ರಿ 9 ಗಂಟೆ ಸುಮಾರಿಗೆ ಸ್ಥಳೀಯರ ಗುಂಪೊಂದು ಪ್ರವಾದಿ ಮುಹಮ್ಮದ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ಅವರ ಮೇಲೆ ಹಲ್ಲೆ ನಡೆಸಿದೆ.


ಹೊಡೆದು ಕೊಂದ ಜನ:
ಗುಂಪು ದೀಪು ಚಂದ್ರ ದಾಸ್ ಅವರನ್ನು ಹೊಡೆದು ಕೊಂದು, ನಂತರ ಅವರ ದೇಹವನ್ನು ಮರಕ್ಕೆ ಕಟ್ಟಿ ಬೆಂಕಿ ಹಚ್ಚಿದೆ ಎಂದು ಆರೋಪಿಸಲಾಗಿದೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಸ್ಥಿತಿ ನಿಯಂತ್ರಣಕ್ಕೆ ತೆಗೆದುಕೊಂಡು, ಶವವನ್ನು ವಶಪಡಿಸಿಕೊಂಡಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಮೈಮೆನ್ಸಿಂಗ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕಳುಹಿಸಲಾಗಿದೆ.

ಪ್ರಕರಣದಲ್ಲಿ ಇದುವರೆಗೆ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ. ಮೃತರ ಕುಟುಂಬವನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿದ್ದೇವೆ ಮತ್ತು ದೂರು ಬಂದ ನಂತರ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಂದುವರೆದ ಪ್ರತಿಭಟನೆಗಳು:
ಬಾಂಗ್ಲಾದೇಶದಲ್ಲಿ ಷರೀಫ್ ಉಸ್ಮಾನ್ ಹಾದಿ ಅವರ ಮರಣದ ನಂತರ ಹಲವಾರು ಭಾಗಗಳಲ್ಲಿ ಹಿಂಸಾತ್ಮಕ ಪ್ರತಿಭಟನೆಗಳು ನಡೆಯುತ್ತಿರುವ ಸಮಯದಲ್ಲಿ ಈ ಘಟನೆ ನಡೆದಿದೆ.


ಪ್ರತಿಭಟನಾಕಾರರು ಪತ್ರಿಕಾ ಕಚೇರಿಗಳು, ಅವಾಮಿ ಲೀಗ್ ನಾಯಕರ ಮನೆಗಳು ಮತ್ತು ಐತಿಹಾಸಿಕ ಸ್ಥಳಗಳನ್ನು ಗುರಿಯಾಗಿಸಿಕೊಂಡಿದ್ದಾರೆ. ಢಾಕಾ ಮತ್ತು ಚಿತ್ತಗಾಂಗ್‌ನಲ್ಲಿಯೂ ಭಾರತ ವಿರೋಧಿ ಘೋಷಣೆಗಳನ್ನು ಕೂಗಲಾಯಿತು ಮತ್ತು ಭಾರತೀಯ ರಾಜತಾಂತ್ರಿಕ ಆವರಣಗಳ ಮೇಲೆ ಕಲ್ಲು ತೂರಾಟ ನಡೆಸಲಾಯಿತು.



Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚಿತ್ರದುರ್ಗ: 25,000 ರೂ. ಲಂಚ ಪಡೆಯುತ್ತಿದ್ದ ಉಪವಿಭಾಗಾಧಿಕಾರಿ ಕಚೇರಿಯ ಪ್ರಥಮ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆಪಶ್ಚಿಮಘಟ್ಟ ಸಂರಕ್ಷಣೆ: ಕಸ್ತೂರಿ ರಂಗನ್ ವರದಿ ಸ್ಯಾಟಲೈಟ್ ಮ್ಯಾಪಿಂಗ್ ಒಪ್ಪಲು ಸಾಧ್ಯವಿಲ್ಲ; ಬಿ.ಕೆ.ಹರಿಪ್ರಸಾದ್ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶಶಾಸಕ ಎಸ್. ಸುರೇಶ್ ಕುಮಾರ್ ಅವರು "ಸಜ್ಜನ" ಎಂಬ ಮುಖವಾಡ ಧರಿಸಿದ ದುರ್ಜನಸರ್ಕಾರದ ಅನುದಾನಕ್ಕೆ ಕಾಯದೆ ಸ್ವಂತ ಖರ್ಚಿನಲ್ಲಿ ಕಾಲುವೆ ದುರಸ್ತಿಗೆ ಮುಂದಾದ ಎಚ್.ಡಿ. ರೇವಣ್ಣಹೈಕೋರ್ಟ್‌ನಿಂದ ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ ಎಸ್‌ಐಟಿ ತನಿಖೆಗೆ ಆದೇಶಆಲಮಟ್ಟಿ ಜಲಾಶಯ ಎತ್ತರ ಹೆಚ್ಚಳ: ಯುಕೆಪಿ ಹಂತ-3ರ ಭೂಸ್ವಾಧೀನ ಪ್ರಕ್ರಿಯೆಗೆ ಚುರುಕುವ್ಯಾಪಕ ಭ್ರಷ್ಟಾಚಾರ: ಕಾಮಗಾರಿಗಳ ಶ್ವೇತಪತ್ರ ಹೊರಡಿಸಲು ಆಂಜನೇಯ ಆಗ್ರಹ‘ಗೌರವಯುತ ಲಂಚ’: ಕಾಂಗ್ರೆಸ್ ಸರ್ಕಾರದ ಹೊಸ 'ಪ್ರಜಾಸೇವಾ ಶುಲ್ಕ' ಎಂದು ಆರ್. ಅಶೋಕ್ಸ್ವಪಕ್ಷೀಯರ ಆಕ್ರೋಶವೇ ಕಾಂಗ್ರೆಸ್ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿ: ಆರ್. ಅಶೋಕ್ ವಾಗ್ದಾಳಿ