Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
International News

ಬಾನು ಮುಷ್ತಾಕ್ ಬೂಕರ್ ಒದಗಿಸಿ ಕನ್ನಡದ ಕೀರ್ತಿ ಹೆಚ್ಚಿಸಿದ್ದಾರೆ-ಸಿಎಂ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಾಹಿತ್ಯಕ್ಕೆ ಸಮಾಜವನ್ನು ಬೆಸೆಯುವ ಶಕ್ತಿ ಇದೆ.  ಸಾಹಿತ್ಯದ ಮೂಲಕ ಸಮಾಜವನ್ನು ಒಗ್ಗೂಡಿಸಬೇಕೇ ಹೊರತು ವಿಭಜಿಸಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬ್ಯಾಂಕ್ವೆಂಟ್ ಹಾಲ್ ನಲ್ಲಿ ಆಯೋಜಿಸಿದ್ದ ಬುಕರ್ ಪ್ರಶಸ್ತಿ ಪುರಸ್ಕೃತ ಬಾನು ಮುಷ್ತಾಕ್ ಅವರ ಸರ್ಕಾರಿ ಅಭಿನಂದನಾ ಕಾರ್ಯಕ್ರಮದಲ್ಲಿ ಬಾನು ಅವರನ್ನು ಅಭಿನಂದಿಸಿ, ಸನ್ಮಾನಿಸಿ ಮಾತನಾಡಿದರು.

ಬಾನು ಮುಷ್ತಾಕ್ ಅವರು ನಮ್ಮ ಭಾಷೆಗೆ ಬೂಕರ್ ಒದಗಿಸಿಕೊಡುವ ಮೂಲಕ ಕನ್ನಡದ ಕೀರ್ತಿ ಹೆಚ್ಚಿಸಿದ್ದಾರೆ.  ಇದು ಇಡೀ ಕನ್ನಡ ಜಗತ್ತಿನ ಹೆಮ್ಮೆ‌ ಎಂದು ಮೆಚ್ಚುಗೆ ಸೂಚಿಸಿದರು.

ತಮ್ಮ ಕತೆಗಳ ಮೂಲಕ ಮತ್ತು ಅನುವಾದದ ಮೂಲಕ ಕನ್ನಡಕ್ಕೆ ಕೀರ್ತಿ ತಂದ ಬಾನು ಮುಷ್ತಾಕ್ , ದೀಪಾ ಬಾಸ್ತಿ ಅವರಿಗೆ ತಲಾ 10 ಲಕ್ಷ ಪುರಸ್ಕಾರ ನೀಡಲಾಗುವುದು ಎಂದು ಘೋಷಿಸಿದರು.

ಬಾನು ಅವರ ಕತೆಗಳನ್ನು ಇಂಗ್ಲಿಷ್ ಗೆ ಪ್ರಕಟಿಸಲು, ಅನುವಾದಕ್ಕೆ ಸರ್ಕಾರದ ನೆರವು ನೀಡಲಾಗುವುದು ಎಂದು ತಿಳಿಸಿದರು.
ಪತ್ರಕರ್ತೆಯಾಗಿ
, ಲೇಖಕಿಯಾಗಿ, ವಕೀಲರಾಗಿ, ಹೋರಾಟಗಾರ್ತಿಯಾಗಿ ಸಮಾಜದಲ್ಲಿ ಗುರುತಿಸಿಕೊಂಡಿರುವುದೇ ಬಾನು ಮುಷ್ತಾಕ್ ಅವರ ಬರವಣಿಗೆಯ ಶಕ್ತಿ ಎಂದು ವಿಶ್ಲೇಷಿಸಿದರು.

ಲಂಕೇಶ್ ಪತ್ರಿಕೆಯಲ್ಲಿ ಪತ್ರಕರ್ತೆಯಾಗಿ ಬರೆಯುತ್ತಲೇ, ವಕೀಲೆಯಾಗಿ ಬಡವರ ಪರ ವಕಾಲತ್ತು ವಹಿಸುತ್ತಾ ರಾಜ್ಯೋತ್ಸವ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿಗಳು ಲಭಿಸಿರುವುದೇ ಬಾನು ಮುಷ್ತಾಕ್ ಅವರ ಬರವಣಿಗೆಗಳಲ್ಲಿ ಸಮಾಜಮುಖಿ ಸತ್ವ ಇದೆ ಎನ್ನುವುದಕ್ಕೆ ಸಾಕ್ಷಿ ಎಂದರು.

ಮುಸ್ಲಿಂ ಸಮುದಾಯದ ಹೆಣ್ಣು‌ಮಕ್ಕಳ ಧ್ವನಿಯಾಗಿ ಮೌಢ್ಯ ವಿರೋಧಿಸಿ ಬರೆಯುವ ಪ್ರಗತಿಪರ ಎದೆಗಾರಿಕೆ ಬಾನು ಅವರಲ್ಲಿದೆ. ಸಾಹಿತ್ಯದ ಮೂಲಕ ಮಾನವೀಯ ಸಂದೇಶ ನೀಡುವ ಜವಾಬ್ದಾರಿ ಬಾನು ಮುಷ್ತಾಕ್ ಅವರು ನಿರ್ವಹಿಸಿದ್ದಾರೆ.

ಕವಿರಾಜಮಾರ್ಗದಲ್ಲಿ ಪರಧರ್ಮ ಮತ್ತು ಪರ ವಿಚಾರಗಳನ್ನು ಸಹಾನುಭೂತಿಯಿಂದ ನೋಡುಬೇಕು ಎಂದು ಕರೆ ನೀಡಿದ್ದರೆ, ಆದಿಕವಿ ಪಂಪ ಅವರು ಮನುಷ್ಯ ಜಾತಿ ತಾನೊಂದೇ ವಲಂ ಎಂದಿದ್ದಾರೆ, ಬಸವಣ್ಣನವರು "ಇವ ನಮ್ಮವ" ಎಂದು ಹೇಳಿದ್ದಾರೆ. ಹೆಣ್ಣಿನ ಧ್ವನಿಯಾದ ಅಕ್ಕಮಹಾದೇವಿ ಅವರೂ ಇದನ್ನೇ ಧ್ವನಿಸಿದ್ದಾರೆ. ಇವರೆಲ್ಲರ ಆಶಯಗಳ ಮುಂದುವರಿಕೆಯಾಗಿ ಬಾನು ಮುಷ್ತಾಕ್ ಕೆಲಸ ಮಾಡಿದ್ದಾರೆ ಎಂದರು.

 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚಿತ್ರದುರ್ಗ: 25,000 ರೂ. ಲಂಚ ಪಡೆಯುತ್ತಿದ್ದ ಉಪವಿಭಾಗಾಧಿಕಾರಿ ಕಚೇರಿಯ ಪ್ರಥಮ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆಪಶ್ಚಿಮಘಟ್ಟ ಸಂರಕ್ಷಣೆ: ಕಸ್ತೂರಿ ರಂಗನ್ ವರದಿ ಸ್ಯಾಟಲೈಟ್ ಮ್ಯಾಪಿಂಗ್ ಒಪ್ಪಲು ಸಾಧ್ಯವಿಲ್ಲ; ಬಿ.ಕೆ.ಹರಿಪ್ರಸಾದ್ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶಶಾಸಕ ಎಸ್. ಸುರೇಶ್ ಕುಮಾರ್ ಅವರು "ಸಜ್ಜನ" ಎಂಬ ಮುಖವಾಡ ಧರಿಸಿದ ದುರ್ಜನಸರ್ಕಾರದ ಅನುದಾನಕ್ಕೆ ಕಾಯದೆ ಸ್ವಂತ ಖರ್ಚಿನಲ್ಲಿ ಕಾಲುವೆ ದುರಸ್ತಿಗೆ ಮುಂದಾದ ಎಚ್.ಡಿ. ರೇವಣ್ಣಹೈಕೋರ್ಟ್‌ನಿಂದ ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ ಎಸ್‌ಐಟಿ ತನಿಖೆಗೆ ಆದೇಶಆಲಮಟ್ಟಿ ಜಲಾಶಯ ಎತ್ತರ ಹೆಚ್ಚಳ: ಯುಕೆಪಿ ಹಂತ-3ರ ಭೂಸ್ವಾಧೀನ ಪ್ರಕ್ರಿಯೆಗೆ ಚುರುಕುವ್ಯಾಪಕ ಭ್ರಷ್ಟಾಚಾರ: ಕಾಮಗಾರಿಗಳ ಶ್ವೇತಪತ್ರ ಹೊರಡಿಸಲು ಆಂಜನೇಯ ಆಗ್ರಹ‘ಗೌರವಯುತ ಲಂಚ’: ಕಾಂಗ್ರೆಸ್ ಸರ್ಕಾರದ ಹೊಸ 'ಪ್ರಜಾಸೇವಾ ಶುಲ್ಕ' ಎಂದು ಆರ್. ಅಶೋಕ್ಸ್ವಪಕ್ಷೀಯರ ಆಕ್ರೋಶವೇ ಕಾಂಗ್ರೆಸ್ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿ: ಆರ್. ಅಶೋಕ್ ವಾಗ್ದಾಳಿ