E-PAPER
23 Nov 2026, 06:46:17 AM|
Gold₹12413/gGold24K ₹12,413/g - 22K ₹11,369/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಅಂಕ ಕಡಿತಕ್ಕೆ ಬರಗೂರು ರಾಮಚಂದ್ರಪ್ಪ ಆಕ್ಷೇಪ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕನ್ನಡ ಸೇರಿದಂತೆ ಎಸ್‌ಎಸ್‌ಎಲ್‌ಸಿ ಪ್ರಥಮ ಭಾಷಾ ಪರೀಕ್ಷೆಯ ಅಂಕವನ್ನು
125ರ ಬದಲು 100ಕ್ಕೆ ಸೀಮಿತಗೊಳಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಮುಂದಾಗಿದೆ.


ಸಾಹಿತಿ ಬರಗೂರು ರಾಮಚಂದ್ರಪ್ಪ ಅವರು ಅಂಕ ಕಡಿತಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ ಈ ನಿರ್ಧಾರ ಕೈಬಿಡುವಂತೆ ಒತ್ತಾಯಿಸಿದ್ದಾರೆ.
ಅಲ್ಲದೆ ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ಪತ್ರ ಬರೆದು
100ಕ್ಕೆ ಅಂಕಗಳನ್ನ ಇಳಿಕೆ ಮಾಡುವುದು ಬೇಡವೆಂದು ಮನವಿ ಮಾಡಿದ್ದಾರೆ.


ಪತ್ರದ ಸಾರಾಂಶ-
ಕನ್ನಡ ಸೇರಿದಂತೆ ಎಸ್​​ಎಸ್​ಎಲ್​ಸಿ ಪ್ರಥಮ ಭಾಷಾ ಪರೀಕ್ಷೆಯ ಅಂಕಗಳನ್ನು
125ರ ಬದಲು 100ಕ್ಕೆ ಸೀಮಿತಗೊಳಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಿರ್ಧರಿಸಿದೆ ಎಂಬ ಸುದ್ದಿಯನ್ನು ಪತ್ರಿಕೆಗಳಲ್ಲಿ ಓದಿ ಅಚ್ಚರಿ ಆಯಿತು.


ಈ ನಿರ್ಧಾರವು ತೀವ್ರ ಖಂಡನೀಯ. ಕನ್ನಡ ಸೇರಿದಂತೆ ಪ್ರಥಮ ಭಾಷೆಗಳಿಗೆ 125 ಅಂಕಗಳನ್ನು ನಿಗದಿ ಪಡಿಸಿದ ತೀರ್ಮಾನವು ಗೋಕಾಕ್ ಚಳವಳಿಯೆಂದೇ ಪ್ರಸಿದ್ಧವಾದ ಕನ್ನಡಪರ ಆಂದೋಲನದ ಫಲವಾಗಿ ಮೂಡಿ ಬಂದಿತ್ತು. ಕರ್ನಾಟಕ ಸಾಹಿತಿಗಳು, ಕಲಾವಿದರು, ಹೋರಾಟಗಾರರು ನಡೆಸುತ್ತಿದ್ದ ಈ ಚಳುವಳಿಗೆ ಡಾ. ರಾಜಕುಮಾರ್ ಅವರ ನೇತೃತ್ವ ದೊರೆತು ರಾಜ್ಯಾದ್ಯಂತ ತೀವ್ರವಾಗಿ ವ್ಯಾಪಿಸಿದ ಫಲವಾಗಿ ಅಂದಿನ ಶ್ರೀ ಗುಂಡೂರಾವ್ ನೇತೃತ್ವದ ಸರ್ಕಾರವು ಕನ್ನಡ ಪ್ರಥಮ ಭಾಷೆಯನ್ನು ಒಳಗೊಂಡಂತೆ ಮೂರು ಭಾಷೆಗಳಿಗೂ ತಲಾ 100 ಅಂಕ ನಿಗದಿ ಪಡಿಸುವ ಸೂತ್ರವನ್ನು ರೂಪಿಸಿತ್ತು.

ಈ ಸೂತ್ರಕ್ಕೆ ತೀವ್ರ ವಿರೋಧ ವ್ಯಕ್ತವಾಗಿ ದೀರ್ಘ ಚರ್ಚೆ, ಚಿಂತನೆಗಳ ನಂತರ ಕನ್ನಡವೂ ಸೇರಿದಂತೆ ಪ್ರಥಮ ಭಾಷೆಗಳಿಗೆ 125 ಅಂಕಗಳನ್ನು ನಿಗದಿ ಮಾಡಲಾಯಿತು. ಆಗ ಚಳುವಳಿಯ ಫಲವಾಗಿ ರೂಪುಗೊಂಡ ಈ ಸರ್ವ ಸಮ್ಮತ ನಿರ್ಧಾರವನ್ನು ಈಗ ಬದಲಾಯಿಸಿ 100 ಅಂಕಗಳನ್ನು ನಿಗದಿ ಮಾಡುವುದು ಯಾವ ತರ್ಕ? ಇದರ ಹಿಂದೆ ತರ್ಕವೂ ಇಲ್ಲ. ತತ್ವವೂ ಇಲ್ಲ.

ಇದು ಕನ್ನಡವೂ ಸೇರಿದಂತೆ ಮಾತೃ ಭಾಷೆಗಳ ಮಹತ್ವವನ್ನು ಕುಗ್ಗಿಸುವ ಕೆಲಸ. ಕನ್ನಡ ವಿರೋಧಿ ನಿರ್ಧಾರ. ಈ ನಿರ್ಧಾರವನ್ನು ಕೂಡಲೇ ವಾಪಸ್ ಪಡೆಯಲು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಬರಗೂರು ರಾಮಚಂದ್ರಪ್ಪ ಅವರು ಬರೆದಿದ್ದಾರೆ ಎನ್ನಲಾದ ಪತ್ರ ಸಾರಾಂಶ ಇದಾಗಿದೆ.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೂರು ಕರಡಿಗಳೊಂದಿಗೆ ಹೋರಾಡಿ ಪ್ರಾಣ ಉಳಿಸಿಕೊಂಡ ರೈತ; ತಲೆಗೆ ಗಂಭೀರ ಗಾಯ, ಸ್ಥಿತಿ ಚಿಂತಾಜನಕ!ಹಿರಿಯೂರಿನಲ್ಲಿ ಪುಂಗಿ ಊದಿ ಹೋದ ಸಿಎಂ: ಗೋವಿಂದ ಕಾರಜೋಳ ಕಿಡಿಸಂಭ್ರದಿಂದ ನಡೆದ ತುಳಸಿ ಹಬ್ಬದ ಆಚರಣೆಭೀಕರ ರಸ್ತೆ ಅಪಘಾತ: ದೇಗುಲ ದರ್ಶನ ಮುಗಿಸಿ ಮರಳುತ್ತಿದ್ದ ಒಂದೇ ಕುಟುಂಬದ 9 ಮಂದಿ ದುರ್ಮರಣಹಿರಿಯೂರು ಉಪಚುನಾವಣೆ: ಅಮಿತ್ ಶಾ ಅಂಗಳಕ್ಕೆ ಅಭ್ಯರ್ಥಿ ಆಯ್ಕೆ ಚೆಂಡುಡಿ.ಕೆ. ಶಿವಕುಮಾರ್ ಔತಣಕೂಟ ವಿವಾದ: ಬಿ.ವೈ ವಿಜಯೇಂದ್ರ ಅಸಮಾಧಾನಕ್ಕೆ ಜನಾರ್ದನ ರೆಡ್ಡಿ ತಿರುಗೇಟುಭಾರತ್ ಜೋಡೋ ಯೋಜನೆಯಲ್ಲಿ ಪಕ್ಷಪಾತ ಆರೋಪ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ6ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ: ಪ್ರತಿಭಟನೆ ಮತ್ತಷ್ಟು ತೀವ್ರಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣ ಕಡ್ಡಾಯ ಜಾಮೀನಿಗೆ ಹೈಕೋರ್ಟ್ ಅಸ್ತು!ರೌಡಿಗಳಿಗೆ ಖಾಕಿ ಶಾಕ್: 30ಕ್ಕೂ ಹೆಚ್ಚು ಕಡೆ ಏಕಕಾಲಕ್ಕೆ ದಾಳಿ, ಆರ್ಥಿಕ ಮೂಲಗಳಿಗೂ ಕತ್ತರಿ!