E-PAPER
24 Nov 2026, 08:43:07 AM|
Gold₹12536/gGold24K ₹12,536/g - 22K ₹11,481/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಗೌನಹಳ್ಳಿಗೆ ಹರಿದ ಭದ್ರಾ ನೀರು, ಸಂಭ್ರಮದಿಂದ ಗಂಗಾಪೂಜೆ ಸಲ್ಲಿಸಿದ ಗ್ರಾಮಸ್ಥರು!

ಚಂದ್ರವಳ್ಳಿ ನ್ಯೂಸ್, ಗೌನಹಳ್ಳಿ​:
​ಬರದ ನಾಡಿನ ಸಮಸ್ಯೆಯಿಂದ ತತ್ತರಿಸಿದ್ದ ಹಿರಿಯೂರು ತಾಲೂಕಿನ ರೈತರಿಗೆ ಇದೀಗ ಭದ್ರಾ ಮೇಲ್ದಂಡೆ ಯೋಜನೆಯ ನೀರು ತಲುಪಿದ್ದು, ಐಮಂಗಲ ಹೋಬಳಿಯ ಗೌನಹಳ್ಳಿಯಲ್ಲಿ ಹರಿಯುತ್ತಿರುವ ನೀರನ್ನು ಕಂಡು ಗ್ರಾಮಸ್ಥರು ಗಂಗಾಪೂಜೆ ಹಾಗೂ ಬಾಗಿನ ಅರ್ಪಿಸಿ ಅದ್ಧೂರಿಯಾಗಿ ಸಂಭ್ರಮಿಸಿದ್ದಾರೆ.

​​ಸಂಭ್ರಮಾಚರಣೆ: ಗೌನಹಳ್ಳಿ, ಕೆ.ಸಿ. ರೊಪ್ಪ ಹಾಗೂ ಕಲ್ಲಹಟ್ಟಿ ಗ್ರಾಮಸ್ಥರು ಚಾನಲ್‌ನಲ್ಲಿ ಹರಿಯುವ ನೀರನ್ನು ಕಂಡು ಮೂಕವಿಸ್ಮಿತರಾಗಿ, ಗಂಗಾಪೂಜೆ ನೆರವೇರಿಸಿದರು.

​ಸಣ್ಣಚಿತ್ತಯ್ಯ ಅವರ ಭಾವುಕ ನುಡಿ: ವಿಶ್ವೇಶ್ವರಯ್ಯ ಜಲ ನಿಗಮದ ನಿವೃತ್ತ ವ್ಯವಸ್ಥಾಪಕ ನಿರ್ದೇಶಕ ಸಣ್ಣಚಿತ್ತಯ್ಯ ಅವರು ಯೋಜನೆ ಸಾಕಾರಗೊಂಡಿದ್ದಕ್ಕೆ ಭಾವುಕರಾದರು. ಮುಂದಿನ ಸೋಮವಾರದೊಳಗೆ ಐಮಂಗಲದ ಆದಿರಾಳು, ಹುಲಿತೊಟ್ಟಲು ಹಾಗೂ ತಾವಂದಿ ಕೆರೆಗಳು ಸೇರಿದಂತೆ ಸುತ್ತಮುತ್ತಲಿನ ಹಲವು ಕೆರೆಗಳಿಗೆ ನೀರು ಹರಿಸಲಾಗುವುದು ಎಂದು ಭರವಸೆ ನೀಡಿದರು.

​ಮುಂದಿನ ದೂರದೃಷ್ಟಿ: ಹಿರಿಯೂರು ಭಾಗವು ಮಂಡ್ಯದಂತೆ ‘ಮಿನಿ ನೀರಾವರಿ ಪ್ರಾಂತ್ಯ’ವಾಗಿ ಬೆಳೆಯಲಿದ್ದು, ಈ ಯೋಜನೆಯಿಂದ ಐಮಂಗಲ ಹೋಬಳಿ ಸಾಕಷ್ಟು ಅಭಿವೃದ್ಧಿ ಹೊಂದಲಿದೆ ಎಂದರು. ಇದೇ ವೇಳೆ ಹಿರಿಯೂರು ಉಪಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ದೊರೆಯುವ ನಿರೀಕ್ಷೆಯಿದೆ ಎಂದೂ ತಿಳಿಸಿದರು.

​ಧನ್ಯವಾದ ಅರ್ಪಣೆ: ಹೋರಾಟಗಾರ ಯಶವಂತ ರಾಜ್ ಹಾಗೂ ಐಮಂಗಲ ನೀರಾವರಿ ಹೋರಾಟ ಸಮಿತಿಯ ಪ್ರಮುಖರು ಈ ಯೋಜನೆಗೆ ಶ್ರಮಿಸಿದ ಎಲ್ಲರಿಗೂ ಮತ್ತು ಜಾಗ ನೀಡಿದ ರೈತರಿಗೆ ಕೃತಜ್ಞತೆ ಸಲ್ಲಿಸಿದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಾರಣಾಂತಿಕ ರಸ್ತೆ ಅಪಘಾತ ಪ್ರಕರಣ: ಇಬ್ಬರು ಆರೋಪಿಗಳಿಗೆ ಸಾದಾ ಶಿಕ್ಷೆ ಮತ್ತು ದಂಡ ವಿಧಿಸಿದ ನ್ಯಾಯಾಲಯಕುವೆಂಪು ಕಂಡ ಕ್ರಾಂತಿವೀರ, ಶಿವರುದ್ರಪ್ಪ ಮೆಚ್ಚಿದ ಮಹಾಚೇತನ! ಬಸವಣ್ಣನವರನ್ನು ಅಳೆಯುವ ಅರ್ಹತೆ ಯಾರಿಗಿದೆ?ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿ: 1:3 ಅನುಪಾತದಲ್ಲಿ ಅಭ್ಯರ್ಥಿಗಳ ಪಟ್ಟಿ ಪ್ರಕಟರಾಷ್ಟ್ರೀಯ ಮತದಾರರ ದಿನಾಚರಣೆ: ಜಿಲ್ಲಾಮಟ್ಟದ ಪ್ರಬಂಧ, ರಸಪ್ರಶ್ನೆ ಸ್ಪರ್ಧೆ ಆಯೋಜನೆಆರ್.ಆರ್. ನಗರದಲ್ಲಿ ರಾಜಕೀಯ ಬೆಳವಣಿಗೆ; ಮುನಿರತ್ನ ಆಪ್ತರು ಕಾಂಗ್ರೆಸ್ ಸೇರ್ಪಡೆರೇಣುಕಾಸ್ವಾಮಿ ಕೊಲೆ ಕೇಸ್: ಕೋರ್ಟ್‌ನಲ್ಲಿ ಉಲ್ಟಾ ಹೊಡೆದ ಪಟ್ಟಣಗೆರೆ ಶೆಡ್ ಗಾರ್ಡ್, ಪ್ರಾಸಿಕ್ಯೂಷನ್‌ಗೆ ಹಿನ್ನಡೆ!ಕಾಡಾನೆ ಸ್ಥಳಾಂತರಕ್ಕೆ ತೀವ್ರ ವಿರೋಧ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ನಯನಾ ಮೋಟಮ್ಮಏಷ್ಯಾ ಪವರ್ ಇಂಡೆಕ್ಸ್ 2026: 3ನೇ ಸ್ಥಾನ ಉಳಿಸಿಕೊಂಡ ಭಾರತ; ಪ್ರಾದೇಶಿಕ ನಾಯಕತ್ವದಲ್ಲಿ ಮೋದಿಗೆ 2ನೇ ಸ್ಥಾನಮುಖ್ಯಮಂತ್ರಿಗಳ ಮಾತಿನ ಮೇಲೆ ವಿಶ್ವಾಸವಿಡಿ: ಡಿಸಿಎಂ ಜಿ. ಪರಮೇಶ್ವರ್ಚೆಕ್ ಬೌನ್ಸ್ ಪ್ರಕರಣ: ಹೈಕೋರ್ಟ್ ಮಹತ್ವದ ತೀರ್ಪು