Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಸಮುದ್ರ ಕಳೆಯಿಂದ ಜೈವಿಕ ಇಂಧನ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಕೋಶ ಮತ್ತು ಅಣು ತಂತ್ರಜ್ಞಾನ  ಸಂಶೋಧನಾ
, ಅಭಿವೃದ್ಧಿ ಕೇಂದ್ರ(C-CAMP)ದ ಸಹಕಾರದ ಸ್ಟಾರ್ಟ್‌ಅಪ್ ಆದ ಸೀ6 ಎನರ್ಜಿ( Sea6 Energy ), ಸಮುದ್ರ ಕಳೆ ಜೀವರಾಶಿಗಳಿಂದ ಜೈವಿಕ ಇಂಧನ ಮತ್ತು ರಾಸಾಯನಿಕಗಳನ್ನು ಅಭಿವೃದ್ಧಿಪಡಿಸಲು HPCL ಗ್ರೀನ್ R&D ಸೆಂಟರ್ ( HPGRDC) ಜೊತೆ ಮಹತ್ವದ ಒಪ್ಪಂದವನ್ನು (MoU) ಮಾಡಿಕೊಂಡಿದೆ.

ಭಾರತವು ಭಾರೀ ಪ್ರಮಾಣದ ಕಚ್ಚಾ ತೈಲವನ್ನು (80%) ಬೇರೆ ದೇಶಗಳಿಂದ ಆಮದು ಮಾಡಿಕೊಳ್ಳುತ್ತಿದೆ. ಇದಕ್ಕೆ ಪರಿಹಾರವಾಗಿ ಶಾಶ್ವತ ಮತ್ತು ಪರಿಸರ ಸ್ನೇಹಿ ಇಂಧನ ಮೂಲಗಳನ್ನು ಬಳಕೆ ಮಾಡಲು ಹೊಸ ಮಾರ್ಗಗಳನ್ನು ಹುಡುಕುವ ಅಗತ್ಯವಿದೆ.

ಸೀ6 ಎನರ್ಜಿ( Sea6 Energy )ಯ ಸುಧಾರಿತ ಸಮುದ್ರ ಕಳೆ ಕೃಷಿ ವಿಧಾನವು ಕೃಷಿ ಭೂಮಿಯನ್ನು ಬಳಸದೆಯೇವ್ಯಾಪಕವಾಗಿ ವಿಸ್ತರಿಸಬಹುದಾದ ಮತ್ತು ಪರಿಸರ ಸ್ನೇಹಿ ಪರಿಹಾರವನ್ನು ಒದಗಿಸುತ್ತದೆ.

ಇದರಿಂದ ಪ್ರಕೃತಿಗೆ ಹಾನಿ ಮಾಡದ, ಮಾಲಿನ್ಯ ರಹಿತ ಇಂಧನದ  ಹೊಸ ಪರಿಹಾರಗಳತ್ತ ಕೆಲಸ ಮಾಡುವ ಸ್ಟಾರ್ಟಪ್‌ಗಳಿಗೆ ಸರ್ಕಾರದಿಂದ ಸಿಗುವ ಬಲವಾದ ಬೆಂಬಲವನ್ನು ಎತ್ತಿ ತೋರಿಸುತ್ತದೆ. ಕರ್ನಾಟಕ ಸರ್ಕಾರವು ಸ್ಟಾರ್ಟ್‌ಅಪ್‌ಗಳಿಗೆ ಅವಶ್ಯಕವಾದ ಸಂಪನ್ಮೂಲಗಳನ್ನು,

ಮಾರ್ಗದರ್ಶನವನ್ನು ಮತ್ತು ಬೆಂಬಲವನ್ನು ಒದಗಿಸಿ, ಅವುಗಳ ಬೆಳವಣಿಗೆಯನ್ನು ಉತ್ತೇಜಿಸಿ, ಮತ್ತು ಅವುಗಳ ಸಾಮರ್ಥ್ಯವನ್ನು ಹೆಚ್ಚುಗೊಳಿಸಲು ಸಹಾಯ ಮಾಡುವ ದೃಢಸಂಕಲ್ಪ ಕೈಕೊಂಡಿದೆ. ಈ ರೀತಿಯ ಬೆಂಬಲವು ರಾಷ್ಟ್ರೀಯ ಆರ್ಥಿಕ ಬೆಳವಣಿಗೆಯನ್ನುಉತ್ತೇಜಿಸಲಿದೆ. ಇದು ಕರ್ನಾಟಕ ಸರ್ಕಾರದ ಶಾಶ್ವತ ಇಂಧನ ಬಳಕೆಗೆ ಮತ್ತು ಪರಿಸರ ಸಂರಕ್ಷಣೆಗೆ ಬದ್ಧತೆಯನ್ನು ತೋರಿಸುತ್ತದೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿ ತಿಳಿಸಿದೆ.

 

 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು