Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಮತದಾರರ ಪಟ್ಟಿಯಿಂದ 50-60 ಲಕ್ಷ ಹೆಸರು ಕೈಬಿಡಲು ಬಿಜೆಪಿ-ಜೆಡಿಎಸ್ ಷಡ್ಯಂತ್ರ: ಸಿಎಂ ಶಿವಕುಮಾರ್

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದಲ್ಲಿ ಸುಮಾರು
50 ರಿಂದ 60 ಲಕ್ಷ ಮತದಾರರನ್ನು ಮತದಾರರ ಪಟ್ಟಿಯಿಂದ ಅಕ್ರಮವಾಗಿ ಕೈಬಿಡಲು ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ದೊಡ್ಡ ಮಟ್ಟದ ಷಡ್ಯಂತ್ರ ನಡೆಸಿವೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.

ಈ ಕುರಿತು ವಿಶೇಷ ಪತ್ರಿಕಾಗೋಷ್ಠಿ ನಡೆಸಿರುವ ಅವರು, ಯಾವ ರೀತಿಯಲ್ಲಿ ಈ ಅಕ್ರಮಗಳನ್ನು ನಡೆಸಲಾಗುತ್ತಿದೆ ಎಂಬುದನ್ನು ದಾಖಲೆ ಸಮೇತ ವಿವರಿಸಿದ್ದಾರೆ.

Advertisement

ಚುನಾವಣೆಯಲ್ಲಿ ನೇರವಾಗಿ ಗೆಲುವು ಸಾಧಿಸಲಾಗದೆ, ಚುನಾವಣಾ ಆಯೋಗದ 'ಫಾರಂ 7' (Form 7) ಅನ್ನು ದುರುಪಯೋಗಪಡಿಸಿಕೊಂಡು ಈ ಎಸ್ಐಆರ್ (SIR) ಅಕ್ರಮಕ್ಕೆ ಮುಂದಾಗಿದ್ದಾರೆ ಎಂದು ಅವರು ಕಿಡಿಕಾರಿದ್ದಾರೆ.

ಫಾರಂ 7 ರ ದುರುಪಯೋಗ: ಮತದಾರರ ಹೆಸರು, ವಿಳಾಸ, ಎಪಿಕ್ (EPIC) ಸಂಖ್ಯೆ ಸೇರಿದಂತೆ ಸಂಪೂರ್ಣ ಮಾಹಿತಿ ಮುದ್ರಿತಗೊಂಡ ಅರ್ಜಿಗಳನ್ನು ಸಲ್ಲಿಕೆ ಮಾಡಲಾಗಿದೆ. ಒಂದೊಂದು ವಿಧಾನಸಭಾ ಕ್ಷೇತ್ರದಲ್ಲಿ ಬರೋಬ್ಬರಿ 5 ಸಾವಿರದಿಂದ 10 ಸಾವಿರದವರೆಗೆ ಫಾರಂ 7 ಅರ್ಜಿಗಳು ಸಲ್ಲಿಕೆಯಾಗಿವೆ.

ಕಾರ್ಯಕರ್ತರ ಮೂಲಕ ಅಕ್ರಮ: ಮತದಾರರ ಹೆಸರುಗಳನ್ನು ಡಿಲೀಟ್ ಮಾಡಲು ಬಿಜೆಪಿಯ ಒಬ್ಬೊಬ್ಬ ಕಾರ್ಯಕರ್ತರು ಬಲಾತ್ಕಾರವಾಗಿ ಅಥವಾ ಗುಂಪಾಗಿ 80, 90, 150 ರಿಂದ 200 ಅರ್ಜಿಗಳನ್ನು ಸಲ್ಲಿಸಿದ್ದಾರೆ ಎಂದು ಡಿಕೆ ಶಿವಕುಮಾರ್ ದಾಖಲೆ ಬಿಡುಗಡೆ ಮಾಡಿದರು. ಬಬಲೇಶ್ವರದಲ್ಲಿ ಬಿಜೆಪಿಯ ಭೀಮು ಗೋಲಸಂಗಿ ಮತ್ತಿತರರು ಬರೆದಿರುವ ತಪ್ಪೊಪ್ಪಿಗೆ ಪತ್ರವನ್ನೂ ಅವರು ಇದೇ ಸಂದರ್ಭದಲ್ಲಿ ಬಹಿರಂಗಪಡಿಸಿದರು.

ಸಿಎಂ ಡಿಕೆಶಿ ಆಗ್ರಹಗಳು: ಈ ದೊಡ್ಡ ಮಟ್ಟದ ಷಡ್ಯಂತ್ರದ ಹಿಂದೆ ಇರುವವರ ವಿರುದ್ಧ ಕೂಡಲೇ ಕ್ರಿಮಿನಲ್ ಪ್ರಕರಣ ದಾಖಲಿಸಿ, ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕು.
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಗಮನಕ್ಕೆ ಬಾರದೆ ಇಂತಹ ದೊಡ್ಡ ಮಟ್ಟದ ಷಡ್ಯಂತ್ರ ನಡೆಯಲು ಸಾಧ್ಯವಿಲ್ಲ.

ಬಡವರು ಹಾಗೂ ಅಲ್ಪಸಂಖ್ಯಾತರ ಮತಗಳನ್ನು ರಕ್ಷಿಸುವುದು ನಮ್ಮ ಆದ್ಯತೆಯಾಗಿದ್ದು, ಈ ಎಸ್ಐಆರ್ ದೇಶದ ದೊಡ್ಡ ಫ್ರಾಡ್ ಆಗಿದ್ದು ಕೂಡಲೇ ಇದು ರದ್ದಾಗಬೇಕು.

ತಪ್ಪಿತಸ್ಥರನ್ನು ಬಂಧಿಸಿ ಕಾನೂನು ಕ್ರಮ ಜರುಗಿಸುವವರೆಗೆ ಹಾಗೂ ಮತದಾರರ ಹಕ್ಕು ರಕ್ಷಣೆ ಆಗುವವರೆಗೆ ನಾವು ಚುನಾವಣಾ ಆಯೋಗದ ಕಚೇರಿಯಿಂದ ಹೊರಬರುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಸಿಎಂ ಡಿ.ಕೆ. ಶಿವಕುಮಾರ್ ಅವರು ಚುನಾವಣಾ ಆಯೋಗಕ್ಕೆ ಅಧಿಕೃತ ಪತ್ರವನ್ನೂ ಬರೆದಿದ್ದು, ಫಾರಂ 7 ರ ದುರುಪಯೋಗದ ಸಂಪೂರ್ಣ ವಿವರಗಳನ್ನು ಒದಗಿಸಿದ್ದಾರೆ.

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಖ್ಯಮಂತ್ರಿಯವರ ತಾಂತ್ರಿಕ ಸಲಹೆಗಾರರಾಗಿ ನಿವೃತ್ತ ಕಾರ್ಯದರ್ಶಿ ಡಾ. ಕೆ. ಜೈಪ್ರಕಾಶ್ ನೇಮಕಜೆಎನ್‌ಯು ಪ್ರೊಫೆಸರ್ ಹಾಗೂ ಕಾಂಗ್ರೆಸ್ ಸಂಸದರಿಂದ ಲೈಂಗಿಕ ಕಿರುಕುಳ ಆರೋಪ, ಸೇವೆಯಿಂದ ವಜಾಆರ್‌ಬಿಐ ಬಿಗ್ ಶಾಕ್: ರೆಪೋ ದರ ಏರಿಕೆಯಿಂದ ಸಾಲಗಾರರಿಗೆ ಹೆಚ್ಚಳವಾದ ಇಎಂಐ ಬರೆ!ಎಸ್‌ಐಆರ್ ರದ್ದುಪಡಿಸುವಂತೆ ಜನತಾ ನ್ಯಾಯಾಲಯ ಸಮಾವೇಶ: ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹ10 ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್ ಸುಪಾರಿ - ಶಾಸಕ ಗಣಿಗ ರವಿ ಸ್ಫೋಟಕ ಪೆನ್‌ಡ್ರೈವ್ ಬಾಂಬ್!ಸಚಿವರಿಗೆ ಬಲೆ ಬೀಳಿಸಲು ಯತ್ನ: ಸಿಎಂ ಎಚ್ಚರಿಕೆ ನೀಡಿದ್ದಾರೆ ಎಂದ ಸತೀಶ್ ಜಾರಕಿಹೊಳಿಕೇಂದ್ರದೊಂದಿಗೆ ಜಿಎಸ್‌ಟಿ ಸಭೆ: ರಾಜ್ಯದ ಬಾಕಿ ಹಣದ ಕುರಿತು 'ಸಿಹಿ ಸುದ್ದಿ' ನೀಡಿದ ಸಿಎಂ ಡಿ.ಕೆ ಶಿವಕುಮಾರ್ ಸುಳಿವು!ಪ್ರಜ್ವಲ್ ರೇವಣ್ಣ ಜೈಲಿನಲ್ಲಿ ಮೊಬೈಲ್ ಪತ್ತೆ ಪ್ರಕರಣ: ಹಿಂಡಲಗಾ ಜೈಲಿಗೆ ಸ್ಥಳಾಂತರಪ್ರತಿಭಟನೆ ಹೆಸರಲ್ಲಿ ಎಲ್ಲವನ್ನೂ ಬಂದ್ ಮಾಡಲು ಆಗದು: ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್ದಾವಣಗೆರೆಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ವಕೀಲರ ಪಟ್ಟು: ಮಧ್ಯಕರ್ನಾಟಕದಲ್ಲಿ ತೀವ್ರಗೊಂಡ ಹೋರಾಟ