Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಮಹಾತ್ಮ ಗಾಂಧಿ ಮತ್ತೆ ಮತ್ತೆ ಕೊಲ್ಲುವ ಬಿಜೆಪಿ-ಸಿದ್ದರಾಮಯ್ಯ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮನುಸ್ಮೃತಿಯಿಂದ ಪ್ರೇರಣೆ ಪಡೆದಿರುವ ಆರ್.ಎಸ್.ಎಸ್ ಬಿಜೆಪಿ ಸರ್ಕಾರಕ್ಕೆ ಮಾರ್ಗದರ್ಶಕವಾಗಿದೆ. ಮಹಾತ್ಮ ಗಾಂಧಿಯನ್ನು ಗೋಡ್ಸೆ ಮೊದಲ ಬಾರಿ ಕೊಂದು ಹಾಕಿದರೆ
, ಇದೀಗ ನರೇಗಾ ಕಾಯ್ದೆಯಲ್ಲಿ ಇದ್ದ ಮಹಾತ್ಮ ಗಾಂಧಿ ಹೆಸರನ್ನು ತೆಗೆದು ಹಾಕುವ ಮೂಲಕ ಬಿಜೆಪಿ ಅವರನ್ನು ಮತ್ತೆ ಮತ್ತೆ ಕೊಲ್ಲುವ ಕೆಲಸ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದರು.


ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ರದ್ಧತಿ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮುಖ್ಯಮಂತ್ರಿಗಳು ಮಾತನಾಡಿದರು.


ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯನ್ನು ಹಿಂಪಡೆಯುವ ಮೂಲಕ ವಿಬಿ ಜಿ ರಾಮ್ ಜಿ ಹೆಸರಿನಲ್ಲಿ ಹೊಸ ಕಾಯ್ದೆ ಜಾರಿಗೆ ತರುವಾಗ, ರಾಜ್ಯ ಸರ್ಕಾರಗಳ ಅಭಿಪ್ರಾಯ ಕೇಳಿಲ್ಲ. ಭಾರತೀಯರ ಅಭಿಪ್ರಾಯ ಪಡೆಯದೆ ನೇರವಾಗಿ ಹೊಸ ಕಾಯ್ದೆ ಜಾರಿಗೊಳಿಸುವ ಮೂಲಕ ಸರ್ವಾಧಿಕಾರಿ ಧೋರಣೆಯನ್ನು ಪ್ರದರ್ಶಿಸಿದೆ ಎಂದು ಆರೋಪಿಸಿದರು.


ಮನಮೋಹನ ಸಿಂಗ್ ಅವರ ನೇತೃತ್ವದ ಯುಪಿಎ ಸರ್ಕಾರ ಉದ್ಯೋಗದ ಹಕ್ಕು, ಮಾಹಿತಿ ಹಕ್ಕು, ಶೈಕ್ಷಣಿಕ ಹಕ್ಕು ಮೊದಲಾದ ಕ್ರಾಂತಿಕಾರಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಜನರಿಗೆ ಹೆಚ್ಚಿನ ಅಧಿಕಾರವನ್ನು ನೀಡುವ ಕಾರ್ಯವನ್ನು ಮಾಡಿತ್ತು.

ಮೋದಿ ಸರ್ಕಾರ ಡಿಸೆಂಬರ್ 17ರಂದು ಕಾಯ್ದೆಯನ್ನು ಸಂಸತ್ತಿನಲ್ಲಿ ಮಂಡಿಸಿ ಡಿ.18ರಂದು ಅಂಗೀಕಾರ ಪಡೆದಿದೆ. ಸುಮಾರು 12.16 ಕೋಟಿ ನರೇಗಾ ಕಾರ್ಮಿಕರು ದೇಶದಲ್ಲಿದ್ದಾರೆ. ಅದರಲ್ಲಿ 6.21ಕೋಟಿ ಮಹಿಳೆಯರು ಇದ್ದಾರೆ. ಪ.ಜಾತಿಯವರು ಶೇ.17, ಪ.ವರ್ಗ ಶೇ. 11 ಇದ್ದಾರೆ.

ನಮ್ಮ ರಾಜ್ಯದಲ್ಲಿ 71.18 ಲಕ್ಷ ನರೇಗಾ ಕಾರ್ಮಿಕರಿದ್ದಾರೆ. ಇದರಲ್ಲಿ 36.75 ಲಕ್ಷ ಮಹಿಳೆಯರು, ಅಂದರೆ ಶೇ. 51.6 ಮಹಿಳೆಯರಿದ್ದಾರೆ.

ಮನಮೋಹನ್ ಸಿಂಗ್ ಅವರ ಜನಪರ ಕಾಯ್ದೆಯನ್ನು ಹಿಂಪಡೆದುಕೊಳ್ಳುವ ಮೂಲಕ ಕಾರ್ಪೊರೇಟ್ ಕಂಪೆನಿಗಳಿಗೆ ಲಾಭ ಮಾಡಿಕೊಡುವ ಕೆಲಸವನ್ನು ಮೋದಿ ಸರ್ಕಾರ ಮಾಡುತ್ತಿದೆ ಎಂದು ಸಿಎಂ ತಿಳಿಸಿದರು.‌

ನರೇಗಾ ಕಾಯ್ದೆ ಪ್ರಕಾರ ಜನಸಾಮಾನ್ಯರು, ಕೂಲಿ ಕಾರ್ಮಿಕರು, ಕೃಷಿ ಕಾರ್ಯಗಳ ಜೊತೆಯಲ್ಲಿ ತಾವಿದ್ದ ಸ್ಥಳದಲ್ಲೇ ನರೇಗಾ ಅಡಿ ಕೂಲಿ ಕೆಲಸ ಮಾಡಲು ಅವಕಾಶವಿತ್ತು. ಆ ಮೂಲಕ ಹಳ್ಳಿಗಾಡಿನ ಆರ್ಥಿಕತೆ ಕಟ್ಟಲು ಸಾಧ್ಯವಾಗಿತ್ತು. ಸ್ಥಳೀಯವಾಗಿ ಆಸ್ತಿ ಸೃಜನೆಯಾಗುತ್ತಿತ್ತು. ಉದ್ಯೋಗ ಕೇಳಿ ಪಡೆಯುವ ಹಕ್ಕು ಜನರಿಗಿತ್ತು. ಈಗ ಇದ್ಯಾವುದೂ ಇಲ್ಲವಾಗಿದೆ.‌

ಕಳೆದ 11 ವರ್ಷಗಳ ಕೇಂದ್ರ ಸರ್ಕಾರದ ಸಾಧನೆ ಅಂದರೆ ಯೋಜನೆಗಳ ಹೆಸರು ಬದಲಾಯಿಸಿರುವುದು ಮಾತ್ರ. ಹಿಂದೆ ಜಾರಿಯಲ್ಲಿದ್ದ ಸುಮಾರು 30 ಯೋಜನೆಗಳ ಹೆಸರು ಬದಲಾವಣೆ ಅಥವಾ ಕಾಯ್ದೆಗಳನ್ನು ಹಿಂತೆಗೆದುಕೊಳ್ಳುವ ಕಾರ್ಯವನ್ನು ಮೋದಿ ಸರ್ಕಾರ ಮಾಡಿದೆ.

ಪ್ರಸ್ತುತ ಕಾಯ್ದೆಯಡಿ 100 ದಿನ ಕನಿಷ್ಟ ಕೆಲಸ ನೀಡಬೇಕಾಗಿತ್ತು. ಅವರು ಎಲ್ಲಿ ವಾಸಿಸುತ್ತಾರೋ ಅಲ್ಲಿಯೇ ಕೆಲಸ ನೀಡಬೇಕಾಗಿತ್ತು. ಈಗ ಹೊಸ ಕಾಯ್ದೆ ಸೆಕ್ಷನ್ 5(1) ಪ್ರಕಾರ ಸರ್ಕಾರ ಅಧಿಸೂಚಿತ ಪ್ರದೇಶದಲ್ಲಿ ಮಾತ್ರ ಉದ್ಯೋಗ ನೀಡಲಾಗುತ್ತದೆ. ಉದ್ಯೋಗ ದೊರೆಯುವ ಬಗ್ಗೆ ಯಾವುದೇ ಗ್ರಾಮ ಪಂಚಾಯತ್ ಗಳಿಗೂ ಖಾತ್ರಿಯಿರುವುದಿಲ್ಲ‌ ಎಂದು ಸಿದ್ದರಾಮಯ್ಯ ದೂರಿದರು.

ವರ್ಷದ ಎಲ್ಲಾ ಅವಧಿಯಲ್ಲಿ ಲಭ್ಯವಾಗುತ್ತಿದ್ದ ಕೂಲಿ ಕೆಲಸವನ್ನು ಈಗ ನಿರ್ಬಂಧಿಸಲಾಗಿದ್ದು, ಕೃಷಿ ಚಟುವಟಿಕೆ ಅವಧಿಯ 60 ದಿನ ಯೋಜನೆಯಡಿ ಯಾವುದೇ ಉದ್ಯೋಗ ನೀಡಲಾಗುವುದಿಲ್ಲ. ಹಣದುಬ್ಬರಕ್ಕೆ ತಕ್ಕಂತೆ ಕೂಲಿ ಹಣವನ್ನು ಸರಿದೂಗಿಸುವ ಅವಕಾಶವನ್ನು ತೆಗೆದು ಹಾಕಲಾಗಿದೆ.

ಹಿಂದಿನ ಕಾಯ್ದೆ ಪ್ರಕಾರ ಕೇಂದ್ರ ಸರ್ಕಾರ ಪೂರ್ಣ ಅನುದಾನವನ್ನು ಭರಿಸುತ್ತಿತ್ತು. ಹೊಸ ಕಾಯ್ದೆ ಪ್ರಕಾರ ಶೇ.60 ರಷ್ಟು ಕೇಂದ್ರ ಹಾಗೂ ಶೇ.40ರಷ್ಟು ರಾಜ್ಯ ಸರ್ಕಾರ ಭರಿಸಲಿದೆ. ಇದು ರಾಜ್ಯಗಳ ಮೇಲೆ ಹೆಚ್ಚಿನ ಹಣಕಾಸು ಹೊರೆಯನ್ನು ಹೇರಲಿದ್ದು, ಇದು ಸಂವಿಧಾನದ ಆರ್ಟಿಕಲ್ 258 ಮತ್ತು 280ಗೆ ವಿರುದ್ಧವಾಗಿದೆ.

ಗ್ರಾಮ ಪಂಚಾಯತ್ ಗಳಿಗೆ ಇದ್ದ ಅಧಿಕಾರವನ್ನು ಇದೀಗ ಕೇಂದ್ರ ಸರ್ಕಾರ ಕಿತ್ತು ಕೊಂಡಿದ್ದು, ಇದು ಒಕ್ಕೂಟ ವ್ಯವಸ್ಥೆಗೆ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿದೆ.

ಹೊಸ ಕಾಯ್ದೆಯನ್ನು ಜಾರಿಗೊಳಿಸದಿರುವಂತೆ ಕೋರಿ ಪ್ರಧಾನಿಯವರಿಗೆ ಡಿ.30ರಂದು ನಾನು ಪತ್ರ ಬರೆದಿದ್ದೇನೆ. ಹೊಸ ಕಾಯ್ದೆಯನ್ನು ರದ್ದುಪಡಿಸಬೇಕು. ನರೇಗಾ ಕಾಯ್ದೆ ಮತ್ತೆ ಜಾರಿಗೊಳಿಸಬೇಕು. ಮಹಿಳೆಯರು, ದಲಿತರ ಉದ್ಯೋಗದ ಹಕ್ಕನ್ನು ಪುನರ್ ಸ್ಥಾಪಿಸಬೇಕು. ಪಂಚಾಯತ್‌ಗಳ ಸ್ವಯಂ ಆಡಳಿತದ ಹಕ್ಕನ್ನು ಮರು ಸ್ಥಾಪಿಸಬೇಕು ಎಂದು ರಾಜ್ಯ ಸರ್ಕಾರ ಕೇಂದ್ರವನ್ನು ಒತ್ತಾಯಿಸಲಿದೆ.

ಹೊಸ ಬಿಲ್ ಮೂಲಕ ಗ್ರಾಮೀಣ ಜನರ ಜೀವನೋಪಾಯ ಕಸಿಯಲಾಗುತ್ತಿದೆ. ರಾಜ್ಯ ಸರ್ಕಾರದ ಜೊತೆ ಚರ್ಚೆ ಮಾಡದೆ, ರಾಜ್ಯಗಳ ಆಯವ್ಯಯದ ಮೇಲೆ ಹೆಚ್ಚಿನ ಹೊರೆಯನ್ನು ಸಂವಿಧಾನ ಬಾಹಿರವಾಗಿ ಹೇರಲಾಗುತ್ತಿದೆ.

ಹೊಸ ಕಾಯ್ದೆಯಿಂದ ನಿರುದ್ಯೋಗ ಹೆಚ್ಚಳ, ಉದ್ಯೋಗದಲ್ಲಿ ಮಹಿಳೆಯರ ಪಾಲುದಾರಿಕೆ ಇಳಿಕೆ, ದಲಿತ ಹಾಗೂ ಆದಿವಾಸಿ ಕುಟುಂಬಗಳ ಮೇಲೆ ಹೆಚ್ಚಿನ ಒತ್ತಡ ಸೃಷ್ಟಿ, ಗ್ರಾಮೀಣ ಜೀವನೋಪಾಯಗಳ ಕುಸಿತದಿಂದ ಗ್ರಾಮೀಣ ಬದುಕು ದುಸ್ತರಗೊಳ್ಳಲಿದೆ. ಪಂಚಾಯತ್‌ಗಳು ಕೇವಲ ಅನುಷ್ಠಾನ ಸಂಸ್ಥೆಗಳಾಗಿ ಕಾರ್ಯ ನಿರ್ವಹಿಸುವಂತಾಗುತ್ತದೆ. ಈ ಮೂಲಕ ಗುತ್ತಿಗೆದಾರರಿಗೆ ಹೆಚ್ಚಿನ ಅವಕಾಶ ಸೃಷ್ಟಿಸಲಾಗುತ್ತಿದೆ.

20 ವರ್ಷಗಳ ಹಿಂದೆ ಮನಮೋಹನ ಸಿಂಗ್ ಸರ್ಕಾರ ಕಾಯ್ದೆಯನ್ನು ಜಾರಿಗೊಳಿಸುವ ಸಂದರ್ಭದಲ್ಲೇ ಬಿಜೆಪಿ ಯೋಜನೆಯನ್ನು ವಿರೋಧಿಸಿತ್ತು. ಆಹಾರ ಭದ್ರತಾ ಕಾಯ್ದೆಯನ್ನು ಸಹ ಗೇಲಿ ಮಾಡಿತ್ತು. ಜನಪರವಾದ ಕಾನೂನುಗಳನ್ನು ನಾಶ ಮಾಡುವುದೇ ಬಿಜೆಪಿ ಕೆಲಸ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಗ್ದಾಳಿ ಮಾಡಿದರು.

 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು