ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಿಪಿಎಲ್ ಕಾರ್ಡು ಕ್ಯಾನ್ಸಲ್ ಮಾಡಿರುವುದರ ಜೊತೆಯಲ್ಲಿ ಸರ್ಕಾರಿ ಆಸ್ಪತ್ರೆ ಶುಲ್ಕ ಡಬಲ್ ಮಾಡುವ ಮೂಲಕ ಬಡವರಿಗೆ ಕಾಂಗ್ರೆಸ್ ಸರ್ಕಾರ ಬರೆ ಎಳೆದಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿ ಕಾರಿದ್ದಾರೆ.
ಲಕ್ಷಾಂತರ ಬಿಪಿಎಲ್ ಕಾರ್ಡುಗಳನ್ನು ರದ್ದು ಮಾಡುವ ಮೂಲಕ ಬಡವರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಸಿಗುತ್ತಿದ್ದ ಉಚಿತ ವೈದ್ಯಕೀಯ ಸೇವೆಯನ್ನು ಕಸಿದುಕೊಂಡಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರ,
ಈಗ ಸರ್ಕಾರಿ ಆಸ್ಪತ್ರೆಗಳ ಸೇವಾ ಶುಲ್ಕವನ್ನು ದುಪ್ಪಟ್ಟು ಮಾಡುವ ಮೂಲಕ ಬಡವರಿಗೆ ಗಾಯದ ಮೇಲೆ ಮತ್ತೊಂದು ಬರೆ ಎಳೆದಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಗ್ಯಾರೆಂಟಿಗಳಿಂದ ರಾಜ್ಯದ ಬೊಕ್ಕಸವನ್ನ ಬರಿದು ಮಾಡಿರುವ ಕಾಂಗ್ರೆಸ್ ಸರ್ಕಾರ ಬಡವರಿಗೆ ಸಿಗುತ್ತಿದ್ದ ಒಂದೊಂದೇ ಸವಲತ್ತುಗಳನ್ನು ಕಿತ್ತುಕೊಂಡು ದ್ರೋಹ ಮಾಡುತ್ತಿದೆ ಎಂದು ಆರ್.ಅಶೋಕ್ ದೂರಿದ್ದಾರೆ.




