ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ 2025- 26ನೇ ಸಾಲಿನ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಶೇ.90ರಷ್ಟು ಅಂಕ ಪಡೆದ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿದ, ಸಂಘದ ತಾಲೂಕು ಅಧ್ಯಕ್ಷ ಪಿ.ಜಗದೀಶ್, ಅರ್ಜಿಸಲ್ಲಿಸುವ ತಾಲ್ಲೂಕಿನ ವೀರಶೈವ ಲಿಂಗಾಯತ ಸಮುದಾಯದ ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಅಂಕಪಟ್ಟಿ, ಆಧಾರ್ ಕಾರ್ಡ್, ಟಿಸಿ ನಕಲು ಪ್ರತಿ,
ಎರಡು ಭಾವಚಿತ್ರದೊಂದಿಗೆ ಮೇ30ರೊಳಗೆ ಬೆಂಗಳೂರು ರಸ್ತೆಯ ವೀರಶೈವ ಕಲ್ಯಾಣ ಮಂಟಪಕಚೇರಿಗೆ ತಲುಪಿಸಲು ಪ್ರಕಟಣೆಯಲ್ಲಿ ತಿಳಿಸಿದೆ. ಹೆಚ್ಚಿನ ಮಾಹಿತಿಗೆ ಪಿ.ಜಗದೀಶ 9449190482, ಸಿ.ನಾಗರಾಜ9845070079, ಕೆ.ಎಂ.ಶಿವಕೀರ್ತಿ, 9880726787 ಜಿ.ಟಿ. ಶ್ರೀ ಮಲ್ಲಿಕಾರ್ಜುನ 7483504544 ಸಂಪರ್ಕಿಸಲು ಕೋರಿದೆ.


