Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಬಂಡವಾಳ ಹೂಡಿಕೆ ಆಕರ್ಷಣೆ ಸಭೆ

ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಬಂಡವಾಳ ಹೂಡಿಕೆ ಆಕರ್ಷಣೆ ಸಭೆ
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಿಧಾನಸೌಧದ ಸಭಾಂಗಣದಲ್ಲಿ ಶುಕ್ರವಾರ ನಡೆದ ಬಂಡವಾಳ ಹೂಡಿಕೆ ಆಕರ್ಷಣೆ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ಸಲಹೆ ಸೂಚನೆಗಳು;


ರಾಜ್ಯದಲ್ಲಿ ಬಂಡವಾಳ ಹೂಡಿಕೆದಾರ ಸ್ನೇಹಿ ವಾತಾವರಣವನ್ನು ಇನ್ನಷ್ಟು ಉತ್ತಮಪಡಿಸಬೇಕು. ಇದಕ್ಕಾಗಿ ಭೂ ಬಳಕೆ ಬದಲಾವಣೆ ಪ್ರಕ್ರಿಯೆ ಸೇರಿದಂತೆ ವಿವಿಧ ಎನ್‌ಒಸಿಗಳ ನೀಡಿಕೆಯ ಕಾಲಮಿತಿಯನ್ನು ಕಡಿಮೆ ಮಾಡಬೇಕು. ಕಾಲಮಿತಿಯನ್ನು ಕಡಿಮೆ ಮಾಡುವ ಬಗ್ಗೆ ವಿವರವಾದ ಪ್ರಸ್ತಾವನೆಯನ್ನು ಸಲ್ಲಿಸಬೇಕು. ಯಾವುದೇ ಕಾರಣಕ್ಕೂ ವಿಳಂಬಕ್ಕೆ ಅವಕಾಶ ನೀಡಬಾರದು.

ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಅಗ್ನಿಶಾಮಕ ಇಲಾಖೆ ಅನುಮೋದನೆ ವಿಳಂಬವಾಗುತ್ತಿದ್ದು, ಇದನ್ನು ತ್ವರಿತಗೊಳಿಸಬೇಕು. ಇದಕ್ಕಾಗಿ ಮಂಡಳಿಯ ನಿಯಮಾವಳಿಯಲ್ಲಿ ಅಗತ್ಯ ಬದಲಾವಣೆಗಳನ್ನು ಮಾಡಬೇಕು.

ಕೈಗಾರಿಕೆಗಳಿಗೆ ರಸ್ತೆ, ನೀರು, ವಿದ್ಯುತ್‌ ಸೇರಿದಂತೆ ಅಗತ್ಯ ಮೂಲಸೌಲಭ್ಯಗಳನ್ನು ಒದಗಿಸುವ ಕುರಿತಾಗಿ ಸಂಬಂಧಪಟ್ಟ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು.

ರಾಜ್ಯದಲ್ಲಿ ಈ ವರ್ಷದ ಆರಂಭದಲ್ಲಿ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ರೂ.10.27 ಲಕ್ಷ ಕೋಟಿ ಹೂಡಿಕೆ ಆಕರ್ಷಿಸಲಾಗಿದ್ದು, ಈಗಾಗಲೇ ಶೇ.60ರಷ್ಟು ಹೂಡಿಕೆಗಳ ಅನುಷ್ಠಾನ ಹಂತದಲ್ಲಿವೆ. ಸುಮಾರು ರೂ.1.5 ಲಕ್ಷ ಕೋಟಿಗೂ ಹೆಚ್ಚಿನ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ವಿವಿಧ ಹಂತದಲ್ಲಿವೆ.

ಸುಪ್ರೀಂಕೋರ್ಟ್ ನ ಕಾರಣ ಹೇಳಿಕೊಂಡು ಕೂರಬಾರದು. ಅಕ್ಕ ಪಕ್ಕದ ರಾಜ್ಯಗಳಿಗೂ ಇರುವುದೂ ಇದೇ ಸುಪ್ರೀಂ ಕೋರ್ಟ್. ಬೇರೆ ರಾಜ್ಯಗಳಿಗೆ ಆಗದ ಸಮಸ್ಯೆ ನಮಗೆ ಆಗುತ್ತಿದೆ ಅನ್ನುವ ಕಾರಣ ನೀಡಿದರೆ ಕ್ರಮ ಜರುಗಿಸಬೇಕಾಗತ್ತದೆ.

ರಾಜ್ಯದಲ್ಲಿ ಕಾರ್ಯಪಡೆ ಹೆಚ್ಚಿದೆ. ಕೌಶಲ್ಯಯುತ ಕಾರ್ಮಿಕ ಬಲ ಕೂಡ ರಾಜ್ಯದಲ್ಲಿ ಹೆಚ್ಚಿದೆ. ಹೀಗಾಗಿ ಉದ್ಯೋಗ ಸೃಷ್ಟಿ ರಾಜ್ಯದಲ್ಲಿ ಹೆಚ್ಚೆಚ್ಚು ಆಗುತ್ತಿದೆ. ಕೈಗಾರಿಕೆಗಳಿಗೆ ಅನುಮತಿ ನೀಡುವ ಮತ್ತಿತರ ವಿಚಾರದಲ್ಲಿ ಪ್ರಕ್ರಿಯೆ ಇನ್ನಷ್ಟು ವೇಗ ಪಡೆಯಬೇಕು. ಇದನ್ನು ಅಧಿಕಾರಿಗಳು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕು.

ತಮಿಳುನಾಡಿನಲ್ಲಿ 51 SEZ ಗಳಿದ್ದು ಒಟ್ಟಾರೆ 8.9% ಕೊಡುಗೆ ನೀಡುತ್ತಿವೆ. ಆದರೆ, ರಾಜ್ಯದಲ್ಲಿ ಕೇವಲ 37 SEZ (special economic zone)ಗಳಿದ್ದು ನಾವು 8.2% ರಷ್ಟು ಕೊಡುಗೆ ನೀಡುತ್ತಿದ್ದೇವೆ. ಇದರಲ್ಲೂ ರಾಜ್ಯದ ಕೊಡುಗೆಯೇ ಹೆಚ್ಚಾಗಿದೆ. ಇಂಥಾ ಅನುಕೂಲಕರ ಪರಿಸ್ಥಿತಿಯನ್ನು ಗಮನಿಸಬೇಕು.

ಹಸಿರು ಇಂಧನ ಮೂಲಗಳಿಂದ ಕೈಗಾರಿಕೆಗಳಿಗೆ ವಿದ್ಯುತ್ ಸರಬರಾಜು ಮಾಡುವ ನಿಟ್ಟಿನಲ್ಲಿ ಅಸಾಂಪ್ರದಾಯಿಕ ಇಂಧನ ಮೂಲಗಳಿಗೆ ಆದ್ಯತೆ ನೀಡಬೇಕು. ಇದಕ್ಕಾಗಿ ವ್ಯವಸ್ಥಿತ ಯೋಜನೆ ರೂಪಿಸಬೇಕು.

ಕೇಂದ್ರ ಸರ್ಕಾರ 2 ಪ್ರಮುಖ ಕಾರ್ಮಿಕ ಸುಧಾರಣೆಗಳ ಅನುಷ್ಠಾನವನ್ನು ಪ್ರಸ್ತಾಪಿಸಿದೆ. ಕಾರ್ಮಿಕರ ಕೆಲಸದ ಅವಧಿಯನ್ನು ಮರು ನಿಗದಿಪಡಿಸುವ ಸಂದರ್ಭದಲ್ಲಿ ಕಾರ್ಮಿಕರ ಹಿತವನ್ನು ಗಮನದಲ್ಲಿಡಲಾಗುವುದು.

ಏಕಗವಾಕ್ಷಿ ವ್ಯವಸ್ಥೆಯಡಿ ಅರ್ಜಿಗಳ ವಿಲೇವಾರಿ ಆಗುತ್ತಿಲ್ಲ ಎಂದು ದೂರುಗಳಿವೆ. ಎಲ್ಲಾ ಸೇವೆಗಳನ್ನು ನೀಡಲು ಕ್ರಮ ಕೈಗೊಳ್ಳಬೇಕು. ಪ್ರಸ್ತುತ 29 ಸೇವೆಗಳು ಏಕಗವಾಕ್ಷಿ ವ್ಯವಸ್ಥೆಯಿಂದ ಹೊರಗಿದ್ದು, ಅವುಗಳನ್ನು ಸಹ ಇದರಡಿ ತರಬೇಕು. ಎಲ್ಲಾ ಅರ್ಜಿಗಳನ್ನು ಏಕಗವಾಕ್ಷಿ ವ್ಯವಸ್ಥೆಯಡಿ ಏಕೀಕೃತ ವಿಲೇವಾರಿಗೆ ಕ್ರಮ.

ರಾಜ್ಯದಲ್ಲಿ ಬಂಡವಾಳ ಹೂಡಿಕೆ ಹೆಚ್ಚಾದರೆ ಮಾತ್ರ ಉದ್ಯೋಗ ಸೃಷ್ಟಿ ಮಾಡಲು ಸಾಧ್ಯವಿದೆ. ಈ ಹಿನ್ನೆಲೆಯಲ್ಲಿ ಹೂಡಿಕೆಸ್ನೇಹಿ ವಾತಾವರಣವನ್ನು ಉತ್ತಮ ಪಡಿಸಲು ಎಲ್ಲರೂ ಸಮನ್ವಯದಿಂದ ಶ್ರಮಿಸಬೇಕು.

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು