Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಕೀಟನಾಶಕಗಳ ಬಳಕೆಯಲ್ಲಿ ಮುಂಜಾಗ್ರತೆ ಅಗತ್ಯ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕೀಟನಾಶಕಗಳ ಬಳಕೆಯಲ್ಲಿ ರೈತರು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದಿದ್ದರೆ, ಕೃಷಿ ಪೂರಕ ಸೂಕ್ಷ್ಮ ಜೀವಿಗಳ ಅಲಭ್ಯತೆ ರೈತರನ್ನು ಕಾಡಲಿದೆ.   ಕುರಿತಂತೆ ಕೃಷಿ ಮತ್ತು ತೋಟಗಾರಿಕೆ ಅಧ್ಯಯನದ ವಿದ್ಯಾರ್ಥಿಗಳು ರೈತರಿಗೆ ತರಬೇತಿ ಮೂಲಕ ಮನವರಿಕೆ ಮಾಡಿಕೊಟ್ಟರು.

      ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ,ಶಿವಮೊಗ್ಗ. ತೋಟಗಾರಿಕೆ ಮಹಾವಿದ್ಯಾಲಯ, ಹಿರಿಯೂರಿನ ಅಂತಿಮ ವರ್ಷದ ವಿದ್ಯಾರ್ಥಿಗಳು ಗ್ರಾಮೀಣ ತೋಟಗಾರಿಕೆ ಕಾರ್ಯಾನುಭವ ಕಾರ್ಯಕ್ರಮದ ಅಡಿಯಲ್ಲಿ ಕಸವನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಕೀಟನಾಶಕಗಳ ಬಳಕೆಯಲ್ಲಿ ವಹಿಸಬೇಕಾದ ಮುಂಜಾಗ್ರತೆ ಕ್ರಮಗಳ ಬಗ್ಗೆ ತರಬೇತಿ ಕಾರ್ಯಕ್ರಮ ನಡೆಸಿಕೊಟ್ಟರು.

ರೈತರು ವಾಡಿಕೆಯಂತೆ ಹೆಚ್ಚಿನ ಮಟ್ಟದ ಕೀಟನಾಶಕಗಳನ್ನು ಬಳಸುತ್ತಾರೆ. ಸಾಮಾನ್ಯವಾಗಿ ಕೀಟನಾಶಕ ಮಣ್ಣಿನೊಳಗೆ ಸೇರಿಕೊಂಡು ನೇರವಾಗಿ ಮಣ್ಣಿನ ಫಲವತ್ತತೆಯನ್ನು ನಾಶಮಾಡುತ್ತದೆ ಹಾಗೂ ಸೂಕ್ಷ್ಮ ಜೀವಿಗಳ ಲಭ್ಯತೆಯು ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ ಎಂದು ಹೇಳಿದರು.

      ಹೀಗಾಗಿ ರೈತರು ಕೀಟನಾಶಕಗಳನ್ನು ಸರಿಯಾದ ಪ್ರಮಾಣದಲ್ಲಿ ಮತ್ತು ವಿಧಾನದಲ್ಲಿ ಬಳಕೆ ಮಾಡುವುದು ಸೂಕ್ತವೆಂದು ಅಂತಿಮ ವರ್ಷದ ವಿದ್ಯಾರ್ಥಿನಿ ಚೈತ್ರ ಅವರು ರೈತರಿಗೆ ತಿಳಿಸಿದರು. ಕೀಟನಾಶಕಗಳ ಸಿಂಪಡಣೆಯ ಸಂದರ್ಭದಲ್ಲಿ ತಪ್ಪದೇ ಮುಂಜಾಗ್ರತೆ ವಹಿಸಬೇಕು ಎಂದು ಹೇಳಿದರು.

ಸಂರಕ್ಷಿತ ಉಡುಪು, ಮಾಸ್ಕ್ ,ಬೂಟು , ಗ್ಲೌಸ್ ಗಳನ್ನು ಧರಿಸಿ ಕೀಟನಾಶಕ ಸಿಂಪಡಣೆ ಮಾಡಬೇಕು ಎಂದರು. ಸಿಂಪಡಣೆ ಮಾಡಿದ ನಂತರ ಕಡ್ಡಾಯವಾಗಿ ಚೆನ್ನಾಗಿ ಕೈಗಳನ್ನು ತೊಳೆಯಬೇಕು ಎಂದು ತಿಳಿಸಿದರು. ಕೀಟನಾಶಕ ಸಿಂಪಡಣೆ ಮಾಡುವ ಸಂದರ್ಭದಲ್ಲಿ ಬಳಸಬೇಕಾದ ಉಡುಪನ್ನು ರೈತರಿಗೆ ಮನಮುಟ್ಟುವಂತೆ ಪ್ರಾತ್ಯಕ್ಷಿಕೆ ಮೂಲಕ ಮನವರಿಕೆ ಮಾಡಿಕೊಡಲಾಯಿತು.

     ಕಾರ್ಯಕ್ರಮದಲ್ಲಿ ಪ್ರಗತಿಪರ ರೈತರಾದ ರಾಜಪ್ಪ, ರೈತ ಸಂಘದ ಸದಸ್ಯರಾದ ಕೃಷ್ಣಮೂರ್ತಿ, ಕಸವನಹಳ್ಳಿ ಗ್ರಾಮಸ್ಥರು, ಗ್ರಾಮದ ರೈತರು ಹಾಗೂ ಸ್ತ್ರೀ ಶಕ್ತಿ ಸಂಘದ ಮಹಿಳೆಯರು ಪ್ರಾತ್ಯಕ್ಷಿಕೆಯಲ್ಲಿ ಭಾಗವಹಿಸಿದ್ದರು.
ಕಾರ್ಯಕ್ರಮವನ್ನು ತೋಟಗಾರಿಕೆ ಮಹಾವಿದ್ಯಾಲಯ ಹಿರಿಯೂರಿನ ವಿದ್ಯಾರ್ಥಿಗಳಾದ ಗೌತಮ್, ಸುದೀಪ್, ಪವನ್, ರಾಕೇಶ್, ಕಾವೇರಿ, ಅಂಜುಮ್, ಬಿಂದುಶ್ರೀ, ರಕ್ಷಿತಾ, ಅಂಬಿಕಾ, ಅಪರ್ಣ, ಶ್ರೇಯಾ, ನವೀನ್, ಜನಾರ್ದನ್ ಕಾರ್ಯಕ್ರಮ ನಡೆಸಿಕೊಟ್ಟರು.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು