Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Entertainment News

ಚಲನಚಿತ್ರೋತ್ಸವದ ಸಂಭ್ರಮ ಆಯ್ಕೆಯಾದ ಕಿರು ಚಿತ್ರಗಳಿಗೆ ಪ್ರಶಸ್ತಿ ಪ್ರದಾನ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹಾಸನಾಂಬೆ ದರ್ಶನ ಸಂದರ್ಭದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಹಾಸನಾಂಬ  ಚಲನಚಿತ್ರೋತ್ಸವ ಹಾಸನಾಂಬ ಕಲಾಕ್ಷೇತ್ರದಲ್ಲಿ ಸಂಭ್ರಮ ಸಡಗರದಿಂದ ನಡೆಯಿತು.

ಹಾಸನ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮ್ಯಾಕ್ಸ್ ಕಾನ್, ಡ್ರೀಮ್ ಸ್ಟುಡಿಯೋ ಎಂಟರ್ಟೈನ್ಮೆಂಟ್ ಮತ್ತು ವೆಂಚರ್ ಮೂವೀಸ್ ಸಂಸ್ಥೆಗಳ ಸಹಯೋಗದಲ್ಲಿ ಏರ್ಪಡಿಸಿದ್ದ ಹಾಸನಾಂಬ ಚಲನಚಿತ್ರೋತ್ಸವ-2025 ಅನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರು ಉದ್ಘಾಟಿಸಿದರು.

ಹಾಸನಾಂಬ ಮತ್ತು ಸಿದ್ದೇಶ್ವರ ಜಾತ್ರಾ ಮಹೋತ್ಸವ ಸಂದರ್ಭದಲ್ಲಿ ಕಿರು ಚಿತ್ರಗಳ ಚಲನಚಿತ್ರೋತ್ಸವ ಏರ್ಪಾಡು ಮಾಡುವ ಮೂಲಕ ಹಾಸನದ ಹಿರಿಮೆಯನ್ನು ಸಾಂಸ್ಕೃತಿಕವಾಗಿ ಹೆಚ್ಚಿಸಲು ಹೊಸ ಪ್ರಯತ್ನ ಮಾಡಿದಂತಾಗಿದೆ ಎಂದರು.

ಹಾಸನ ಕಲಾವಿದರಿಗೆ ಹುಟ್ಟು ನೀಡಿದ ಭೂಮಿ. ಹಾಸನದ ದನಗಳ ಜಾತ್ರೆ ಒಂದು ಕಾಲಕ್ಕೆ ನಾಡಿಗೆ ಹೆಸರುವಾಸಿ. ಇಂಥ ನೆಲದಲ್ಲಿ ಕಿರು ಚಿತ್ರೋತ್ಸವ ನಡೆಯುತ್ತಿರುವುದು ಅಭಿನಂದನಾರ್ಹ ಎಂದರು.

ಎರಡು ದಿನಗಳ ಕಾಲ ನಡೆದ ಈ ಚಲನಚಿತ್ರೋತ್ಸವದಲ್ಲಿ 10 ಕಿರುಚಿತ್ರಗಳು, 2 ವಿಶೇಷ ಕಿರುಚಿತ್ರಗಳು ಹಾಗೂ 3 ಕನ್ನಡ ಚಲನಚಿತ್ರಗಳು ಪ್ರದರ್ಶನಗೊಂಡವು. ಪ್ರೇಕ್ಷಕರಿಂದ ಉತ್ತಮ ಉತ್ಸಾಹಭರಿತ ಪ್ರತಿಕ್ರಿಯೆ ದೊರೆಯಿತು.



ಉದ್ಘಾಟನಾ ಸಮಾರಂಭದಲ್ಲಿ ಹಾಸನ ಮಹಾನಗರ ಪಾಲಿಕೆಯ ಉಪ ಮಹಾಪೌರ ಹೇಮಲತಾ ಕಮಲ್ ಕುಮಾರ್, ನಗರಸಭೆಯ ಮಾಜಿ ಸದಸ್ಯ ಕಮಲ್ ಕುಮಾರ್, ನಮ್ಮ ಹಾಸನ ಟಿವಿ ಪ್ರಧಾನ ಸಂಪಾದಕ ತೌಫಿಕ್ ಅಹಮ್ಮದ್, ಹಾಗೂ ಆಯೋಜಕರಾದ ಗುರು ಪ್ರಸಾದ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದರು.

ವಿಭಿನ್ನ ವಿಭಾಗಗಳಲ್ಲಿ ಆಯ್ಕೆಯಾದ ಅತ್ಯುತ್ತಮ ಕಿರುಚಿತ್ರಗಳಿಗೆ ಪ್ರಶಸ್ತಿಗಳನ್ನು ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಪ್ರದಾನ ಮಾಡಿದರು. ಬಳಿಕ ಸಾಧಕರಿಗೆ ಸನ್ಮಾನಿಸಲಾಯಿತು.

ಆಯೋಜನಾ ಸಮಿತಿಯಲ್ಲಿ ಗುರು ಪ್ರಸಾದ್, ಸ್ಟಾನಿ ಜೋಯ್ಸನ್, ಶಕೀಲ್ ಅಹಮ್ಮದ್, ಪ್ರಶಾಂತ್ ಹಾಸನ್, ಪರಮೇಶ್ ದೊಡ್ಡಮಗ್ಗೆ, ದೇವರಾಜ್ ರಾಯಚೂರು, ಜೀವನ್ ರತ್ನ, ವಿನಾಯಕ್ ಬಿದಾರ್ ಹಾಗೂ ನಾಗರಾಜ್ ಭಂಡಾರಿ ಹಾಜರಿದ್ದರು. ಹಾಸನದ ನಿರೂಪಕರಾದ ಕಾರ್ತಿಕ್, ರಕ್ಷಿತಾ ಕಾರ್ತಿಕ್ ಮತ್ತು ಮಿಲನ ಗೌಡ ಅವರು ಮನೋಜ್ಞವಾಗಿ ನಿರೂಪಿಸಿದರು.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು