Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ರೈತರನ್ನು ಉದ್ಯಮಿಗಳನ್ನಾಗಿ ರೂಪಿಸುವುದು ಸರ್ಕಾರದ ಗುರಿ: ಚಲುವರಾಯಸ್ವಾಮಿ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
 ಭಾರತದ ಕೃಷಿ ತಂತ್ರಯೋಜನೆ ಕೇವಲ ಉತ್ಪಾದನೆಯಿಂದ ಲಾಭದಾಯಕತೆಯತ್ತ ಮಾತ್ರವಲ್ಲದೆ ಇತ್ತೀಚೆಗೆ ಮಹತ್ವದ ಬದಲಾವಣೆಯನ್ನು  ಕಂಡಿದ್ದು,ರೈತರನ್ನು ಉದ್ಯಮಿಗಳಾಗಿ ರೂಪಿಸುವ ಉದ್ದೇಶದಿಂದ ಮೌಲ್ಯವರ್ಧನೆ, ಬ್ರಾಂಡಿಂಗ್ ಮತ್ತು ಮಾರುಕಟ್ಟೆ ಸಂಪರ್ಕಗಳ ಮೇಲೆ ಹೆಚ್ಚು ಗಮನ ಹರಿಸಲಾಗುತ್ತಿದೆ ಎಂದು  ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು.

ಕಬ್ಬನ್ ಪಾರ್ಕ ನಲ್ಲಿರುವ ಬ್ಯಾಂಡ್ ಸ್ಟ್ಯಾಂಡ್ ನಲ್ಲಿ ಅಗ್ರಿ ವಾಕ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಕೃಷಿ ಸಚಿವರು,ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿರಂತರ ಪ್ರಯತ್ನಗಳಿಂದ ಕೃಷಿ ಉತ್ಪಾದನೆ ಸ್ಥಿರವಾಗಿ ಇತ್ತೀಚೆಗೆ ಹೆಚ್ಚಾಗಿದೆ, ಇದರಿಂದ ದೇಶವು  ಇತರೆ ರಾಷ್ಟ್ರಗಳನ್ನು ಮೀರಿ ಮುನ್ನಡೆಯಲು ಸಾಧ್ಯವಾಗಿದೆ ಎಂದು ಅವರು ತಿಳಿಸಿದರು.

 “ಈಗ ನಮ್ಮ ಮುಂದಿರುವ ಸವಾಲುಗಳು ಕೇವಲ ಕೃಷಿ ಉತ್ಪಾದನೆ ಹೆಚ್ಚಳ ಮಾತ್ರವಲ್ಲ, ರೈತರು ತಮ್ಮ ಉತ್ಪನ್ನಗಳನ್ನು ಸಂಸ್ಕರಿಸಿ ಮೌಲ್ಯವರ್ಧನೆ ಮಾಡಿ ನೇರವಾಗಿ ಮಾರುಕಟ್ಟೆಗೆ ತಲುಪುವ ಮೂಲಕ ಹೆಚ್ಚು ಆದಾಯ ಗಳಿಸುವಂತಾಗಬೇಕು ಎಂದು ಹೇಳಿದರು.

ಯುವ ರೈತರನ್ನು ಕೃಷಿ ಉದ್ಯಮಿಗಳಾಗಿ ಸಬಲೀಕರಿಸುವುದು ಸರ್ಕಾರದ ನೀತಿ ಚೌಕಟ್ಟಿನ ಪ್ರಮುಖ ಆದ್ಯತಾ ವಿಷಯವಾಗಿದೆ. ಈ ದೃಷ್ಟಿಕೋನದಿಂದ ಇದೇ ಫೆಬ್ರವರಿ 6ರಿಂದ ಫೆಬ್ರವರಿ 8ರವರೆಗೆ ಬೆಂಗಳೂರಿನ ಅರಮನೆ ಮೈದಾನದ ತ್ರಿಪುರವಾಸಿನಿ ಗೇಟು ಮೈದಾನದಲ್ಲಿ ನಡೆಯಲಿರುವ ಕೃಷಿ ಮೇಳ ಆಯೋಜಿಸಲಾಗುತ್ತಿದೆ ಎಂದರು.

ಮೂರು ದಿನಗಳ ಈ ಕಾರ್ಯಕ್ರಮವು ರೈತರಿಗೆ ತಂತ್ರಜ್ಞಾನ, ಬ್ರಾಂಡಿಂಗ್ ಅವಕಾಶಗಳು ಮತ್ತು ರಾಷ್ಟ್ರೀಯ ಮಾರುಕಟ್ಟೆಗಳೊಂದಿಗೆ ಸಂಪರ್ಕ ಸಾಧಿಸುವ ವೇದಿಕೆಯಾಗಲಿದೆ. ರೈತ ಉತ್ಪಾದಕ ಸಂಸ್ಥೆಗಳು (FPOs) ಸೇರಿದಂತೆ 300ಕ್ಕೂ ಹೆಚ್ಚು ಮಳಿಗೆಗಳು ಆಧುನಿಕ ಯಂತ್ರೋಪಕರಣಗಳು, ಸಂಸ್ಕರಣಾ ತಂತ್ರಗಳು ಮತ್ತು ಕೃಷಿ ಮೌಲ್ಯ ಸರಪಳಿಯ ಸಂಪೂರ್ಣ ವ್ಯಾಪ್ತಿಯನ್ನು ಒಳಗೊಂಡ ನವೀನತೆಗಳನ್ನು ಪ್ರದರ್ಶಿಸಲಿವೆ ಎಂದು ಕೃಷಿ ಸಚಿವರು ಹೇಳಿದರು.

ಈ ಕೃಷಿ ಮೇಳವನ್ನು ಫೆಬ್ರವರಿ 6ರಂದು ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳು ಉದ್ಘಾಟಿಸಲಿದ್ದು, ಸಮಾರೋಪ ಸಮಾರಂಭದಲ್ಲಿ ಕೇಂದ್ರ ಸಚಿವರು ಭಾಗವಹಿಸುವ ನಿರೀಕ್ಷೆಯಿದೆ. ಹಲವು ಸಚಿವರು, ಹಿರಿಯ ಅಧಿಕಾರಿಗಳು, ಕೃಷಿ ತಜ್ಞರು ಮತ್ತು ವಿಜ್ಞಾನಿಗಳು ಭಾಗವಹಿಸಿ, ಸಮಕಾಲೀನ ಕೃಷಿ ಪದ್ಧತಿಗಳು ಮತ್ತು ಮಾರುಕಟ್ಟೆ ಆಧಾರಿತ ಕೃಷಿಯ ಕುರಿತು ಮಾರ್ಗದರ್ಶನ ನೀಡಲಿದ್ದಾರೆ.

ರೈತರಿಗೆ ವಿವಿಧ ಹವಾಮಾನ ಪರಿಸ್ಥಿತಿಗಳಲ್ಲಿ ವರ್ಷಪೂರ್ತಿ ಎದುರಾಗುವ ಸವಾಲುಗಳನ್ನು ಎದುರಿಸಲು ಹಾಗೂ ಮಾರುಕಟ್ಟೆ ಬೇಡಿಕೆಗೆ ಅನುಗುಣವಾಗಿ ಉತ್ಪಾದನೆಯನ್ನು ಹೊಂದಾಣಿಕೆ ಮಾಡಲು ಅಗತ್ಯ ಜ್ಞಾನ ಒದಗಿಸುವುದು ಕೃಷಿ ಇಲಾಖೆಯ ಉದ್ದೇಶವಾಗಿದೆ. ಈ ಕಾರ್ಯಕ್ರಮದಲ್ಲಿ ಎಲ್ಲ ಸಂಬಂಧಪಟ್ಟ ಹಿತಾಸಕ್ತಿದಾರರು ಭಾಗವಹಿಸಿ ಮೇಳವನ್ನು ಯಶಸ್ವಿಗೊಳಿಸಬೇಕೆಂದು ಸಚಿವ ಎನ್ ಚಲುವರಾಯ ಸ್ವಾಮಿ ಅವರು ಮನವಿ ಮಾಡಿದರು.

ಅಗ್ರಿ ವಾಕ್ ಕಾರ್ಯಕ್ರಮದಲ್ಲಿ ಕೃಷಿ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತ ವೈ‌ಎಸ್.ಪಾಟೀಲ್, ಕೃಷಿ ಬೆಲೆ ಆಯೋಗದ ಆಯುಕ್ತ ಅರವಿಂದ ದಳವಾಯಿ, ಕೃಷಿ ಇಲಾಖೆ ನಿರ್ದೇಶಕ ಡಾ.ಜಿ.ಟಿ.ಪುತ್ರ, ಜಲಾನಯನ ಅಭಿವೃದ್ಧಿ ಇಲಾಖೆ ನಿರ್ದೇಶಕ ಬಂಥನಾಳ್, ಸೆಕಂಡರಿ ಅಗ್ರಿಕಲ್ಚರ್ ನಿರ್ದೇಶಕ ವೆಂಕಟರಮಣರೆಡ್ಡಿ ಸೇರಿದಂತೆ ಇತರೆ ಗಣ್ಯರು ಭಾಗವಹಿಸಿದ್ದರು.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು