Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ರಾಜ್ಯದ ಮೊದಲ ‘ಗಾಂಧಿ ಸ್ಮಾರಕ ಸ್ತಂಭ’ ಅನಾವರಣಗೊಳಿಸಿದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಹಾತ್ಮ ಗಾಂಧೀಜಿಯವರು ಕರ್ನಾಟಕದಲ್ಲಿ ಭೇಟಿ ನೀಡಿದ್ದ ವಿವಿಧ
87 ಐತಿಹಾಸಿಕ ಸ್ಥಳಗಳಲ್ಲಿ ‘ಗಾಂಧಿ ಸ್ಮಾರಕ ಸ್ತಂಭ’ ಸ್ಥಾಪಿಸುವ ಕರ್ನಾಟಕ ಸರ್ಕಾರದ ಆಯವ್ಯಯ ಘೋಷಣೆಯ ಭಾಗವಾಗಿ, ರಾಜ್ಯದ ಮೊದಲ ಗಾಂಧಿ ಸ್ಮಾರಕ ಸ್ತಂಭವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಬೆಂಗಳೂರಿನ ಇಂದಿನ ಸರ್ಕಾರಿ ಕಲಾ ಕಾಲೇಜು (GAS ಕಾಲೇಜು) ಆವರಣದಲ್ಲಿ ಅನಾವರಣಗೊಳಿಸಿದರು.

ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಬೆಳಗಾವಿಯಲ್ಲಿ ನಡೆದ ಐತಿಹಾಸಿಕ ಕಾಂಗ್ರೆಸ್ ಅಧಿವೇಶನಕ್ಕೆ 100 ವರ್ಷಗಳು ಪೂರೈಸಿದ ನೆನಪಿಗಾಗಿ "ಗಾಂಧಿ ಭಾರತ" ಅಭಿಯಾನದಡಿಯಲ್ಲಿ ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಈ ಸ್ಮಾರಕ ಸ್ತಂಭಗಳನ್ನು ನಿರ್ಮಿಸಲಾಗುತ್ತಿದೆ.

Advertisement

ಶಾಸಕರು ಹಾಗೂ ಗಾಂಧಿ ಭಾರತ ಶತಮಾನೋತ್ಸವ ಸಮಿತಿ ಅಧ್ಯಕ್ಷ ಎಚ್. ಕೆ. ಪಾಟೀಲ, ಕರ್ನಾಟಕ ವಿಧಾನ ಪರಿಷತ್ತಿನ ಮಾಜಿ ಸಭಾಪತಿ ಹಾಗೂ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಅಧ್ಯಕ್ಷ ಬಿ.ಎಲ್.ಶಂಕರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಾರ್ಯದರ್ಶಿ ಜೆ. ಮಂಜುನಾಥ್ ಸೇರಿದಂತೆ ಗಾಂಧಿ ಭಾರತ ಸಮಿತಿಯ ಪದಾಧಿಕಾರಿಗಳು,  ಸರ್ಕಾರಿ ಕಲಾ ಕಾಲೇಜಿನ ಪ್ರಾಧ್ಯಾಪಕರು, ಅಪಾರ ಸಂಖ್ಯೆಯ ವಿಧ್ಯಾರ್ಥಿಗಳು  ಈ ‌ಮಹತ್ವದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಇದೇ ಸಂದರ್ಭದಲ್ಲಿ ಗಾಂಧಿ ಸ್ಮಾರಕ ಸ್ತಂಭ  ಸಿದ್ದಡಿಸಿದ ಮೈಸೂರಿನ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್, ಸರ್ಕಾರಿ ಕಲಾ ಕಾಲೇಜಿನ ಪ್ರಾಂಶುಪಾಲ ನಾಗೇಂದ್ರ ಕುಮಾರ್ ಜಿ.ಸಿ. ನಿರ್ಮಿತಿ ಕೇಂದ್ರದ ಅಭಿಯಂತರ ರಾಜೀವ್ ಅವರನ್ನು ಸನ್ಮಾನಿಸಿದರು. ಅಲ್ಲದೇ ಈ ಮಹತ್ವದ ಕಾರ್ಯಕ್ರಮಕ್ಕೆ ಸಾಕ್ಷಿಯಾದಂತೆ ಸರ್ಕಾರಿ ಕಲಾ ಕಾಲೇಜಿನಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳು ಗಿಡ ನೆಟ್ಟು ನೀರೆರದರು.

ಬೆಂಗಳೂರಿನ ಐತಿಹಾಸಿಕ ಕ್ಷಣ: ಮಹಾತ್ಮ ಗಾಂಧೀಜಿಯವರು ತಮ್ಮ ಪತ್ನಿ ಕಸ್ತೂರಬಾ ಅವರೊಂದಿಗೆ 1915ರ ಮೇ 8ರ ಶನಿವಾರದಂದು ಪ್ರಥಮ ಬಾರಿಗೆ ಬೆಂಗಳೂರಿಗೆ ಆಗಮಿಸಿದ್ದರು. ಅಂದು ಆಗಿನ ಸರ್ಕಾರಿ ಪ್ರೌಢಶಾಲೆಗೆ (ಇಂದಿನ ಸರ್ಕಾರಿ ಕಲಾ ಕಾಲೇಜು) ಭೇಟಿ ನೀಡಿ, ತಮ್ಮ ರಾಜಕೀಯ ಗುರುಗಳಾಗಿದ್ದ ಗೋಪಾಲಕೃಷ್ಣ ಗೋಖಲೆ ಅವರ ಭಾವಚಿತ್ರವನ್ನು ಅನಾವರಣಗೊಳಿಸಿದ್ದರು. ಅದರ ನೆನಪಿಗಾಗಿ ಈ ಸಭಾಂಗಣಕ್ಕೆ ಬಾಪೂಜಿ ಅವರ ಹೆಸರು ಇರಿಸಲಾಗಿದ್ದು, ಈಗ ಇದೇ ಆವರಣದಲ್ಲಿ ಮೊದಲ ಗಾಂಧಿ ಸ್ಮಾರಕ ಸ್ತಂಭ ನಿರ್ಮಿಸಲಾಗಿದೆ.

ಆಕರ್ಷಕ ಸ್ಮಾರಕ ಸ್ತಂಭದ ವಿವರ:
ಶಿಲ್ಪಿ: ಮೈಸೂರಿನ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಅವರು ಈ ಸ್ಮಾರಕದ ಆಕರ್ಷಕ ಕಲಾಕೃತಿಯನ್ನು ಸಿದ್ಧಪಡಿಸಿದ್ದು
, ಸ್ಮಾರಕವು 10 ಅಡಿ ಎತ್ತರ ಹಾಗೂ 3 1/4 (ಮೂರು ಕಾಲು) ಅಡಿ ಅಗಲದ ಏಕಶಿಲಾ ಗ್ರಾನೈಟ್ ಕಲಾಕೃತಿ ಹೊಂದಿದೆ.

ವಿನ್ಯಾಸ: ಸ್ತಂಭದ ಮೇಲ್ಭಾಗದಲ್ಲಿ ನಾಲ್ಕು ಮುಖ ಸಿಂಹವುಳ್ಳ ರಾಷ್ಟ್ರೀಯ ಲಾಂಛನ, ಅದರ ಕೆಳಗೆ ಅಶೋಕ ಚಕ್ರ, ಧ್ಯಾನಸ್ಥ ಮಹಾತ್ಮ ಗಾಂಧೀಜಿ, ಅವರು ಬೋಧಿಸಿದ ಸಪ್ತ ಸಾಮಾಜಿಕ ಪಾತಕಗಳು, ಗಾಂಧೀಜಿಯವರ ಸಹಿ ಹಾಗೂ ಚರಕದ ಚಿತ್ರಣವಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಎಂ. ಎನ್. ಅನುಚೇತ್ ತಿಳಿಸಿದ್ದಾರೆ.

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
​ ಇಮ್ರಾನ್-ಆಶಾ ಆತ್ಮಹತ್ಯೆ, ಸಾಮಾಜಿಕ ಜಾಲತಾಣದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ: 11 ಇನ್‌ಸ್ಟಾಗ್ರಾಮ್ ಖಾತೆ ಬಳಕೆದಾರರ ವಿರುದ್ಧ FIRಹಿರಿಯೂರು ತಾಲೂಕಿನ ಮೇಟಿಕುರ್ಕೆಯಲ್ಲಿ ಇಂದು ‘ಸಮಾನತೆಗಾಗಿ ಸಹಭೋಜನ’ ಕಾರ್ಯಕ್ರಮಕೊಡಗಿನ ದಸರಾ; ಕರಗೋತ್ಸವದಿಂದ ಜನೋತ್ಸವದವರೆಗೆ:….ಹನಿಟ್ರ್ಯಾಪ್ ಸಂಚು ಪ್ರಶ್ನಿಸಿದ್ದಕ್ಕೆ ಜೆಡಿಎಸ್ ಕಾರ್ಯಕರ್ತರ ಮೇಲೆ ಸರ್ಕಾರದ ದೌರ್ಜನ್ಯ: ಕುಮಾರಸ್ವಾಮಿಜೆಡಿ(ಎಸ್) ಕಾರ್ಯಕರ್ತರ ಗುರಿ: ಪೊಲೀಸ್ ಕಮಿಷನರ್ ಕಚೇರಿ ಮುಂದೆ ಎಚ್.ಡಿ ಕುಮಾರಸ್ವಾಮಿ ಪ್ರತಿಭಟನೆಗ್ರಾಮೀಣ, ನಗರ ಸ್ಥಳೀಯ ಸಂಸ್ಥೆಗಳಿಗೂ ಜಿಎಸ್‌ಟಿ ಪಾಲು: ಪ್ರಸ್ತಾವನೆ ಸಲ್ಲಿಸಲು ಸಿಎಂ ನಿರ್ಧಾರಅಮೆರಿಕದ ಹಿಂದೂ ದೇವಾಲಯದ ಮೇಲೆ ಸಾಮೂಹಿಕ ಗುಂಡಿನ ದಾಳಿಗೆ ಸಂಚು: 19 ವರ್ಷದ ಯುವಕ ಬಂಧನಧಾರ್ಮಿಕ ಮತಾಂತರಕ್ಕೆ ಸಿಗಲ್ಲ ಜಾತಿ ಮೀಸಲಾತಿ: ಸುಪ್ರೀಂ ಕೋರ್ಟ್ಹಾಲಿವುಡ್ ಗಾಯಕಿ ಮೇರಿ ಮಿಲ್‌ಬೆನ್ ಸ್ಫೋಟಕ ಆರೋಪ: ಭಾರತದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳಿಗೆ ಅಮೆರಿಕದಿಂದ ಹಣಕಾಸು ನೆರವು!ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆಗೆ ಹಾಲಿವುಡ್ ಗಾಯಕಿ ಮೇರಿ ಮಿಲ್ಬೆನ್ ಎಚ್ಚರಿಕೆ