Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Health & Fitness

ಎದೆ ಹಾಲು ಕುಡಿದು ಬೆಳೆದ ಮಕ್ಕಳು ಆರೋಗ್ಯವಂತರಾಗಿರುತ್ತಾರೆ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಎದೆ ಹಾಲು ಕುಡಿದು ಬೆಳೆದ ಮಕ್ಕಳಿಗೆ ಸಕ್ಕರೆ ಕಾಯಿಲೆ
, ರಕ್ತನಾಳ ಗಡುಸಾಗುವಿಕೆ ಮುಂತಾದ ರೋಗಗಳಿಗೆ ತುತ್ತಾಗುವ ಸಾಧ್ಯತೆ ಕಡಿಮೆ ಎಂದು ಅಧ್ಯಯನಗಳಿಂದ ಸಾಬೀತಾಗಿದ್ದು ಬಾಣಂತಿಯರು ಕಡ್ಡಾಯವಾಗಿ ಮಕ್ಕಳಿಗೆ ಕನಿಷ್ಠ ಎರಡು ವರ್ಷಗಳ ತನಕ ಎದೆ ಹಾಲು ಉಣಿಸುವಂತೆ ಜಿಲ್ಲಾ ಪೌಷ್ಟಿಕ ಮೇಲ್ವಿಚಾರಕಿ ಮನವಿ ಮಾಡಿದರು.


ಇಲ್ಲಿನ ಯುಎಚ್ ಪಿಸಿ ವತಿಯಿಂದ ನೆಹರು ನಗರ ಮೂರನೇ ಕ್ರಾಸ್ ನಲ್ಲಿರುವ ಅಂಗನವಾಡಿ ಕೇಂದ್ರದಲ್ಲಿ ಗುರುವಾರ ಆಯೋಜಿಸಿದ್ದ ಪೌಷ್ಟಿಕ ಆಹಾರ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.


ಮಕ್ಕಳಿಗೆ ಸ್ತನಪಾನ ಮಾಡಿಸುವುದರಿಂದ ಮಗುವಿಗಷ್ಟೇ ಅಲ್ಲ, ತಾಯಿಗೂ ವರದಾನ. ಆದ್ದರಿಂದ ತಾಯಿ ಅನವಶ್ಯವಾಗಿ ಅನ್ಯರ ಮಾತುಗಳಿಗೆ ಕಿವಿಗೊಡದೆ ಕಡ್ಡಾಯವಾಗಿ ಶಶಿಗಳಿಗೆ ಹಾಲುಣಿಸಬೇಕು ಎಂದು ಅವರು ತಿಳಿಸಿದರು.
ಮಕ್ಕಳಿಗೆ ಎದೆ ಹಾಲು ಊಣಿಸುವುದರ ಬಗ್ಗೆ ಮಹಿಳೆಯರಲ್ಲಿ ತಪ್ಪು ಕಲ್ಪನೆ ಇದೆ.


ತಮ್ಮ ದೈಹಿಕ ಸೌಂದರ್ಯ ಹಾಳಾಗುತ್ತದೆಂಬ ತಪ್ಪು ನಂಬಿಕೆಯಿಂದ ಮಗುವನ್ನು ತಾಯಿ ಹಾಲಿನಿಂದ ವಂಚಿಸುತ್ತಿದ್ದಾರೆ. ಆದರೆ ಎದೆ ಹಾಲು ಮಗುವಿಗೆ ಅವಶ್ಯವಿರುವ ಎಲ್ಲ ಪೌಷ್ಟಿಕಾಂಶಗಳನ್ನೊಳಗೊಂಡ, ಯಾವುದೇ ಕಲ್ಮಶವಿರದ ನೈಸರ್ಗಿಕ ಆಹಾರ. ತಾಯಿ ಎದೆ ಹಾಲು ಮಗು ಜನಿಸಿದ ನಂತರ ಎದುರಾಗುವ ಅನೇಕ ರೋಗ-ರುಜಿನಗಳನ್ನು ಶಮನವಾತ್ತದೆ ಎಂದರು.

, ಸಿ, ಡಿ, ಜೀವಸತ್ವಗಳು ಮಗುವನ್ನು ಇರುಳುಗಣ್ಣು, ರಿಕೆಟ್ಸ್‌ನಂಥ ಅನೇಕ ಭೀಕರ ರೋಗಗಳಿಂದ ದೂರವಿಡುತ್ತದೆ. ಈ ಎದೆಹಾಲು ಮಗುವಿನ ಆರೋಗ್ಯ ವರ್ಧಸಿ ಜತೆ-ಜತೆಗೇ ತಾಯಿ ಮಗುವಿನ ಆತ್ಮಿಯತೆ, ಪ್ರೀತಿಯೂ ಪರಸ್ಪರ ಜಾಸ್ತಿಯಾಗುತ್ತದೆ. ಮಗು ಬೆಳೆದಂತೆ ಅದರ ಆಹಾರ ಸೇವನೆ ಪ್ರಮಾಣವೂ ಹೆಚ್ಚುತ್ತದೆ. ಸಾಕಷ್ಟು ಪ್ರಮಾಣದಲ್ಲಿ ದಿನಪೂರ್ತಿ ಹಾಲು ಲಭ್ಯವಿರುತ್ತದೆ. ಎದೆ ಹಾಲು ಮಗುವಿನ ಮಿದುಳು ಹಾಗೂ ಮಾನಸಿಕ ಬೆಳವಣಿಗೆಗೆ ಅತ್ಯವಶ್ಯ ಎಂದು ಸಣ್ಣ ರಂಗಮ್ಮ ಹೇಳಿದರು.


ಇದೇ ಸಂದರ್ಭದಲ್ಲಿ ಪೌಷ್ಟಿಕ ಆಹಾರ, ವಿಶ್ವ ಜನಸಂಖ್ಯೆ ಹೆಚ್ಚಳ, ಬಾಲ್ಯ ವಿವಾಹ ತಡೆಗಟ್ಟುವಕೆ ಕುರಿತು ಜಾಗೃತಿ ಮೂಡಿಸಿದರು.


ಶಿಶು ಅಭಿವೃದ್ಧಿ ಯೋಜನೆ ಮೇಲ್ವಿಚಾರಕಿ ಮಂಜುಳಾ, ನೆಹರು ನಗರದ ಆರೋಗ್ಯ ಸಿಬ್ಬಂದಿಯವರು ಈ ಕಾರ್ಯಕ್ರಮದಲ್ಲಿ ಗರ್ಭಿಣಿಯರಿಗೆ ಬಾಣಂತಿಯರಿಗೆ ಹೆಚ್ಚಿನ ಮಾಹಿತಿ ನೀಡಿದರು.

 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಖಾಸಗಿ ವಿವಿಗಳು ಲಾಭಕೋರ ವ್ಯಾಪಾರಿ ಸಂಸ್ಥೆಗಳಲ್ಲ: ಸುಪ್ರೀಂ ಕೋರ್ಟ್ ಖಡಕ್ ಎಚ್ಚರಿಕೆ ಪಿಎಸ್‌ಐಗೆ ಕಪಾಳಮೋಕ್ಷ: ಎಸ್‌ಐ ಸವಿತಾ ಪಾಟೀಲ್ ಬಳಿ ವಿಡಿಯೋ ಮೂಲಕ ಕ್ಷಮೆ ಕೋರಿದ ಶಾಸಕ ಸುರೇಶ್ ಗೌಡ ಪುತ್ರಿ ಐಶ್ವರ್ಯಾ ಗೌಡಸರ್ಕಾರಿ ಬಸ್ ಗ್ಲಾಸ್ ಒಡೆದು ಕರ್ತವ್ಯಕ್ಕೆ ಅಡ್ಡಿ; 15 ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ಕಾಡು ಹಂದಿ ಬೇಟೆ: ವನ್ಯಜೀವಿ ಕಾಯ್ದೆಯಡಿ ಪೊಲೀಸರೇ ನೇರ ದೂರು ದಾಖಲಿಸುವುದು ಕಾನೂನುಬಾಹಿರ-ಹೈಕೋರ್ಟ್ಬೆಳ್ಳಂಬೆಳಗ್ಗೆ ಲೋಕಾಯುಕ್ತ ಕದನ: 8 ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ200 ರೂ. ಆಸೆಗೆ ಬಿದ್ದು 9.30 ಲಕ್ಷ ರೂ. ಕಳೆದುಕೊಂಡ ಯುವತಿ: 'ವರ್ಕ್ ಫ್ರಮ್ ಹೋಮ್' ಸೈಬರ್ ವಂಚನೆ ಬಯಲುಸಾಮಾನ್ಯ ಜನರಿಗೆ ಬೆಲೆ ಏರಿಕೆ ಬಿಸಿ: ದಿಢೀರ್ ಹೆಚ್ಚಾದ ಅಕ್ಕಿ ದರ, ಒಂದೇ ತಿಂಗಳಲ್ಲಿ ಎರಡನೇ ಬಾರಿ ಏರಿಕೆಉತ್ತರ ಪ್ರದೇಶ, ಉತ್ತರಾಖಂಡ ರಾಜ್ಯಸಭಾ ಚುನಾವಣೆ ಹಾಗೂ ಬಂಗಾಳ ಉಪಚುನಾವಣೆ ಘೋಷಣೆ ಸಚಿವ ಶಿವಲಿಂಗೇಗೌಡರ ವಿವಾದಾತ್ಮಕ ಹೇಳಿಕೆ: ಲೋಕಾಯುಕ್ತಕ್ಕೆ ದೂರು ದಾಖಲು, ರಾಜೀನಾಮೆಗೆ ಆಗ್ರಹಬೆಂಗಳೂರು ವಿಮಾನ ನಿಲ್ದಾಣದಲ್ಲಿ 28 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಹಾಗೂ ಚಿನ್ನ ವಶ, 6 ಜನರ ಬಂಧನ