Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಸ್ವಚ್ಛತೆ ಬಗ್ಗೆ ಜನಜಾಗೃತಿ ಮೂಡಿಸಬೇಕು: ನ್ಯಾ.ಕೆ.ಎನ್.ಫಣೀಂದ್ರ

ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು:
ಮನೆ
, ಬೀದಿ, ಇಡೀ ಊರನ್ನು ಶುಚಿಯಾಗಿಟ್ಟುಕೊಳ್ಳುವ ಬಗ್ಗೆ ಸಾರ್ವಜನಿಕರಲ್ಲಿ ಕಾನೂನು ತಿಳುವಳಿಕೆ ಮೂಲಕ ಬಿತ್ತುವ ಮೂಲಕ ಜಾಗೃತಿ ಮೂಡಿಸುವ ಕಾರ್ಯವನ್ನು ಕೈಗೊಳ್ಳಬೇಕೆಂದು ಕಾನೂನು ಸೇವಾ ಪ್ರಾಧಿಕಾರ, ಪುರಸಭಾ ಆಡಳಿತ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿಗೆ ಕರ್ನಾಟಕ ಉಪಲೋಕಾಯುಕ್ತ ಗೌರವಾನ್ವಿತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ಕರೆ ನೀಡಿದರು.

ನಗರಾಭಿವೃದ್ಧಿ ಇಲಾಖೆ, ನಗರಸಭೆ ಆಶ್ರಯದಲ್ಲಿ ಸ್ವಚ್ಛೋತ್ಸವ ಕಾರ್ಯಕ್ರಮದಡಿ ಸೆಪ್ಟಂಬರ್ ೧೭ ರಿಂದ ಅಕ್ಟೋಬರ್ ಎರಡರವರೆಗೆ ನಡೆಯಲಿರುವ ಸ್ವಚ್ಛತೆಯೇ ಸೇವೆಯಡಿ ಆಯೋಜಿಸಿದ್ದ ಹನುಮಂತಪ್ಪ ವೃತ್ತದಿಂದ ಆಜಾದ್‌ಪಾರ್ಕ್‌ವರೆಗೆ ಜಾಥಾವನ್ನು ಇಂದು ಬೆಳಿಗ್ಗೆ ತಾಲ್ಲೂಕು ಕಚೇರಿ ಆವರಣದಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು.

ಒಂದು ಗಂಟೆ ಕಾಲ ಎಲ್ಲರೂ ಸೇರಿ ನಡೆಸುತ್ತಿರುವ ಶ್ರಮದಾನವಿದು. ಹಾಗೆಂದು ಸ್ವಚ್ಛತಾ ಆಂದೋಲನ ಅಕ್ಟೋಬರ್ ಎರಡಕ್ಕೆ ಮುಕ್ತಾಯವಾಗಬಾರದು; ಆಡಳಿತ ವ್ಯವಸ್ಥೆಗಳು ಈ ವಿಚಾರದಲ್ಲಿ ಕಟಿಬದ್ಧವಾಗಿ ಕಾರ್ಯ ನಿರ್ವಹಿಸಬೇಕು. ಈ ಆಂದೋಲನ ಹಳ್ಳಿ ಹಳ್ಳಿಯಲ್ಲೂ ಜನಾಂದೋಲನವಾಗಿ ರೂಪುಗೊಳ್ಳಬೇಕು. ಎಲ್ಲೆಡೆ ಕೆರೆಕಟ್ಟೆಯನ್ನು ಶುಚಿಯಾಗಿ ಉಳಿಸಿಕೊಂಡರೆ ನಮ್ಮ ದೇಶಕ್ಕೆ ಕೊಡುಗೆ ನೀಡಿದಂತಾಗುತ್ತದೆ ಎಂದು ಅವರು ಹೇಳಿದರು.

ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಬೇಕಾದರೆ ಮುಖ್ಯವಾಗಿ ಬೇಕಾಗಿರುವುದು ಸ್ವಚ್ಛತೆ. ಜನರಲ್ಲಿ ಕೂಡ ಈ ಬಗ್ಗೆ ಸಾಮಾಜಿಕ ಕಳಕಳಿಯಾಗಲಿ, ಜಾಗೃತಿಯಾಗಲಿ, ತಿಳುವಳಿಕೆಯಾಗಲಿ ಇಲ್ಲ. ಈ ಬಗ್ಗೆ ಸರ್ಕಾರಿ ಅಧಿಕಾರಿಗಳು ಈ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು. ಜನರನ್ನು ಒಗ್ಗೂಡಿಸಿ ಈ ಬಗ್ಗೆ ಕಾರ್ಯಪ್ರವೃತ್ತರಾಗಬೇಕು ಎಂದು ಸೂಚಿಸಿದರು.

ನಗರಸಭೆ ಅಧ್ಯಕ್ಷೆ ಶೀಲಾ ದಿನೇಶ್ ಅವರು ಮಾತನಾಡಿ, ಈ ನಗರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಬೇಕೆಂದು ಸಂಕಲ್ಪ ಮಾಡಿದ್ದು, ಪೌರ ಕಾರ್ಮಿಕರು ಈ ವಿಚಾರದಲ್ಲಿ ಸಂಪೂರ್ಣ ಸಹಕಾರವನ್ನು ನೀಡಿದ್ದಾರೆ. ಸ್ವಚ್ಛ ಭಾರತ್ ಯೋಜನೆಯಡಿ ಇಡೀ ನಗರವನ್ನು ಶುಚಿಯಾಗಿಟ್ಟುಕೊಳ್ಳುವುದಕ್ಕೆ ನಾವೆಲ್ಲ ಪಣತೊಡುವುದಾಗಿ ತಿಳಿಸಿದರು.

ಪೌರಾಯುಕ್ತ ಬಿ.ಸಿ.ಬಸವರಾಜು ಮಾತನಾಡಿ, ದೇಶಾದ್ಯಂತ ಸ್ವಚ್ಛತಾ ಇ ಸೇವಾ ಕಾರ್ಯಕ್ರಮದಡಿ ಸಾರ್ವಜನಿಕರಲ್ಲಿ ಸ್ವಚ್ಛತೆ ಬಗ್ಗೆ ಅರಿವು ಮೂಡಿಸುವ ಕಾರ್ಯ ನಡೆಯುತ್ತಿದೆ. ಸಾರ್ವಜನಿಕರು ನಗರದಿಂದ ಅಗತ್ಯವಿರುವ ವಸ್ತುಗಳನ್ನು ಖರೀದಿಸುವ ಕಾಲಕ್ಕೆ ಪ್ಲಾಸ್ಟಿಕ್ ಚೀಲಗಳನ್ನು ಅವಲಂಬಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಪ್ಲಾಸ್ಟಿಕ್ ನಿಷೇಧಿಸುವ ಬಗ್ಗೆ ಜನರಲ್ಲಿ ಮಾನಸಿಕತೆ ಬೆಳೆಯಬೇಕು ಎಂದು ತಿಳಿಸಿದರು.

ರಾಜ್ಯಕ್ಕೆ ಮಾದರಿಯಾದ ಕಸದ ವಿಲೇವಾರಿ ಘಟಕವನ್ನು ಸ್ಥಾಪಿಸುತ್ತಿದ್ದು, ಸಾರ್ವಜನಿಕರು ಹಲವರು ಕಸವನ್ನು ಸಮರ್ಪಕವಾಗಿ ವಿಲೇವಾರಿ ಮಾಡುತ್ತಿಲ್ಲ. ಅಲ್ಲಲ್ಲಿ ಎಸೆಯುವ ಕೆಲಸ ಮಾಡುತ್ತಿದ್ದಾರೆ. ಜನರು ಹಸಿಕಸ ಹಾಗೂ ಒಣಕಸವನ್ನು ವಿಂಗಡಿಸುವ ಮೂಲಕ ಕಸ ವಿಲೇವಾರಿ ಮಾಡುವ ಆಟೋ ಟಿಪ್ಪರ್‌ಗಳಿಗೆ ಹಾಕಬೇಕೆಂದು ಸಲಹೆ ನೀಡಿದರು. ರಾಜ್ಯಕ್ಕೆ ಮಾದರಿಯಾದ ಗ್ರಾಮಸ್ಥರಿಗೆ ಸಮಸ್ಯೆಯಾಗದಂತೆ ಸ್ಥಳದಲ್ಲೇ ವಿಂಗಡಿಸಿ ವಿಲೇವಾರಿ ಮಾಡಲಾಗುವುದು.

ಜಿ.ಪಂ.ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹೆಚ್.ಎಸ್.ಕೀರ್ತನಾ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿ.ಹನುಮಂತಪ್ಪ, ಉಪಲೋಕಾಯುಕ್ತರ ಜೊತೆ ಆಗಮಿಸಿರುವ ಇತರ ನ್ಯಾಯಾಧೀಶ ಪೃಥ್ವಿರಾಜ್ ವರ್ಣೇಕರ್, ಶಿವಾಜಿ ಅನಂತ್ ನಲವಾಡೆ, ಹಿರಿಯ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿ.ಹನುಮಂತಪ್ಪ, ಆಪ್ತ ಕಾರ್ಯದರ್ಶಿ ಕಿರಣ್ ಪಿ.ಎಂ.ಪಾಟೀಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಮ್ ಅಮಟೆ, ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಪಿ.ಬಿ.ಸ್ನೇಹಾ, ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ, ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕ ತಿರುಮಲೇಶ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಉಪಲೋಕಾಯುಕ್ತ ನ್ಯಾ.ಕೆ.ಎನ್.ಫಣೀಂದ್ರ ಅವರು ಕಸಪೊರಕೆ ಹಿಡಿದು ಕಸಗುಡಿಸಿ ಚೀಲಗಳಿಗೆ ಕಸವನ್ನು ಹಾಕುವ ಮೂಲಕ ಸಾರ್ವಜನಿಕರಿಗೆ ಸಂದೇಶ ರವಾನಿಸಿದರಲ್ಲದೆ, ನಗರಸಭೆಯಿಂದ ಮನೆ ಮನೆಗಳಿಗೆ ಬಟ್ಟೆ ಬ್ಯಾಗ್‌ಗಳನ್ನು ವಿತರಿಸುವ ಕಾರ್ಯಕ್ಕೆ ಚಾಲನೆ ನೀಡಿದರು.

 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು