Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಕೃಷಿಗೆ ಹೆಚ್ಚಿನ ಆದ್ಯತೆ ನೀಡಿದ ಸಿಎಂ-ಕೃಷಿ ಸಚಿವರು

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
2025-26
ನೇ ಸಾಲಿನ ಬಜೆಟ್ ಕುರಿತು ಕೃಷಿ ಸಚಿವ ಚಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.
ಮುಖ್ಯಮಂತ್ರಿರವರು ಅತ್ಯಂತ ಜನಪರ ಬಜೆಟ್-2026 ಮಂಡಿಸಿದ್ದಾರೆ.
ಇದೊಂದು ಸಮತೋಲಿತ ಬಜೆಟ್ ಆಗಿದ್ದು, ಎಲ್ಲಾ ವರ್ಗದ ಜನರ ಶ್ರೇಯೋಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಸರ್ವರನ್ನು ಒಳಗೊಂಡ ಚಾರಿತ್ರಿಕ 2026-27ನೇ ಸಾಲಿನ ಆಯವ್ಯಯ ರೂಪಿಸಲಾಗಿದೆ.

ಬಜೆಟ್ನಲ್ಲಿ ಕೃಷಿಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ರೈತರ ಸಬಲೀಕರಣಕ್ಕೆ ಒತ್ತು ನೀಡಲಾಗಿದೆ. ಕೃಷಿ ಮತ್ತು ತೋಟಗಾರಿಕೆಗೆ ರೂ. 8373 ಕೋಟಿ ಮೀಸಲು. ಬಡವರು ಜನಸಾಮಾನ್ಯರಿಗೆ ಇನ್ನಷ್ಟು ಶಕ್ತಿ ತುಂಬುವಂತಹ ಅತ್ಯಂತ ಕಡಿಮೆ ತೆರಿಗೆಯ ಬಜೆಟ್ ಇದಾಗಿದೆ.  ಶಿಕ್ಷಣ, ಮಹಿಳಾ ಸಬಲೀಕರಣ, ಗ್ರಾಮೀಣಾಭಿವೃದ್ಧಿ, ನೀರಾವರಿ, ವಸತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕ್ಷೇತ್ರಗಳಿಗೆ ಹೆಚ್ಚಿನ ಆಧ್ಯತೆ ನೀಡಿ ಅನುದಾನ ಮೀಸಲಿರಿಸುವುದು ಸ್ವಾಗತಾರ್ಹ ಎಂದು ಚಲುವರಾಯಸ್ವಾಮಿ ಹೇಳಿದ್ದಾರೆ.

ಕೃಷಿ, ನೀರಾವರಿ ಮತ್ತು ಗ್ರಾಮೀಣಾಭಿವೃದ್ಧಿ ಕ್ಷೇತ್ರಕ್ಕೆ ಶೇಕಡಾ 13 ರಷ್ಟು ಅನುದಾನ ಮೀಸಲಿರಿಸಿದೆ.
ಎಲ್ಲಾ ಸಮಾಜಕ್ಕೂ ಬದುಕಿನ ಉನ್ನತೀಕರಣಕ್ಕೆ ಬೇಕಾಗುವಂತಹ ನೆರವು ಮತ್ತು ಪ್ರೋತ್ಸಾಹವನ್ನು ಗಮನದಲ್ಲಿಟ್ಟುಕೊಂಡು ಈ ಬಜೆಟ್ ಮಂಡಿಸಲಾಗಿದೆ. ಸನ್ಮಾನ್ಯ ಮುಖ್ಯಮಂತ್ರಿಗಳಿಗೆ, ಉಪ ಮುಖ್ಯಮಂತ್ರಿಗಳಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ.

ಕಳೆದ ಮೂರು ವರ್ಷಗಳಲ್ಲಿ ನಮ್ಮ ಸರ್ಕಾರವು ರೈತರ ಅಭ್ಯುದಯಕ್ಕಾಗಿ ಈ ಕೆಳಕಂಡ ಕ್ರಮಗಳನ್ನು ಕೈಗೊಂಡಿದೆ.
40
ಲಕ್ಷ ರೈತರಿಗೆ 468 ಕೋಟಿ ರೂ. ಮೊತ್ತದಲ್ಲಿ ಬಿತ್ತನೆ ಬೀಜಗಳಿಗೆ ಸಹಾಯಧನ ವಿತರಣೆ.
2,825
ಕೋಟಿ ವೆಚ್ಚ ಭರಿಸಿ 7 ಲಕ್ಷ ರೈತರಿಗೆ ಹನಿ ನೀರಾವರಿ ಘಟಕ ಸ್ಥಾಪನೆ ಹಾಗೂ 3.41 ಲಕ್ಷ ರೈತರಿಗೆ ಕೃಷಿ ಯಂತ್ರೋಪಕರಣಗಳ ವಿತರಣೆ.
ಕೃಷಿ ಹೊಂಡ: 363 ಕೋಟಿ ರೂ. ಮೊತ್ತದಲ್ಲಿ 32,138 ಕೃಷಿ ಹೊಂಡಗಳ ನಿರ್ಮಾಣ.

ಬೆಳೆ ವಿಮೆ ಪರಿಹಾರ: 51 ಲಕ್ಷ ರೈತರಿಗೆ 6,213 ಕೋಟಿ ಬೆಳೆ ವಿಮೆ ಪರಿಹಾರ. ಉಚಿತ ವಿದ್ಯುತ್: 36 ಲಕ್ಷ ನೀರಾವರಿ ಪಂಪ್ಸೆಟ್ಗಳಿಗೆ 48,000 ಕೋಟಿ ರೂ. ಉಚಿತ ವಿದ್ಯುತ್ ಸಹಾಯಧನ.
ಕೃಷಿ ಸಾಲ: 83 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ 70 ಸಾವಿರ ಕೋಟಿ ರೂ. ಕೃಷಿ ಸಾಲ ವಿತರಣೆ.

ಮುಖ್ಯಮಂತ್ರಿ ಕೃಷಿ ವಿಸ್ತಾರ ಯೋಜನೆ:
ಉತ್ಪಾದನೋತ್ತರ ಕೃಷಿ ಚಟುವಟಿಕೆಗಳಾದ ಸಂಸ್ಕರಣೆ, ಮೌಲ್ಯವರ್ಧನೆ, ಮೌಲ್ಯ ಸರಪಳಿ ಅಭಿವೃದ್ಧಿ, ಕೃಷಿ ತ್ಯಾಜ್ಯಗಳ ಮರುಬಳಕೆ ಹಾಗೂ ಮಾರುಕಟ್ಟೆ ಸಂಪರ್ಕಗಳನ್ನು ಸಮಗ್ರವಾಗಿ ಬಲಪಡಿಸುವ ಮೂಲಕ ಗ್ರಾಮೀಣ ರೈತರಿಗೆ ಸ್ಥಿರ ಮತ್ತು ಹೆಚ್ಚುವರಿ ಆದಾಯದ ಮೂಲಗಳನ್ನು ಸೃಜಿಸುವ ಉದ್ದೇಶದಿಂದ 'ಮುಖ್ಯಮಂತ್ರಿ ಕೃಷಿ ವಿಸ್ತಾರ' ಯೋಜನೆಯನ್ನು ಮುಂದಿನ ಮೂರು ವರ್ಷಗಳಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುವುದು.

ಮಿಲೆಟ್ ಹಬ್:
ರಾಜ್ಯದಲ್ಲಿ ಸಿರಿಧಾನ್ಯ ಮತ್ತು ಸಾವಯವ ಉತ್ಪನ್ನಗಳನ್ನು ಉತ್ತೇಜಿಸಲು ನಿರ್ಮಿಸಲಾಗುತ್ತಿರುವ ʼಮಿಲೆಟ್ ಹಬ್' ಅನ್ನು ರೈತರು, ಗ್ರಾಮೀಣ ಯುವಕರು ಮತ್ತು ನವ ಉದ್ಯಮಿಗಳಿಗೆ ತಾಂತ್ರಿಕ ಸಹಾಯ, ಸಂಸ್ಕರಣಾ ಸೌಲಭ್ಯ, ಗುಣಮಟ್ಟ ಪ್ರಮಾಣೀಕರಣ ಮತ್ತು ಮಾರುಕಟ್ಟೆ ಸಂಪರ್ಕಗಳನ್ನು ಒಂದೇ ಸೂರಿನಡಿ ಕಲ್ಪಿಸುವ ಏಕಗವಾಕ್ಷಿ ವ್ಯವಸ್ಥೆಯೊಂದಿಗೆ ಸ್ವಾವಲಂಬಿ ಸಂಸ್ಥೆಯನ್ನಾಗಿಸಲಾಗುವುದು.

ಪ್ರಯೋಗಾಲಯಗಳ ಉನ್ನತೀಕರಣ:
ರೈತರಿಗೆ ಮಣ್ಣು, ನೀರು, ಬೀಜ ಹಾಗೂ ರಸಗೊಬ್ಬರ ಪರೀಕ್ಷೆಗಳಲ್ಲಿ ನಿಖರ ಫಲಿತಾಂಶಗಳನ್ನು ಒದಗಿಸಿ ಕೃಷಿ ಉತ್ಪಾದಕತೆ ಹೆಚ್ಚಿಸಲು ಇಲಾಖೆಯ ಎಲ್ಲಾ ಪ್ರಯೋಗಾಲಯಗಳಿಗೆ NABL ಮಾನ್ಯತೆ ಪಡೆದು ವಿಶ್ವಾಸಾರ್ಹ ಹಾಗೂ ವೈಜ್ಞಾನಿಕ ಪರೀಕ್ಷಣಾ ಸೇವೆಗಳನ್ನು ಒದಗಿಸಲಾಗುವುದು.

ದ್ವಿದಳ ಧಾನ್ಯ ತಳಿಗಳ ಬಳಕೆಗೆ ಉತ್ತೇಜನ:
ನೂತನ ದ್ವಿದಳಧಾನ್ಯ ತಳಿಗಳ ಬಿತ್ತನೆ ಬೀಜಗಳ ಬಳಕೆಯನ್ನು ರೈತರಲ್ಲಿ ಪ್ರೇರೇಪಿಸಲು ನೀಡುತ್ತಿರುವ ಸಹಾಯಧನವನ್ನು ಹೆಚ್ಚಿಸಲಾಗುವುದು.

ವಸುಧಾಮೃತ ಯೋಜನೆ:
ಮಣ್ಣಿನ ಸಾವಯವ ಇಂಗಾಲ ಹಾಗೂ ಅದರ ಭೌತಿಕ, ರಾಸಾಯನಿಕ ಮತ್ತು ಜೈವಿಕ ಗುಣಮಟ್ಟವನ್ನು ಹೆಚ್ಚಿಸುವ ಮೂಲಕ ಪರಿಸರ ಸ್ನೇಹಿ ಮತ್ತು ಸುಸ್ಥಿರ ಕೃಷಿ ಪದ್ಧತಿಗಳನ್ನು ಉತ್ತೇಜಿಸಲು 'ವಸುಧಾಮೃತ' ಕಾರ್ಯಕ್ರಮವನ್ನು ಮುಂದಿನ ವರ್ಷಗಳಲ್ಲಿ ಜಾರಿಗೊಳಿಸಲಾಗುವುದು.

ಸಸ್ಯ ಸಂಜೀವಿನಿ ಯೋಜನೆ:
ಬೆಳೆಗಳಲ್ಲಿ ಕೀಟ ಹಾಗೂ ರೋಗಗಳನ್ನು ಆರಂಭಿಕ ಹಂತದಲ್ಲಿಯೇ ಪತ್ತೆ ಹಚ್ಚಿ ಇವುಗಳನ್ನು ನಿಯಂತ್ರಿಸಲು ಅಗತ್ಯವಿರುವ ಪರಿಸರ ಸ್ನೇಹಿ ಜೈವಿಕ ಪೀಡೆನಾಶಕ/ಜೈವಿಕ ಕೀಟನಾಶಕಗಳ ಜೊತೆ ಇತರೆ ಸುರಕ್ಷಿತ ನಿರ್ವಹಣಾ ಕ್ರಮಗಳ ಶಿಫಾರಸ್ಸುಗಳನ್ನು ರೈತರಿಗೆ ಸಕಾಲದಲ್ಲಿ ಒದಗಿಸಲು 'ಸಸ್ಯ ಸಂಜೀವಿನಿ' ಯೋಜನೆಯನ್ನು ಮುಂದಿನ ಮೂರು ವರ್ಷಗಳಲ್ಲಿ ಅನುಷ್ಠಾನಗೊಳಿಸಲಾಗುವುದು.

AI ರೈತ ಕರೆ ಕೇಂದ್ರ:
ರೈತರಿಗೆ ಒಂದೇ ಸೂರಿನಡಿ ಹವಾಮಾನ, ಮಾರುಕಟ್ಟೆ, ಕೃಷಿ ತಾಂತ್ರಿಕತೆ ಮತ್ತು ಇಲಾಖಾ ಮಾಹಿತಿಯನ್ನು ತ್ವರಿತವಾಗಿ ಒದಗಿಸಲು ಕೃಷಿ ಇಲಾಖೆಯ 'ರೈತ ಕರೆ ಕೇಂದ್ರ'ವನ್ನು AI ತಂತ್ರಜ್ಞಾನದಿಂದ ಉನ್ನತೀಕರಿಸಲಾಗುವುದು.

ರಾಜ್ಯ ಮಟ್ಟದ ಕೃಷಿ ಉದ್ದಿಮೆ ತರಬೇತಿ ಕೇಂದ್ರ:
ಚಿತ್ರದುರ್ಗ ಜಿಲ್ಲೆಯ ಬಬ್ಬೂರಿನ ಜಿಲ್ಲಾ ಕೃಷಿ ತರಬೇತಿ ಕೇಂದ್ರವನ್ನು ರಾಜ್ಯಮಟ್ಟದ 'ಕೃಷಿ ಉದ್ದಿಮೆ ತರಬೇತಿ ಕೇಂದ್ರ' ವನ್ನಾಗಿ ಉನ್ನತೀಕರಿಸಲಾಗುವುದು.
ಅತ್ಯಾಧುನಿಕ ನಿಖರ ಬಿತ್ತನೆ ಮತ್ತು ನಾಟಿ ಯಂತ್ರಗಳ ಬಳಕೆಯ ಯೋಜನೆ: ಕೃಷಿ ಚಟುವಟಿಕೆಯಲ್ಲಿ ರೈತರ ಸಮಯ ಹಾಗೂ ಶ್ರಮ ತಗ್ಗಿಸುವುದರೊಂದಿಗೆ ಉತ್ಪಾದನಾ ವೆಚ್ಚವನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ ಅತ್ಯಾಧುನಿಕ ನಿಖರ ಬಿತ್ತನೆ ಮತ್ತು ನಾಟಿ ಯಂತ್ರಗಳನ್ನು ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಯಡಿ ಸೇರ್ಪಡೆಗೊಳಿಸಲಾಗುವುದು.

ಕೃಷಿ ಯಾಂತ್ರೀಕರಣ ಯೋಜನೆ:
ಕೃಷಿ ಸಂಬಂಧಿತ ಕಸುಬುಗಳನ್ನು ಮತ್ತು ಸ್ಥಳೀಯ ಗುಡಿ ಕೈಗಾರಿಕೆಗಳನ್ನು ಪ್ರೋತ್ಸಾಹಿಸಲು ಹಾಗೂ ಸಣ್ಣ, ಅತೀ ಸಣ್ಣ ರೈತರಿಗೆ ಸ್ಥಳೀಯವಾಗಿ ಅಗತ್ಯವಿರುವ ಎತ್ತು ಚಾಲಿತ ಹಾಗೂ ಕೈಚಾಲಿತ ಉಪಕರಣಗಳನ್ನು ಕೃಷಿ ಯಾಂತ್ರೀಕರಣ ಯೋಜನೆಯಡಿ ಒದಗಿಸಲಾಗುವುದು.

ಪಾಂಡವಪುರ ಸಾವಯವ ತಾಲ್ಲೂಕು:
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕನ್ನು ಸಂಪೂರ್ಣ ಸಾವಯವ ತಾಲ್ಲೂಕನ್ನಾಗಿ ಪರಿವರ್ತಿಸಲು ಅಧಿಕೃತ ಸಾವಯವ ಪ್ರಮಾಣೀಕರಣ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು.

ಭತ್ತದ ಕೃಷಿಯಲ್ಲಿ ನೀರಿನ ಬಳಕೆಯ ದಕ್ಷತೆ ಹೆಚ್ಚಿಸುವ ಪರ್ಯಾಯ ಯೋಜನೆ: ಹವಾಮಾನ ಬದಲಾವಣೆಗೆ ಹೊಂದಾಣಿಕೆ ಹಾಗೂ ತಗ್ಗಿಸುವಿಕೆಯ ರಾಜ್ಯದ ಪ್ರಯತ್ನಗಳನ್ನು ಬಲಪಡಿಸಿ ಕೃಷಿಯನ್ನು ಸುಸ್ಥಿರ ಹಾಗೂ ಪರಿಸರ ಸ್ನೇಹಿಯಾಗಿಸಲು ಭತ್ತದ ಕೃಷಿಯಲ್ಲಿ ನೀರಿನ ಬಳಕೆಯ ದಕ್ಷತೆಯನ್ನು ಹೆಚ್ಚಿಸುವ ಪರ್ಯಾಯ ತೇವ-ಒಣಗಿಸುವ (Alternate Wetting & Drying) ವಿಧಾನಗಳನ್ನು ಉತ್ತೇಜಿಸಲಾಗುವುದು.

ಕೋಲಾರ ಜಿಲ್ಲೆಯ ಪ್ರತಿ ತಾಲ್ಲೂಕಿನಲ್ಲಿ ರೈತ ಮಾಲ್:
ರೈತರಿಗೆ ಉತ್ತಮ ಗುಣಮಟ್ಟದ ಕೃಷಿ ಪರಿಕರಗಳನ್ನು ಕೈಗೆಟುಕುವ ದರದಲ್ಲಿ ಲಭ್ಯವಾಗಿಸುವುದರ ಜೊತೆಗೆ ಮಾರುಕಟ್ಟೆಯ ಅನಿಶ್ಚಿತತೆಯನ್ನು ನಿವಾರಿಸುವ ಉದ್ದೇಶದಿಂದ ಬಿತ್ತನೆ ಬೀಜಗಳು, ಕೀಟನಾಶಕಗಳು, ರಸಗೊಬ್ಬರಗಳು ಹಾಗೂ ಯಂತ್ರೋಪಕರಣಗಳು ಒಂದೇ ಸೂರಿನಡಿ ದೊರಕಿಸಲು ಪ್ರಾಯೋಗಿಕವಾಗಿ ಕೋಲಾರ ಜಿಲ್ಲೆಯ ಪ್ರತಿಯೊಂದು ಕೃಷಿ ತಾಲ್ಲೂಕಿನಲ್ಲಿ MSIL ವತಿಯಿಂದ ರೈತ ಮಾಲ್ಗಳನ್ನು ಸ್ಥಾಪಿಸಲಾಗುವುದು.

ರಾಜ್ಯ ಮಟ್ಟದ ಸಲಹಾ ಸಮಿತಿ:
ರೈತರಿಗೆ ಕಳಪೆ, ಅಸುರಕ್ಷಿತ, ದೋಷಪೂರಿತ ಬೀಜಗಳು ಮತ್ತು ಕೀಟನಾಶಕಗಳನ್ನು ಪೂರೈಸುವುದನ್ನು ಹಾಗೂ ಕೃಷಿ ಪರಿಕರಗಳನ್ನು ಮಾರುಕಟ್ಟೆ ದರಕ್ಕಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಧ್ಯಯನ ಮಾಡಿ ಸೂಕ್ತ ಶಿಫಾರಸ್ಸುಗಳನ್ನು ಸಲ್ಲಿಸಲು ರಾಜ್ಯ ಮಟ್ಟದ ಸಲಹಾ ಸಮಿತಿಯನ್ನು ರಚಿಸಲಾಗುವುದು.

ಅಥಣಿಯಲ್ಲಿ ಕೃಷಿ ಕಾಲೇಜು:
ತಜ್ಞರ ಕಾರ್ಯಸಾಧ್ಯತಾ ವರದಿಯ ಶಿಫಾರಸ್ಸಿನಂತೆ ಅಥಣಿಯಲ್ಲಿ ಕೃಷಿ ಕಾಲೇಜನ್ನು ಸ್ಥಾಪಿಸಲು ಅಗತ್ಯವಿರುವ ಪ್ರಥಮ ಹಂತದ ಮೂಲಸೌಕರ್ಯ ಒದಗಿಸಲಾಗುವುದು.

ಪ್ರಸಕ್ತ ಸಾಲಿನಲ್ಲಿ 38 ಲಕ್ಷ ರೈತರಿಗೆ ಶೂನ್ಯ ಬಡ್ಡಿದರದಲ್ಲಿ 30 ಸಾವಿರ ಕೋಟಿ ಕೃಷಿ ಸಾಲ ವಿತರಿಸುವ ಗುರಿ.
2026-27
ನೇ ಸಾಲಿನಲ್ಲಿ ಒಟ್ಟು 4,47,240 ಕೋಟಿ ರೂಗಳ ಬಜೆಟ್ ಗಾತ್ರ. ಕೃಷಿ, ನೀರಾವರಿ ಮತ್ತು ಗ್ರಾಮೀಣಾಭಿವೃದ್ದಿಗೆ ಆಯವ್ಯಯದಲ್ಲಿ ಅಂದಾಜು ವೆಚ್ಚ ಶೇಕಡಾ.13%. ಕೃಷಿ ಮತ್ತು ತೋಟಗಾರಿಕೆಗೆ 8373 ಕೋಟಿ ಶೇ.2%ರಷ್ಟು ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು