Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಗೂಂಡಾಗಿರಿ, ರೌಡಿಸಂ ಸಂಪೂರ್ಣ ಮಟ್ಟ ಹಾಕಲು ಸಿಎಂ ಕರೆ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾನೂನು ಸುವ್ಯವಸ್ಥೆ ಮತ್ತು ಬಂಡವಾಳ ಹೂಡಿಕೆ, ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿ ಒಂದಕ್ಕೊಂದು ನೇರ ಸಂಬಂಧ ಹೊಂದಿದೆ. ನಿರುದ್ಯೋಗ ಬಹಳ ದೊಡ್ಡ ಸಮಸ್ಯೆ ಆಗ್ತಿದೆ. ಇದನ್ನು ನಿರ್ವಹಿಸಬೇಕಾದರೆ ಕಾನೂನು ಸುವ್ಯವಸ್ಥೆ , ಶಾಂತಿ ಪಾಲನೆ ಉತ್ತಮವಾಗಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕೋರಮಂಗಲದ ಕವಾಯತು ಮೈದಾನದಲ್ಲಿ ಇಂದು ನಡೆದ ಪೊಲೀಸ್ ಧ್ವಜ ದಿನಾಚರಣೆಯಲ್ಲಿ ಮುಖ್ಯಮಂತ್ರಿಗಳ ಪದಕ ಪುರಸ್ಕೃತರಿಗೆ ಪದಕಗಳನ್ನು ಪ್ರದಾನ ಮಾಡಿದ ಬಳಿಕ ಮುಖ್ಯಮಂತ್ರಿಗಳು ಮಾತನಾಡಿದರು.


ಮೂರು ವರ್ಷಗಳಿಂದ ಬಾಕಿ ಉಳಿದಿದ್ದ ಮುಖ್ಯಮಂತ್ರಿಗಳ ಪದಕವನ್ನು ಈ ಬಾರಿ ಒಟ್ಟಾಗಿ ವಿತರಿಸಿದ್ದೇವೆ. ಎಲ್ಲಾ ಪದಕ ಪುರಸ್ಕೃತರಿಗೂ ಅಭಿನಂದನೆಗಳು. ನಿಮ್ಮ‌ಶ್ರಮ ಮತ್ತು ಸೇವೆ ಶ್ಲಾಘನೀಯ ಎಂದು ಸಿಎಂ ತಿಳಿಸಿದರು.

ತಂತ್ರಜ್ಞಾನದ ಬೆಳವಣಿಗೆಯಿಂದ ಸೈಬರ್ ಅಪರಾಧಗಳು ವ್ಯಾಪಕವಾಗಿ ಹೆಚ್ವುತ್ತಿವೆ. ಅದೇ ತಂತ್ರಜ್ಞಾನದ ಸಾಧ್ಯತೆಗಳನ್ನು ಬಳಸಿಕೊಂಡು ಸೈಬರ್ ಅಪರಾಧಗಳನ್ನು ನಿಗ್ರಹಿಸಬೇಕು.

ಮಾದಕ ವಸ್ತು ಮುಕ್ತ ರಾಜ್ಯ ಮಾಡುವುದು ನನ್ನ ಗುರಿ. ಇದಕ್ಕಾಗಿ ಬಹಳಷ್ಟು ಶ್ರಮಿಸಬೇಕು. ಪೊಲೀಸರು ಮಾದಕ ವಸ್ತು ಜಾಲವನ್ನು ಬೇರು ಸಮೇತ ಕಿತ್ತಾಕಲು ಪಣ ತೊಡಬೇಕು ಎಂದು ಸಿದ್ದರಾಮಯ್ಯ ಕರೆ ನೀಡಿದರು.

ಪದಕಗಳನ್ನು ಪಡೆದವರು ಬೇರೆಯವರಿಗೆ ಪ್ರೇರಣೆ ಆಗಬೇಕು. ಸಿಎಂ ಪದಕ ಪಡೆಯಲು ದಕ್ಷತೆ, ಪ್ರಾಮಾಣಿಕತೆಯಿಂದ ವೃತ್ತಿಪರತೆ ತೋರಿಸಬೇಕು. ಕಳೆದ ಎರಡು ವರ್ಷಗಳಲ್ಲಿ ಅಪರಾಧಗಳ ಸಂಖ್ಯೆ ಇಳಿಮುಖ ಆಗುತ್ತಿದೆ. ಇದು ಇನ್ನಷ್ಟು ಕಡಿಮೆ ಆಗಬೇಕು.

ಜರ್ಮನಿ ದೇಶದ ಪ್ರಧಾನಿಗಳು, ಪ್ರತಿನಿಧಿಗಳು ರಾಜ್ಯದ ಪೊಲೀಸ್ ಕೌಶಲ್ಯ ಮತ್ತು ವೃತ್ತಿ ಪರತೆಯನ್ನು ಶ್ಲಾಘಿಸಿದ್ದಾರೆ. ಇದು ಹೆಮ್ಮೆಯ ವಿಷಯ ಎಂದು ಸಿಎಂ ತಿಳಿಸಿದರು.

ಪೊಲೀಸರ ಅಗತ್ಯ ಮತ್ತು ಬೇಡಿಕೆಗಳನ್ನು ಈಡೇರಿಸಲು ನಮ್ಮ ಸರ್ಕಾರ ಸದಾ ಸಿದ್ಧ ಇದೆ. ನಾವು ನಿರಂತರವಾಗಿ ನಿಮ್ಮ ಜೊತೆಗಿರುತ್ತವೆ. ಆದರೆ ಕರ್ತವ್ಯ ಲೋಪವನ್ನು ಮಾತ್ರ ಸಹಿಸುವುದಿಲ್ಲ. ಪೊಲೀಸ್ ಬೀಟ್ ವ್ಯವಸ್ಥೆ ಇನ್ನಷ್ಟು ಪರಿಣಾಮಕಾರಿಯಾಗಿ ನಿರ್ವಹಿಸಬೇಕು ಎಂದು ಸಿಎಂ ಕಿವಿ ಮಾತು ಹೇಳಿದರು.

ಗೂಂಡಾಗಿರಿ, ರೌಡಿಸಂ ಪೂರ್ಣ ಮಟ್ಟ ಹಾಕಿ. ಅಗತ್ಯ ಸಹಕಾರ, ಸವಲತ್ತುಗಳನ್ನು ಕೊಡಲು ಸರ್ಕಾರ ಸಿದ್ಧವಿದೆ. ಮೊನ್ನೆಯ ಬಜೆಟ್ ನಲ್ಲಿ ಇಲಾಖೆ ಮತ್ತು ಸಿಬ್ಬಂದಿಯ ಅನುಕೂಲಕ್ಕೆ ಘೋಷಿಸಿರುವ ಎಲ್ಲವನ್ನೂ ಜಾರಿ ಮಾಡಲಾಗುವುದು ಎಂದು ಸಿಎಂ ಭರವಸೆ ನೀಡಿದರು.

ಪದಕ ವಿಜೇತರು ಬೇರೆಯವರಿಗೆ ಪ್ರೇರಣೆಯಾಗಬೇಕು. ಸಿಎಂ ಪದಕ ಪಡೆಯಲು ದಕ್ಷತೆ, ಪ್ರಾಮಾಣಿಕತೆಯಿಂದ ವೃತ್ತಿಪರತೆ ತೋರಿಸಬೇಕು. ಕಳೆದ ಎರಡು ವರ್ಷಗಳಲ್ಲಿ ಅಪರಾಧಗಳ ಸಂಖ್ಯೆ ಇಳಿಮುಖ ಆಗುತ್ತಿದೆ. ಇದು ಇನ್ನಷ್ಟು ಕಡಿಮೆ ಆಗಬೇಕು ಎಂದರು.



ಈ ಸಂದರ್ಭದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ, ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಉಮಾಶಂಕರ್​, ರಾಜ್ಯ ಪೊಲೀಸ್​ ಮಹಾನಿರ್ದೇಶಕ ಅಲೋಕ್ ಮೋಹನ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್ ಉಪಸ್ಥಿತರಿದ್ದರು.



 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು