ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ಹಿರಿಯೂರು ತಾಲ್ಲೂಕಿನ ಹರಿಯಬ್ಬೆ ಗ್ರಾಮಕ್ಕೆ ಭೇಟಿ ನೀಡಿ, ನಾಡಪ್ರಭು ಕೆಂಪೇಗೌಡರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಭಾವಪೂರ್ಣ ಗೌರವ ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು ಹಾಗೂ ಪ್ರಸಿದ್ಧ ರಂಗಭೂಮಿ ಕಲಾವಿದರಾದ ಜಿ.ಡಿ. ತಿಮ್ಮಯ್ಯ ಅವರನ್ನು ಮುಖ್ಯಮಂತ್ರಿಗಳು ನೆನಪಿನ ಕಾಣಿಕೆ ನೀಡಿ, ಶಾಲು ಹೊದಿಸಿ ಆತ್ಮೀಯವಾಗಿ ಸನ್ಮಾನಿಸಿದರು. ಕಲಾ ಕ್ಷೇತ್ರಕ್ಕೆ ಅವರು ನೀಡಿದ ಕೊಡುಗೆಯನ್ನು ಈ ವೇಳೆ ಸ್ಮರಿಸಲಾಯಿತು.
ಈ ವಿಶೇಷ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಟಿ. ರಘುಮೂರ್ತಿ, ಶಾಸಕ ಡಾ. ಹೆಚ್. ಡಿ. ರಂಗನಾಥ್, ಮುಖಂಡರಾದ ಬಿ.ಹೆಚ್ ಮಂಜುನಾಥ್ ಸೇರಿದಂತೆ ಹರಿಯಬ್ಬೆ ಗ್ರಾಮದ ಹಲವು ಜನಪ್ರತಿನಿಧಿಗಳು, ಸ್ಥಳೀಯ ಗಣ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.




