Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
International News

ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡ್ತೀನಿ ಅಂದಿದ್ದ ಮೋದಿ ಯುವ ಜನತೆಗೆ ವಂಚಿಸಿದರು: ಸಿ.ಎಂ ಸಿದ್ದರಾಮಯ್ಯ

ಚಂದ್ರವಳ್ಳಿ ನ್ಯೂಸ್, ಕಲ್ಬುರ್ಗಿ:
ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡ್ತೀನಿ ಅಂದಿದ್ದ ಮೋದಿ 10 ವರ್ಷದಲ್ಲಿ 20 ಕೋಟಿ ಉದ್ಯೋಗ ಕೊಡಬೇಕಿತ್ತು. ಆದರೆ 20 ಲಕ್ಷ ಉದ್ಯೋಗವನ್ನೂ ಕೊಡದೆ ಪರಮ ಸುಳ್ಳು ಹೇಳಿ ಯುವ ಜನರನ್ನು ವಂಚಿಸಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಸಮಾಧನ ವ್ಯಕ್ತಪಡಿಸಿದರು.

ಕಲ್ಯಾಣ ಕರ್ನಾಟಕದ ಜಿಲ್ಲೆಗಳ ಯುವಕ ಯುವತಿಯರಿಗೆ ಆಯೋಜಿಸಿದ್ದ ಉದ್ಯೋಗ ಮೇಳವನ್ನು ಉದ್ಘಾಟಿಸಿ ಯುವ ಪದವೀಧರರಿಗೆ ನೇಮಕಾತಿ ಪತ್ರವನ್ನು ವಿತರಿಸಿ ಮಾತನಾಡಿದರು.

ಆದರೆ, ನಾವು ನುಡಿದಂತೆ ನಡೆಯುತ್ತಾ ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿದೆವು. ಇದರಲ್ಲಿ ಯುವ ನಿಧಿ ಕಾರ್ಯಕ್ರಮ ಕೂಡ ಸೇರಿದೆ. ಭತ್ಯೆ ಜೊತೆಗೆ ಕೌಶಲ್ಯ ತರಬೇತಿ ನೀಡಿ ಉದ್ಯೋಗವನ್ನೂ ಒದಗಿಸುತ್ತಿದ್ದೇವೆ ಎಂದರು.

ಆದರೆ, ನಾವು ನುಡಿದಂತೆ ನಡೆಯುತ್ತಾ ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿದೆವು. ಇದರಲ್ಲಿ ಯುವ ನಿಧಿ ಕಾರ್ಯಕ್ರಮ ಕೂಡ ಸೇರಿದೆ. ಭತ್ಯೆ ಜೊತೆಗೆ ಕೌಶಲ್ಯ ತರಬೇತಿ ನೀಡಿ ಉದ್ಯೋಗವನ್ನೂ ಒದಗಿಸುತ್ತಿದ್ದೇವೆ ಎಂದರು. ಮಾರುಕಟ್ಟೆ ಆಧಾರಿತ ಕೌಶಲ್ಯ ನೀಡಿ ಉದ್ಯೋಗ ಸೃಜಿಸಲು ಸಚಿವ ಶರಣ ಪ್ರಕಾಶ್ ಅವರಿಗೆ ಸೂಚಿಸಿದ್ದೇನೆ. ಹೀಗಾಗಿ ನೋಂದಾಯಿತರಾದ ಎಲ್ಲರಿಗೂ ಉದ್ಯೋಗ ಸಿಕ್ಕೇ ಸಿಗುತ್ತದೆ ಎಂದು ಭರವಸೆ ನೀಡಿದರು

 ಉದ್ಯೋಗ ಕೊಡುವವರು, ಉದ್ಯೋಗ ಪಡೆಯುವವರನ್ನು ಒಟ್ಟಿಗೇ ಒಂದೇ ವೇದಿಕೆಯಲ್ಲಿ ತರುವ ಮೂಲಕ ಉದ್ಯೋಗಗಳನ್ನು ಒದಗಿಸುವುದಕ್ಕಾಗಿ ವಿಭಾಗಾವಾರು ಉದ್ಯೋಗಮೇಳಗಳನ್ನು ಸಂಘಟಿಸುತ್ತಿದ್ದೇವೆ ಎಂದರು.

ಕೇಂದ್ರದಲ್ಲಿ ಹಾಗೂ ರಾಜ್ಯದಲ್ಲಿ ಹೂಡಿಕೆ ಹೆಚ್ಚಾದಷ್ಟೂ ಉದ್ಯೋಗ ಸೃಷ್ಟಿ ಹೆಚ್ಚಾಗುತ್ತದೆ. ಕೇಂದ್ರ ಸರ್ಕಾರ ದೇಶದ ಯುವ ಜನತೆಯನ್ನು ಸಂಪೂರ್ಣ ನಿರ್ಲಕ್ಷಿಸುತ್ತಿದೆ. ಆದರೆ ನಮ್ಮ ಸರ್ಕಾರ ಯುವ ಜನತೆ ಕೈಗೆ ಉದ್ಯೋಗ ನೀಡಿ ಅವರ ಬದುಕು ಕಟ್ಟುವ ಕೆಲಸ ಮಾಡುತ್ತಿದೆ ಎಂದರು.

ಅಜಯ್ ಸಿಂಗ್ KKRDB ಅಧ್ಯಕ್ಷರಾದ ಬಳಿಕ 5000 ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾರ್ಯಗಳನ್ನು ಕಲ್ಯಾಣ ಕರ್ನಾಟಕದಲ್ಲಿ ನಿರ್ವಹಿಸುತ್ತಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು.

 

 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚಿತ್ರದುರ್ಗ: 25,000 ರೂ. ಲಂಚ ಪಡೆಯುತ್ತಿದ್ದ ಉಪವಿಭಾಗಾಧಿಕಾರಿ ಕಚೇರಿಯ ಪ್ರಥಮ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆಪಶ್ಚಿಮಘಟ್ಟ ಸಂರಕ್ಷಣೆ: ಕಸ್ತೂರಿ ರಂಗನ್ ವರದಿ ಸ್ಯಾಟಲೈಟ್ ಮ್ಯಾಪಿಂಗ್ ಒಪ್ಪಲು ಸಾಧ್ಯವಿಲ್ಲ; ಬಿ.ಕೆ.ಹರಿಪ್ರಸಾದ್ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶಶಾಸಕ ಎಸ್. ಸುರೇಶ್ ಕುಮಾರ್ ಅವರು "ಸಜ್ಜನ" ಎಂಬ ಮುಖವಾಡ ಧರಿಸಿದ ದುರ್ಜನಸರ್ಕಾರದ ಅನುದಾನಕ್ಕೆ ಕಾಯದೆ ಸ್ವಂತ ಖರ್ಚಿನಲ್ಲಿ ಕಾಲುವೆ ದುರಸ್ತಿಗೆ ಮುಂದಾದ ಎಚ್.ಡಿ. ರೇವಣ್ಣಹೈಕೋರ್ಟ್‌ನಿಂದ ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ ಎಸ್‌ಐಟಿ ತನಿಖೆಗೆ ಆದೇಶಆಲಮಟ್ಟಿ ಜಲಾಶಯ ಎತ್ತರ ಹೆಚ್ಚಳ: ಯುಕೆಪಿ ಹಂತ-3ರ ಭೂಸ್ವಾಧೀನ ಪ್ರಕ್ರಿಯೆಗೆ ಚುರುಕುವ್ಯಾಪಕ ಭ್ರಷ್ಟಾಚಾರ: ಕಾಮಗಾರಿಗಳ ಶ್ವೇತಪತ್ರ ಹೊರಡಿಸಲು ಆಂಜನೇಯ ಆಗ್ರಹ‘ಗೌರವಯುತ ಲಂಚ’: ಕಾಂಗ್ರೆಸ್ ಸರ್ಕಾರದ ಹೊಸ 'ಪ್ರಜಾಸೇವಾ ಶುಲ್ಕ' ಎಂದು ಆರ್. ಅಶೋಕ್ಸ್ವಪಕ್ಷೀಯರ ಆಕ್ರೋಶವೇ ಕಾಂಗ್ರೆಸ್ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿ: ಆರ್. ಅಶೋಕ್ ವಾಗ್ದಾಳಿ