Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಶಾಸಕ ಮುನಿರತ್ನ ಅವರ ಮೇಲಿನ ಹಲ್ಲೆಗೆ ಖಂಡನೆ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಂಗ್ರೆಸ್ ಸರ್ಕಾರದಲ್ಲಿ ಜನಪ್ರತಿನಿಧಿಗಳಿಗೆ ರಕ್ಷಣೆಯಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಕಾನೂನು ಸುವ್ಯವಸ್ಥೆಯನ್ನು ಕೈಗೆತ್ತಿಕೊಂಡಿರುವ ಗೂಂಡಾಗಳು ಬಿಜೆಪಿ ಶಾಸಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಕಿಡಿ ಕಾರಿದ್ದಾರೆ.

ಬೆಳಗಾವಿಯ ಸುವರ್ಣಸೌಧದಲ್ಲಿ ಶಾಸಕ ಸಿ.ಟಿ ರವಿ ಅವರ ಮೇಲೆ ನಡೆದ ಹಲ್ಲೆಯ ಪ್ರಕರಣವನ್ನು ಲಘುವಾಗಿ ತೆಗೆದುಕೊಂಡಿರುವ ಸರ್ಕಾರದ ಧೋರಣೆಯಿಂದ ಪ್ರೇರಣೆ ಪಡೆದಿರುವ ಕಾಂಗ್ರೆಸ್ ಗೂಂಡಾಗಳು ಇಂದು ನಮ್ಮ ಶಾಸಕ ಮುನಿರತ್ನ ಅವರ ಮೇಲೆ ಹಲ್ಲೆ ನಡೆಸಿರುವ ಘಟನೆ ಅತ್ಯಂತ ಹ್ಯೇಯಕರ ಹಾಗೂ ಖಂಡನೀಯ.

ಜನರಿಗೆ ರಕ್ಷಣೆ ನೀಡಬೇಕಾದ ಜನಪ್ರತಿನಿಧಿಗಳಿಗೇ ರಕ್ಷಣೆ ಇಲ್ಲವೆಂದರೆ ಸಾಮಾನ್ಯ ಜನರ ಪಾಡೇನು ಎಂಬ ಆತಂಕ ಉಲ್ಬಣಗೊಳ್ಳುತ್ತಿದೆ. ಸಾಮಾಜಿಕ ಸುಭದ್ರತೆಯಿಲ್ಲದ ಅರಾಜಕತೆಯ ರಾಜ್ಯವನ್ನು ನಿರ್ಮಿಸಲು ಕಾಂಗ್ರೆಸ್ ಹೊರಟಂತಿದೆ. ಶಾಸಕ ಮುನಿರತ್ನ ಅವರ ಮೇಲೆ ಆಪಾದನೆಗಳೇನೇ ಇರಲಿ ಅದಕ್ಕೆ ನ್ಯಾಯದ ಪರಿಧಿಯಲ್ಲಿ ಉತ್ತರ ಸಿಗುತ್ತದೆ. ಆದರೆ ಜನರಿಂದ ಆಯ್ಕೆಯಾದ ಶಾಸಕರೊಬ್ಬರನ್ನು ಹಾಡು ಹಗಲಲ್ಲೇ ಹತ್ಯೆ ಮಾಡುವ ಸಂಚುರೂಪಿಸಿ ಹಲ್ಲೆ ನಡೆಸುವ ಪರಿಸ್ಥಿತಿ ಉದ್ಭವಿಸಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ವಿಜಯೇಂದ್ರ ಆತಂಕ ವ್ಯಕ್ತಪಡಿಸಿದ್ದಾರೆ.

ಕಾನೂನು ಸುವ್ಯವಸ್ಥೆಯು ಸಂಪೂರ್ಣ ಆದೋಗತಿಗೆ ಇಳಿದಿರುವ ಪರಿಸ್ಥಿತಿಯನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸಿ ಹೋರಾಟ ಕೈಗೆತ್ತಿಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಮುನಿರತ್ನ ಅವರ ಮೇಲೆ ಹಲ್ಲೆ ನಡೆಸಿರುವ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳದೇ ತೇಪೆ ಸಾರಿಸಲು ಪ್ರಯತ್ನಿಸಿದರೆ ತಕ್ಕನಾದ ಉತ್ತರ ಎದುರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಸಿದ್ಧವಾಗಿರಬೇಕಾಗುತ್ತದೆ ಎಂದು ಎಚ್ಚರಿಸ ಬಯಸುತ್ತೇನೆ ವಿಜಯೇಂದ್ರ ತಿಳಿಸಿದ್ದಾರೆ.

 

 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು