Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
International News

ಸಾಹಿತಿ ಬಾನು ಮುಷ್ತಾಕ್ ಅವರಿಗೆ ಕೆಯುಡಬ್ಲೂಜೆ ಅಭಿನಂದನೆ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಅಂತಾರಾಷ್ಟ್ರೀಯ ಬುಕರ್ ಪ್ರಶಸ್ತಿಗೆ ಪ್ರವೇಶ ಪಡೆದಿದ್ದ ಸಾಹಿತಿ ಬಾನುಮುಷ್ತಾಕ್ ಅವರ ಸಣ್ಣ ಕಥೆಗಳ ಅನುವಾದಿತ ಸಂಕಲನ ಹಾರ್ಟ್ ಲ್ಯಾಂಪ್ಕೃತಿ ಅಂತಿಮ ಸುತ್ತಿಗೆ ಆಯ್ಕೆಯಾಗಿದೆ.

ಹಿನ್ನೆಲೆಯಲ್ಲಿ, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಹಾಸನದಲ್ಲಿ ಬಾನುಮುಷ್ತಾಕ್ ಅವರ ಮನೆಗೆ ಭೇಟಿ ನೀಡಿ, ಅಮೃತ ಬೀಜ ಕೃತಿ ನೀಡಿ ಅಭಿನಂದಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ತಗಡೂರು ಅವರು, ಹಾಸನದಿಂದ ಪಿ.ಲಂಕೇಶ್ ಪತ್ರಿಕೆಯ ವರದಿಗಾರರಾಗಿ ಗುರುತಿಸಿಕೊಂಡ ಭಾನುಮುಷ್ತಾಕ್ ಅವರು ವಕೀಲರಾಗಿ, ನಗರಸಭೆ ಸದಸ್ಯರಾಗಿ ಹಾಗೂ ಪ್ರಗತಿಪರ ಸಾಹಿತಿಯಾಗಿ ಗುರುತಿಸಿಕೊಂಡವರು. ಅನ್ಯಾಯದ ವಿರುದ್ದ ಧ್ವನಿ ಎತ್ತಿದವರು. ಸಂಘಟಕಿಯಾಗಿಯೂ ಕೆಲಸ ಮಾಡಿದವರು. ಅವರ ಕೃತಿ ಬುಕರ್ ಪ್ರಶಸ್ತಿಯ ಹೊಸ್ತಿಲಿನ ತನಕ ಬಂದು ನಿಂತಿರುವುದು ಹೆಮ್ಮೆಯ ಸಂಗತಿ ಎಂದರು.

ಗಿರೀಶ್ ಕಾಸರವಳ್ಳಿ ನಿರ್ದೇಶನ ಮಾಡಿದ ಹಸೀನಾ ಚಲನಚಿತ್ರ ಕಥೆ ಕೂಡ ಬಾನುಮುಷ್ತಾಕ್ ಅವರ ಹಸೀನಾ ಮತ್ತು ಇತರ ಕಥೆಗಳಿಂದಲೇ ಆಯ್ಕೆ ಮಾಡಿದ್ದು. ಹಸೀನಾ ಚಿತ್ರಕ್ಕೆ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಿಕ್ಕಾಗ ಇಡೀ ತಂಡವನ್ನು ಹಾಸನಕ್ಕೆ ಆಹ್ವಾನಿಸಿದ್ದ, ಹಾಸನ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘವು ಕಲಾಭವನದಲ್ಲಿ ಏರ್ಪಡಿಸಿದ್ದ ಅದ್ದೂರಿ ಕಾರ್ಯಕ್ರಮದಲ್ಲಿ ಸನ್ಮಾನಿಸಿತ್ತು. ಅದೆಲ್ಲವೂ ಮರೆಯಲಾಗದ ಕ್ಷಣ ಎನ್ನುವುದನ್ನು ಶಿವಾನಂದ ತಗಡೂರು ಸ್ಮರಿಸಿದರು.

ಬಾನುಮುಷ್ತಾಕ್ ಅವರ ಹಾರ್ಟ್ ಲ್ಯಾಂಪ್ ಕೃತಿ ಬುಕರ್ ಪ್ರಶಸ್ತಿಗೆ ಭಾಜನವಾಗಲಿ ಎಂದು ಇದೇ ಸಂದರ್ಭದಲ್ಲಿ ಶುಭ ಹಾರೈಸಲಾಯಿತು. ಹಾಸನ ಜಿಲ್ಲಾ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಕೆ.ಆರ್.ಮಂಜುನಾಥ್, ಔಟ್ ಲುಕ್ ಪತ್ರಿಕೆಯ ವರದಿಗಾರ ವಿಕಾರ್ ಅಹಮದ್ ಅವರು ಸಂದರ್ಭದಲ್ಲಿ ಹಾಜರಿದ್ದರು.

 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚಿತ್ರದುರ್ಗ: 25,000 ರೂ. ಲಂಚ ಪಡೆಯುತ್ತಿದ್ದ ಉಪವಿಭಾಗಾಧಿಕಾರಿ ಕಚೇರಿಯ ಪ್ರಥಮ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆಪಶ್ಚಿಮಘಟ್ಟ ಸಂರಕ್ಷಣೆ: ಕಸ್ತೂರಿ ರಂಗನ್ ವರದಿ ಸ್ಯಾಟಲೈಟ್ ಮ್ಯಾಪಿಂಗ್ ಒಪ್ಪಲು ಸಾಧ್ಯವಿಲ್ಲ; ಬಿ.ಕೆ.ಹರಿಪ್ರಸಾದ್ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶಶಾಸಕ ಎಸ್. ಸುರೇಶ್ ಕುಮಾರ್ ಅವರು "ಸಜ್ಜನ" ಎಂಬ ಮುಖವಾಡ ಧರಿಸಿದ ದುರ್ಜನಸರ್ಕಾರದ ಅನುದಾನಕ್ಕೆ ಕಾಯದೆ ಸ್ವಂತ ಖರ್ಚಿನಲ್ಲಿ ಕಾಲುವೆ ದುರಸ್ತಿಗೆ ಮುಂದಾದ ಎಚ್.ಡಿ. ರೇವಣ್ಣಹೈಕೋರ್ಟ್‌ನಿಂದ ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ ಎಸ್‌ಐಟಿ ತನಿಖೆಗೆ ಆದೇಶಆಲಮಟ್ಟಿ ಜಲಾಶಯ ಎತ್ತರ ಹೆಚ್ಚಳ: ಯುಕೆಪಿ ಹಂತ-3ರ ಭೂಸ್ವಾಧೀನ ಪ್ರಕ್ರಿಯೆಗೆ ಚುರುಕುವ್ಯಾಪಕ ಭ್ರಷ್ಟಾಚಾರ: ಕಾಮಗಾರಿಗಳ ಶ್ವೇತಪತ್ರ ಹೊರಡಿಸಲು ಆಂಜನೇಯ ಆಗ್ರಹ‘ಗೌರವಯುತ ಲಂಚ’: ಕಾಂಗ್ರೆಸ್ ಸರ್ಕಾರದ ಹೊಸ 'ಪ್ರಜಾಸೇವಾ ಶುಲ್ಕ' ಎಂದು ಆರ್. ಅಶೋಕ್ಸ್ವಪಕ್ಷೀಯರ ಆಕ್ರೋಶವೇ ಕಾಂಗ್ರೆಸ್ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿ: ಆರ್. ಅಶೋಕ್ ವಾಗ್ದಾಳಿ