Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಪ್ರತಿಷ್ಠೆಗಾಗಿ RCB ಅಭಿಮಾನಿಗಳನ್ನು ಬಲಿಕೊಟ್ಟ ಕಾಂಗ್ರೆಸ್ ಸರ್ಕಾರ

 ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪ್ರತಿಷ್ಠೆಗಾಗಿ
RCB ಅಭಿಮಾನಿಗಳನ್ನು ಬಲಿಕೊಟ್ಟ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ" ಇರಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದರು. ಬೆಂಗಳೂರಿನ ಕಾಲ್ತುಳಿತ ಪ್ರಕರಣದಲ್ಲಿ ಕಾಂಗ್ರೆಸ್ ಸರ್ಕಾರದ ವೈಫಲ್ಯ ಮತ್ತು ಸಿಎಂ, ಡಿಸಿಎಂ, ಗೃಹಸಚಿವರ ರಾಜೀನಾಮೆಗೆ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಗೆಲುವಿನ ಸಂಭ್ರಮಾಚರಣೆಯಲ್ಲಿ ಲಕ್ಷಾಂತರ ಜನ ಸೇರುತ್ತಾರೆಂಬ ಮಾಹಿತಿ ಇದ್ದರೂ ಒಂದೇ ದಿನದಲ್ಲಿ ಎರಡೆರಡು ಕಾರ್ಯಕ್ರಮ ಆಯೋಜಿಸಿ ಭದ್ರತೆ ನೀಡಲಾಗದೇ ಭ್ರಷ್ಟ ಕಾಂಗ್ರೆಸ್ ಸರ್ಕಾರದ ಪ್ರಚಾರದ ಗೀಳಿಗೆ ಅಮಾಯಕರ ಬಲಿ ಪಡೆದ  ಸರ್ಕಾರದ ಜನಕಂಠಕ ನಿಲುವನ್ನು ವಿಜಯೇಂದ್ರ ಅವರು ಖಂಡಿಸಿದರು.

ಜೂನ್ 4ನೇ ತಾರೀಕು ರಾಜ್ಯಾದ್ಯಂತ, ದೇಶಾದ್ಯಂತ RCB ಸಂಭ್ರಮಾಚರಣೆ ನಡೆಯುತ್ತಿದ್ದರೆ, ಬೆಂಗಳೂರಿನಲ್ಲಿ ರಾಜ್ಯದ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ನಡುವೆ ಪೈಪೋಟಿ ನಡೆಯುತ್ತಿತ್ತು.  RCB ಗೆಲುವಿನ ಸಂಭ್ರಮವನ್ನು ನಮ್ಮ ಸರ್ಕಾರದ ಜನಪ್ರಿಯತೆ ಹೆಚ್ಚಿಸಿಕೊಳ್ಳಬೇಕು ಎಂಬ ಪುಕ್ಕಟ್ಟೆ ಪ್ರಚಾರ ಪಡೆದುಕೊಳ್ಳುವ ಹಠ ಹಾಗೂ ಚಟಕ್ಕೆ ಬಿದ್ದು ಉಪಮುಖ್ಯಮಂತ್ರಿಗಳಂತೂ ಏರ್ಪೋರ್ಟ್ ಗೆ ಧಾವಿಸಿ ಕ್ರೀಡಾಪಟುಗಳನ್ನು ಸ್ವಾಗತಿಸಿ ಕ್ರೀಡಾಂಗಣದಲ್ಲಿ ಕಪ್ ಎತ್ತಿ ಹಿಡಿದು ತಾವೇ ಗೆದ್ದವರಂತೆ ಬಿಂಬಿಸಿಕೊಂಡರು ಎಂದು ವಿಜಯೆಂದ್ರ ಗಂಭೀರ ಆರೋಪ ಮಾಡಿದರು.


ಕಾರ್ಯಕ್ರಮಕ್ಕೆ ಭದ್ರತೆ ಒದಗಿಸಲು ಸಾಧ್ಯವಿಲ್ಲ ಎಂದು ಪೊಲೀಸ್ ಅಧಿಕಾರಿಗಳು ವರದಿ ಕೊಟ್ಟರೂ ಸಹ ಲೆಕ್ಕಿಸದೇ ಪುಕ್ಕಟ್ಟೆ ಪ್ರಚಾರದ ಗೀಳಿಗೆ ಬಿದ್ದು ಎರಡೂ ಕಡೆ ಕಾರ್ಯಕ್ರಮ ನಡೆಸಿದರ ಪರಿಣಾಮವಾಗಿ 11 ಮುಗ್ಧ ಜೀವಗಳ ಬಲಿ ತೆಗೆದುಕೊಂಡರು. ಈಗಲಾದರೂ ಭಂಡತನ ಬಿಟ್ಟು ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಅವರು ಆಗ್ರಹಿಸಿದರು.

ಈ ಸಂದರ್ಭದಲ್ಲಿ ವಿಧಾನಸಭಾ ವಿರೋಧ ಪಕ್ಷ ನಾಯಕ ಆರ್.ಅಶೋಕ್, ವಿಧಾನ ಪರಿಷತ್ ವಿರೋಧ ಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಅಥ್ವನಾರಾಯಣ, ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎಲ್.ರವಿಕುಮಾರ್, ವಿಧಾನಸಭಾ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಶ್ರೀ ದೊಡ್ಡನಗೌಡ ಪಾಟೀಲ್, ಸೇರಿದಂತೆ ಪಕ್ಷದ ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಶಾಸಕರು, ಪಕ್ಷದ ಪ್ರಮುಖರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು, ಹಾಗೂ RCB ಅಭಿಮಾನಿಗಳು ಭಾಗವಹಿಸಿದ್ದರು.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು