Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಕಾಂಗ್ರೆಸ್ಸಿನವರು 11ಜಿ ಎಕಾನಮಿ, ಬಿಜೆಪಿಯವರದು ಜಿ  ಹುಜೂರ್ ನಮೂನೆಯದು-ಸಿಎಂ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯಪಾಲರ ಭಾಷಣದ ಮೇಲೆ ವಿಧಾನ ಪರಿಷತ್‌ನಲ್ಲಿ ನಡೆದ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದನದಲ್ಲಿ ಉತ್ತರಿಸಿದರು.


ನಮ್ಮದು 11 ಜಿ ಎಕಾನಮಿ, ಬಿಜೆಪಿಯವರದು ಜಿ  ಹುಜೂರ್ ನಮೂನೆಯದು.  ಕೆಲಸದ ಹಕ್ಕು, ಶಿಕ್ಷಣದ ಹಕ್ಕು, ಆಹಾರದ ಹಕ್ಕುಗಳನ್ನು ನಮ್ಮ ಸಂವಿಧಾನದ ಮೂಲಭೂತ ಹಕ್ಕುಗಳು. ಕೆಲಸದ ಹಕ್ಕಿನ ಬಗ್ಗೆ ತಕರಾರು ಎತ್ತಿದ್ದಾರೆ. ಉದ್ಯೋಗ ಖಾತ್ರಿ ಯೋಜನೆಯನ್ನು ಕೇಂದ್ರವೇಕೆ ವಿರೋಧಿಸುತ್ತಿದೆ?

ನಾನು ಯಾವುದೇ ಕಾರಣಕ್ಕೂ ಬಿಜೆಪಿ ಹಾಗೂ ಆರ್ ಎಸ್ ಎಸ್ ಸಿದ್ಧಾಂತವನ್ನು ಒಪ್ಪುವುದಿಲ್ಲ. ಏಕೆಂದರೆ ಆರ್ ಎಸ್ ಎಸ್ ನವರು ದಲಿತರು, ಹಿಂದುಳಿದ ವರ್ಗ, ಅಲ್ಪಸಂಖ್ಯಾತರು, ಮಹಿಳೆಯರನ್ನು ವಿರೋಧಿಸುತ್ತಾರೆ.

ಸಂವಿಧಾನ ಎಲ್ಲಕ್ಕಿಂತ ದೊಡ್ಡದು. ಯಾವುದೇ ವಿರೋಧಗಳು ಸಂವಿಧಾನದ ಎಲ್ಲೆಯನ್ನು ಮೀರಬಾರದು. ನಾವುರಾಜ್ಯಪಾಲರ ಬಗ್ಗೆ ಅಗೌರವದಿಂದ ನಡೆದುಕೊಂಡಿಲ್ಲ. ನಾವು  ಕೇಂದ್ರದ ವಿರುದ್ಧ ಸುಳ್ಳು ಅಪಾದನೆಗಳನ್ನು ಮಾಡಿಲ್ಲ.

ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಅನ್ಯಾಯವಾಗುತ್ತಿದೆ ಎನ್ನುವುದು ನೂರಕ್ಕೆ ನೂರು ಸತ್ಯ. ಬೆಳೆಹಾನಿ ಹಾಗೂ ಮೂಲಸೌಲಭ್ಯಕ್ಕೆ ಅನುದಾನ ನೀಡಲು ರಾಜ್ಯದ ಮನವಿಯ ಹೊರತಾಗಿಯೂ, ಇನ್ನೂ ಕೇಂದ್ರ ಅನುದಾನ ನೀಡಿಲ್ಲ.

ರಾಜ್ಯದ ಹಿತ ಕಾಪಾಡುವ ಸಲುವಾಗಿ ರಾಜ್ಯ ಸರ್ಕಾರದ ಕರ್ತವ್ಯವನ್ನು ನಾವು ನಿರ್ವಹಿಸುತ್ತಿದ್ದೇವೆ. ಕೇಂದ್ರ ತನ್ನ ಬಜೆಟ್ ನಲ್ಲಿ ಘೋಷಿಸಿದ ಅನುದಾನ ನೀಡಿಲ್ಲ. ಈ ಅನ್ಯಾಯವನ್ನು ಭಾಷಣದಲ್ಲಿ ಪ್ರಶ್ನಿಸಲಾಗಿದೆ.

ರಾಜ್ಯಪಾಲರ ಭಾಷಣದ ಮೂಲಕ ಕೇಂದ್ರದ ಅನ್ಯಾಯವನ್ನು ಪ್ರಶ್ನಿಸಿ, ಜನರ ಹಿತವನ್ನು ಕಾಯಲೇಬೇಕಾಗುತ್ತದೆ.

2008 ರಲ್ಲಿಯೂ ಕರ್ನಾಟಕದ ರಾಜ್ಯಪಾಲರು ತಮ್ಮ ಭಾಷಣದಲ್ಲಿ ಯುಪಿಎ ಆಡಳಿತವಿದ್ದ ಕೇಂದ್ರ ಸರ್ಕಾರದ ಮೇಲೆ ರಾಜ್ಯ ಸರ್ಕಾರ ವಿವಿಧ ಯೋಜನೆಗಳಿಗೆ ಒತ್ತಾಯ ಹೇರಿತ್ತು.

2012 ರಲ್ಲಿ ಅಂದಿನ ರಾಜ್ಯಪಾಲರಾಗಿದ್ದ ಹಂಸರಾಜ್ ಭಾರಧ್ವಾಜ್ ಅವರು ಯಡಿಯೂರಪ್ಪ ನೇತೃತ್ವದ ಸರ್ಕಾರವನ್ನು ವಜಾಗೊಳಿಸುವಂತೆ ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದರು, ಆದರೆ ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ಅವರು ಅದನ್ನು ನಿರಾಕರಿಸಿದ್ದರು. ನಾವು ರಾಜ್ಯದ, ದೇಶದ ಹಿತಕ್ಕಾಗಿ ಕೆಲಸ ಮಾಡುತ್ತೇವೆ.

 ಕೇಂದ್ರದ ಮನರೇಗಾ ಯೋಜನೆಯ ರದ್ದುಪಡಿಸುವಿಕೆಯನ್ನು ಪ್ರಶ್ನಿಸುತ್ತೇವೆ. ಮನರೇಗಾ ಅಡಿ ಕಾರ್ಮಿಕರ ಕೆಲಸದ ಹಕ್ಕುನ್ನು ಕಸಿಯಲಾಗಿದೆ. ಬಿಜೆಪಿ ಕಾಲದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ನಮ್ಮ ಸರ್ಕಾರದ ಅವಧಿಯಲ್ಲಿ ಅಪರಾಧಗಳ ಸಂಖ್ಯೆ ಇಳಿಮುಖವಾಗಿವೆ.

ಉತ್ತರ ಕರ್ನಾಟಕದ ರಾಜ್ಯಗಳ ಅಭಿವೃದ್ಧಿಗೆ ಜಾರಿ ತರಲಾದ 371 ಜೆ ಕಾಯ್ದೆಯನ್ನು ಅಂದಿನ ಉಪಪ್ರಧಾನಿ ಎಲ್.ಕೆ.ಅದ್ವಾನಿ ವಿರೋಧಿಸಿದ್ದರು.

ಎಸ್ ಸಿಎಸ್ ಪಿ ಟಿಎಸ್ ಪಿ ಕಾಯ್ದೆಯನ್ನು ಬೇರೆ ರಾಜ್ಯಗಳಲ್ಲಿ ಏಕೆ ಜಾರಿ ಮಾಡಲಿಲ್ಲ? ಕಾಯ್ದೆಯಡಿ ಐದು ವರ್ಷಗಳಲ್ಲಿ 88,000 ಕೋಟಿ ವೆಚ್ಚವಾಗಿದ್ದು, ಈ ವರ್ಷ 42,018 ಕೋಟಿ ಮೀಸಲಿಡಲಾಗಿದೆ.

ಸುಪ್ರೀಂ ಕೋರ್ಟ್ ಬಡ್ತಿಯಲ್ಲಿ ಮೀಸಲಾತಿಯನ್ನು ರದ್ದು ಮಾಡಿದಾಗ ನಮ್ಮ ರಾಜ್ಯದಲ್ಲಿ ಇದನ್ನು ಜಾರಿ ಮಾಡಿದೆವು. ಬಡ್ಡಿಯಲ್ಲಿ ಮೀಸಲಾತಿ ನೀಡುವ ಏಕೈಕ ರಾಜ ಕರ್ನಾಟಕ. ಸರ್ಕಾರಿ ಗುತ್ತಿಗೆಯಲ್ಲಿ ಮೀಸಲಾತಿಯನ್ನು ನಮ್ಮ ಸರ್ಕಾರ ಜಾರಿ ಮಾಡಿದೆ ಎಂದು ಸಿದ್ದರಾಮಯ್ಯ ಸಮರ್ಥಿಸಿಕೊಂಡರು.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು