Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Crime News

ನರೇಗಾ ಹೆಸರು ಬದಲಾವಣೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕಾಂಗ್ರೆಸ್ ಪಕ್ಷದ ಮಹತ್ವಾಕಾಂಕ್ಷೆಯ ಮಹಾತ್ಮಾ ಗಾಂಧಿ ಉದ್ಯೋಗ ಖಾತರಿ ಯೋಜನೆ ಹೆಸರನ್ನು ಬದಲಾಯಿಸಿರುವ ಮೋದಿ ಸರ್ಕಾರ ಜನರ ಹಕ್ಕುಗಳನ್ನು ಕದಿಯುತ್ತಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಸೋಮವಾರ ನಗರದ ಅಂಬೇಡ್ಕರ್ ವೃತ್ತದಲ್ಲಿ ಧರಣಿ ಕುಳಿತು ಪ್ರತಿಭಟನೆ ನಡೆಸಿದರು.

ಜನರಿಗೆ ಕೆಲಸ ನೀಡಿ, ಅವರುಗಳ ಜೀವನೋಪಾಯಕ್ಕೆ ಅನುಕೂಲ ಮಾಡಿಕೊಟ್ಟಿರುವ ಉದ್ಯೋಗ ಖಾತ್ರಿ ಯೋಜನೆಯನ್ನು ಮೋದಿ‌ಸರ್ಕಾರ ಮೊಟಕುಗೊಳಿಸಲು‌ಮುಂದಾಗಿದೆ. ಅಲ್ಲದೆ ಆಯ್ಕೆ ಮಾಡಿದ ಹಳ್ಳಿಗಳಲ್ಲಿ ಮಾತ್ರ ಕೆಲಸ ಮಾಡಬೇಕಿದೆ. ಇದರಿಂದ ಬೇರೆ ಹಳ್ಳಿಗಳಲ್ಲಿ ಯಾವುದೇ ಕೆಲಸ ಮಾಡುವ ಆಗಿಲ್ಲ ಮತ್ತು ಅಲ್ಲಿನ ಜನರಿಗೂ ಕೆಲಸ ಇಲ್ಲದಂತಾಗಲಿದೆ ಎಂದು ನಾಯಕರು ಕಿಡಿಕಾರಿದರು.

ಇಲ್ಲಿಯವರೆಗೂ ಯಾವುದೇ ಗುತ್ತಿಗೆದಾರರನ್ನು ಬಳಸಿಕೊಳ್ಳದೆ ನೇರವಾಗಿ ಜನರಿಗೆ ಕೆಲಸ ನೀಡಿ ಅವರಿಗೆ ಹಣ ನೀಡಲಾಗುತ್ತಿತ್ತು. ಆದರೆ ಈಗ ಗುತ್ತಿಗೆದಾರರಿಗೆ ಕೆಲಸ ನೀಡಿ, ಜನರಿಗೆ ಕೆಲಸ ಇಲ್ಲದಂತೆ ಮಾಡಲಾಗಿದೆ‌. ಇದರಿಂದಾಗಿ ನಿರುದ್ಯೋಗ ಪ್ರಮಾಣ ಹೆಚ್ಚಾಗಲಿದೆ, ಕನಿಷ್ಟ ವೇತನದ ರಕ್ಷಣೆ ಇಲ್ಲದೆ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಲಿದ್ದಾರೆ.

ಕಾರ್ಮಿಕರ ಶೋಷಣೆ ಮತ್ತು ಒತ್ತಡ ಹೆಚ್ಚಾಗಿ, ಬಲವಂತದ ವಲಸೆ, ಗ್ರಾಮೀಣ ಜೀವನೋಪಾಯ ಕುಸಿತಗೊಳ್ಳಲಿದೆ. ಆದ್ದರಿಂದ ನಮ್ಮದೆ ಯೋಜನೆ, ನಮ್ಮದೇ ಆಡಳಿತ, ನಮ್ಮದೆ ಉದ್ಯೋಗ ಎನ್ನುವ ನರೇಗಾ ಯೋಜನೆಯನ್ನು ಮರು ಜಾರಿಗೆ ತರಬೇಕು ಎಂದು ಪ್ರತಿಭಟನೆಯಲ್ಲಿ ಆಗ್ರಹಿಸಿದರು.

ಜಿಲ್ಲಾ ಕಾಂಗ್ರೇಸ್ ಕಚೇರಿಯಿಂದ ಪಾದಯಾತ್ರೆ ಬಂದ ಕಾರ್ಯಕರ್ತರು ಅಂಬೇಡ್ಕರ್ ವೃತ್ತಕ್ಕೆ ಆಗಮಿಸಿ ಧರಣಿ ಕುಳಿತರು.

ಪ್ರತಿಭಟನೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಶಾಸಕರಾದ ಬಿ.ಜಿ.ಗೋವಿಂದಪ್ಪ, ಎನ್.ವೈ.ಗೋಪಾಲಕೃಷ್ಣ, ಜಿಲ್ಲಾಧ್ಯಕ್ಷ ಎಂ.ಕೆ.ತಾಜ್ ಪೀರ್, ಮಹಿಳಾ ಘಟನಕದ ಅಧ್ಯಕ್ಷೆ ಗೀತಾನಂದಿನಿಗೌಡ, ಮಾಜಿ ಸಂಸದ ಚಂದ್ರಪ್ಪ, ಓ.ಶಂಕರ್, ಹಾಲಸ್ವಾಮಿ, ಖಾದಿ ರಮೇಶ್ ಸೇರಿದಂತೆ ಇತರರು ಭಾಗವಹಿಸಿದ್ದರು.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು