E-PAPER
24 Nov 2026, 11:55:04 AM|
Gold₹12519/gGold24K ₹12,519/g - 22K ₹11,465/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಶಿಗ್ಗಾಂವಿ, ಸಂಡೂರು ಮತ್ತು ಚನ್ನಪಟ್ಟಣ ಕ್ಷೇತ್ರಗಳ ಮತ ಎಣಿಕೆ ಇಂದು

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳಾದ 83-ಶಿಗ್ಗಾಂವಿ, 95-ಸಂಡೂರು ಮತ್ತು 185-ಚನ್ನಪಟ್ಟಣ ಕ್ಷೇತ್ರಗಳ 2024 ರ ಉಪ ಚುನಾವಣೆಯ ಮತದಾನ ನವೆಂಬರ್ 13 ರಂದು ನಡೆದಿದ್ದು, ಮತ ಎಣಿಕೆಯು ನವೆಂಬರ್ 23 ರಂದು ಬೆಳಿಗ್ಗೆ 8 ಗಂಟೆಯಿಂದ ನಡೆಯಲಿದೆ. ಮತ ಎಣಿಕೆಗೆ ಅವಶ್ಯಕವಿರುವ ಎಲ್ಲಾ ವ್ಯವಸ್ಥೆ ಮಾಡಲಾಗಿದೆ.

ಇವಿಎಂ ಯಂತ್ರಗಳಲ್ಲಿ ಚಲಾವಣೆಯಾದ ಮತಗಳ ಎಣಿಕೆಗೆ ಮುನ್ನ ಅಂಚೆ ಮತ ಎಣಿಕೆ ಕಾರ್ಯ ನಡೆಯಲಿದೆ. ಅಂಚೆ ಮತ ಎಣಿಕೆಗೆ ಪ್ರತ್ಯೇಕ ಟೇಬಲ್ ವ್ಯವಸ್ಥೆ ಮಾಡಲಾಗುವುದು.

ಮತ ಎಣಿಕೆ ಕೇಂದ್ರಗಳು: ಶಿಗ್ಗಾಂವಿ ಕ್ಷೇತ್ರದ ಮತ ಎಣಿಕೆಯು ಹಾವೇರಿ ಜಿಲ್ಲೆಯ ದೇವಗಿರಿಯ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಕೊಠಡಿ/ ಸಭಾಂಗಣ 1 ರಲ್ಲಿ 14 ಟೇಬಲ್‍ಗಳಲ್ಲಿ ಎಣಿಕೆ ನಡೆಯಲಿದೆ.

ಸಂಡೂರು ಕ್ಷೇತ್ರದ ಮತ ಎಣಿಕೆಯು ಬಳ್ಳಾರಿಯ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಕೊಠಡಿ/ ಸಭಾಂಗಣ 1ರಲ್ಲಿ 14 ಟೇಬಲ್‍ಗಳಲ್ಲಿ ಎಣಿಕೆ ನಡೆಯಲಿದೆ. ಮತ್ತು ಚನ್ನಪಟ್ಟಣ ಕ್ಷೇತ್ರದ ಮತ ಎಣಿಕೆಯ ರಾಮನಗರ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಕೊಠಡಿ / ಸಭಾಂಗಣ -3+1 ರಲ್ಲಿ 7+7+1 – 15 ಟೇಬಲ್‍ಗಳಲ್ಲಿ ನಡೆಯಲಿದೆ.

ಶಿಗ್ಗಾಂವಿ ಕ್ಷೇತ್ರದ ಮತ ಎಣಿಕೆ ಕೇಂದ್ರದಲ್ಲಿ 1 - ಆರ್‍ಒ, 2- ಎಆರ್‍ಒ, 19 - ಸೂಕ್ಷ್ಮ ವೀಕ್ಷಕರು, 17- ಎಣಿಕೆ ಮೇಲ್ವಿಚಾರಕರು, 18- ಎಣಿಕೆ ಸಹಾಯಕರು, ಸಂಡೂರು ಕ್ಷೇತ್ರದ ಮತ ಎಣಿಕೆ ಕೇಂದ್ರದಲ್ಲಿ 1 - ಆರ್‍ಒ, 1 - ಎಆರ್‍ಒ, 20 - ಸೂಕ್ಷ್ಮ ವೀಕ್ಷಕರು, 19- ಎಣಿಕೆ ಮೇಲ್ವಿಚಾರಕರು, 21 - ಎಣಿಕೆ ಸಹಾಯಕರು

ಮತ್ತು ಚನ್ನಪಟ್ಟಣ ಕ್ಷೇತ್ರದ ಮತ ಎಣಿಕೆ ಕೇಂದ್ರದಲ್ಲಿ 1 - ಆರ್‍ಒ, 1- ಎಆರ್‍ಒ, 1- ಹೆಚ್ಚುವರಿ ಎಆರ್‍ಒ, 30 - ಸೂಕ್ಷ್ಮ ವೀಕ್ಷಕರು, 30 - ಎಣಿಕೆ ಮೇಲ್ವಿಚಾರಕರು, 30- ಎಣಿಕೆ ಸಹಾಯಕರನ್ನೊಳಗೊಂಡ ಅಧಿಕಾರಿ/ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಾರಣಾಂತಿಕ ರಸ್ತೆ ಅಪಘಾತ ಪ್ರಕರಣ: ಇಬ್ಬರು ಆರೋಪಿಗಳಿಗೆ ಸಾದಾ ಶಿಕ್ಷೆ ಮತ್ತು ದಂಡ ವಿಧಿಸಿದ ನ್ಯಾಯಾಲಯಕುವೆಂಪು ಕಂಡ ಕ್ರಾಂತಿವೀರ, ಶಿವರುದ್ರಪ್ಪ ಮೆಚ್ಚಿದ ಮಹಾಚೇತನ! ಬಸವಣ್ಣನವರನ್ನು ಅಳೆಯುವ ಅರ್ಹತೆ ಯಾರಿಗಿದೆ?ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿ: 1:3 ಅನುಪಾತದಲ್ಲಿ ಅಭ್ಯರ್ಥಿಗಳ ಪಟ್ಟಿ ಪ್ರಕಟರಾಷ್ಟ್ರೀಯ ಮತದಾರರ ದಿನಾಚರಣೆ: ಜಿಲ್ಲಾಮಟ್ಟದ ಪ್ರಬಂಧ, ರಸಪ್ರಶ್ನೆ ಸ್ಪರ್ಧೆ ಆಯೋಜನೆಆರ್.ಆರ್. ನಗರದಲ್ಲಿ ರಾಜಕೀಯ ಬೆಳವಣಿಗೆ; ಮುನಿರತ್ನ ಆಪ್ತರು ಕಾಂಗ್ರೆಸ್ ಸೇರ್ಪಡೆರೇಣುಕಾಸ್ವಾಮಿ ಕೊಲೆ ಕೇಸ್: ಕೋರ್ಟ್‌ನಲ್ಲಿ ಉಲ್ಟಾ ಹೊಡೆದ ಪಟ್ಟಣಗೆರೆ ಶೆಡ್ ಗಾರ್ಡ್, ಪ್ರಾಸಿಕ್ಯೂಷನ್‌ಗೆ ಹಿನ್ನಡೆ!ಕಾಡಾನೆ ಸ್ಥಳಾಂತರಕ್ಕೆ ತೀವ್ರ ವಿರೋಧ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ನಯನಾ ಮೋಟಮ್ಮಏಷ್ಯಾ ಪವರ್ ಇಂಡೆಕ್ಸ್ 2026: 3ನೇ ಸ್ಥಾನ ಉಳಿಸಿಕೊಂಡ ಭಾರತ; ಪ್ರಾದೇಶಿಕ ನಾಯಕತ್ವದಲ್ಲಿ ಮೋದಿಗೆ 2ನೇ ಸ್ಥಾನಮುಖ್ಯಮಂತ್ರಿಗಳ ಮಾತಿನ ಮೇಲೆ ವಿಶ್ವಾಸವಿಡಿ: ಡಿಸಿಎಂ ಜಿ. ಪರಮೇಶ್ವರ್ಚೆಕ್ ಬೌನ್ಸ್ ಪ್ರಕರಣ: ಹೈಕೋರ್ಟ್ ಮಹತ್ವದ ತೀರ್ಪು