Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
International News

15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಆಯ್ಕೆ

ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಭಾರತದ ನೂತನ ಉಪರಾಷ್ಟ್ರಪತಿಯಾಗಿ ಎನ್​ಡಿಎ ಅಭ್ಯರ್ಥಿ ಸಿ.ಪಿ ರಾಧಾಕೃಷ್ಣನ್ ಆಯ್ಕೆಯಾಗಿದ್ದಾರೆ.
ಎನ್‌ಡಿಎ ನಾಮನಿರ್ದೇಶಿತರಾದ ಸಿ.ಪಿ. ರಾಧಾಕೃಷ್ಣನ್ ಅವರು ಭಾರತದ 15ನೇ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ.


ಉಪರಾಷ್ಟ್ರಪತಿಗಳ ಚುನಾವಣೆಯಲ್ಲಿ ಸಿ.ಪಿ ರಾಧಾಕೃಷ್ಣನ್ ಅವರು ತಮ್ಮ ಪ್ರತಿಸ್ಪರ್ಧಿ ಬಿ. ಸುದರ್ಶನ್ ರೆಡ್ಡಿ ವಿರುದ್ಧ 452 ಮತಗಳನ್ನು ಪಡೆಯುವ ಮೂಲಕ ಸ್ಪಷ್ಟವಾಗಿ ಗೆಲುವು ಸಾಧಿಸಿದ್ದಾರೆ. ಸುದರ್ಶನ್ ರೆಡ್ಡಿ ಅವರು 300 ಮತಗಳನ್ನು ಪಡೆದಿದ್ದಾರೆ. ಇವರ ಗೆಲುವಿನ ಅಂತರ 152 ಮತಗಳಾಗಿದೆ.


ಎನ್​ಡಿಎ ಅಭ್ಯರ್ಥಿಯಾಗಿ ಸಿ.ಪಿ ರಾಧಾಕೃಷ್ಣನ್ ಅವರ ಹೆಸರನ್ನು ಘೋಷಿಸಲಾಯಿತು. ತಮ್ಮ ಅಭ್ಯರ್ಥಿಗೆ ಬೆಂಬಲ ನೀಡಬೇಕೆಂದು ಪ್ರಧಾನಿ ನರೇಂದ್ರ ಮೋದಿ ವಿಪಕ್ಷಗಳಿಗೆ ಮನವಿ ಮಾಡಿದ್ದರು. ಆದರೆ, ಇಂಡಿಯಾ ಬಣದ ಜಂಟಿ ಅಭ್ಯರ್ಥಿಯಾಗಿ ಸುದರ್ಶನ್ ರೆಡ್ಡಿ ಅವರನ್ನು ಕಣಕ್ಕಿಳಿಸಲಾಗಿತ್ತು. ಉಪರಾಷ್ಟ್ರಪತಿ ಚುನಾವಣೆಗಳ ಮತದಾನ ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಪ್ರಾರಂಭವಾಗಿ ಸಂಜೆ 5 ಗಂಟೆಗೆ ಮುಕ್ತಾಯವಾಯಿತು.


ರಾಧಾಕೃಷ್ಣನ್ ಅವರನ್ನು ಭಾರತೀಯ ಜನತಾ ಪಕ್ಷ (ಬಿಜೆಪಿ), ತೆಲುಗು ದೇಶಂ ಪಕ್ಷ (ಟಿಡಿಪಿ), ಜನತಾದಳ ಯುನೈಟೆಡ್ (ಜೆಡಿಯು), ಶಿವಸೇನೆ, ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷ (ಎನ್‌ಸಿಪಿ), ಅಸ್ಸಾಂ ಗಣ ಪರಿಷತ್ (ಎಜಿಪಿ), ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್), ರಾಷ್ಟ್ರೀಯ ಲೋಕ ದಳ (ಆರ್‌ಎಲ್‌ಡಿ), ಜನತಾದಳ ಜಾತ್ಯತೀತ (ಜೆಡಿಎಸ್) ಮತ್ತು ಆಲ್ ಇಂಡಿಯಾ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (ಎಐಎಡಿಎಂಕೆ) ಸೇರಿದಂತೆ ಇತರರು ಬೆಂಬಲಿಸಿದರು. ಜಗನ್ ಮೋಹನ್ ರೆಡ್ಡಿ ಅವರ ವೈಎಸ್‌ಆರ್‌ಸಿಪಿ ಕೂಡ ರಾಧಾಕೃಷ್ಣನ್ ಪರವಾಗಿ ಮತ ಚಲಾಯಿಸಿತು.


ಇಂಡಿ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ಅವರಿಗೆ ಕಾಂಗ್ರೆಸ್, ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ), ಸಮಾಜವಾದಿ ಪಕ್ಷ (ಎಸ್‌ಪಿ), ತೃಣಮೂಲ ಕಾಂಗ್ರೆಸ್ (ಟಿಎಂಸಿ), ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ), ಆಮ್ ಆದ್ಮಿ ಪಕ್ಷ (ಎಎಪಿ), ರಾಷ್ಟ್ರೀಯ ಜನತಾದಳ (ಆರ್‌ಜೆಡಿ), ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷ (ಎಸ್‌ಪಿ) ಮತ್ತು ಎಡ ಪಕ್ಷಗಳು ಸೇರಿದಂತೆ ಇತರ ಪಕ್ಷಗಳು ಬೆಂಬಲ ನೀಡಿದವು.

ಬಿಜು ಜನತಾದಳ (ಬಿಜೆಡಿ), ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಮತ್ತು ಶಿರೋಮಣಿ ಅಕಾಲಿ ದಳ (ಎಸ್‌ಎಡಿ) ಸೇರಿದಂತೆ ಹಲವಾರು ಪಕ್ಷಗಳು ಮತದಾನದಿಂದ ದೂರ ಉಳಿದಿದ್ದು ವಿಶೇಷವಾಗಿತ್ತು. ಸಿ.ಪಿ ರಾಧಾಕೃಷ್ಣನ್ 437 ಮತಗಳನ್ನು ಪಡೆಯುವ ನಿರೀಕ್ಷೆಯಿತ್ತು, ಆದರೆ 452 ಮತಗಳನ್ನು ಪಡೆಯುವ ಮೂಲಕ ಅಭೂತಪೂರ್ವ ಗೆಲುವು ಸಾಧಿಸಿದರು.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚಿತ್ರದುರ್ಗ: 25,000 ರೂ. ಲಂಚ ಪಡೆಯುತ್ತಿದ್ದ ಉಪವಿಭಾಗಾಧಿಕಾರಿ ಕಚೇರಿಯ ಪ್ರಥಮ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆಪಶ್ಚಿಮಘಟ್ಟ ಸಂರಕ್ಷಣೆ: ಕಸ್ತೂರಿ ರಂಗನ್ ವರದಿ ಸ್ಯಾಟಲೈಟ್ ಮ್ಯಾಪಿಂಗ್ ಒಪ್ಪಲು ಸಾಧ್ಯವಿಲ್ಲ; ಬಿ.ಕೆ.ಹರಿಪ್ರಸಾದ್ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶಶಾಸಕ ಎಸ್. ಸುರೇಶ್ ಕುಮಾರ್ ಅವರು "ಸಜ್ಜನ" ಎಂಬ ಮುಖವಾಡ ಧರಿಸಿದ ದುರ್ಜನಸರ್ಕಾರದ ಅನುದಾನಕ್ಕೆ ಕಾಯದೆ ಸ್ವಂತ ಖರ್ಚಿನಲ್ಲಿ ಕಾಲುವೆ ದುರಸ್ತಿಗೆ ಮುಂದಾದ ಎಚ್.ಡಿ. ರೇವಣ್ಣಹೈಕೋರ್ಟ್‌ನಿಂದ ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ ಎಸ್‌ಐಟಿ ತನಿಖೆಗೆ ಆದೇಶಆಲಮಟ್ಟಿ ಜಲಾಶಯ ಎತ್ತರ ಹೆಚ್ಚಳ: ಯುಕೆಪಿ ಹಂತ-3ರ ಭೂಸ್ವಾಧೀನ ಪ್ರಕ್ರಿಯೆಗೆ ಚುರುಕುವ್ಯಾಪಕ ಭ್ರಷ್ಟಾಚಾರ: ಕಾಮಗಾರಿಗಳ ಶ್ವೇತಪತ್ರ ಹೊರಡಿಸಲು ಆಂಜನೇಯ ಆಗ್ರಹ‘ಗೌರವಯುತ ಲಂಚ’: ಕಾಂಗ್ರೆಸ್ ಸರ್ಕಾರದ ಹೊಸ 'ಪ್ರಜಾಸೇವಾ ಶುಲ್ಕ' ಎಂದು ಆರ್. ಅಶೋಕ್ಸ್ವಪಕ್ಷೀಯರ ಆಕ್ರೋಶವೇ ಕಾಂಗ್ರೆಸ್ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿ: ಆರ್. ಅಶೋಕ್ ವಾಗ್ದಾಳಿ