Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಎಸ್‌ಐಆರ್ ಹೆಸರಿನಲ್ಲಿ ಮತದಾರರ ಹಕ್ಕು ಕಸಿಯುವ ಹುನ್ನಾರ: ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ಪ್ರಕಾಶ್ ರೈ ಆಗ್ರಹ

ಚಂದ್ರವಳ್ಳಿ ನ್ಯೂಸ್, ಬಳ್ಳಾರಿ:
"ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ದೇಶದ ಅರ್ಹ ಮತದಾರರ ಮತದಾನದ ಹಕ್ಕು ಕಸಿಯುವ ದೊಡ್ಡ ಪ್ರಯತ್ನ ನಡೆಯುತ್ತಿದೆ" ಎಂದು ನಟ ಹಾಗೂ ಸಾಮಾಜಿಕ ಹೋರಾಟಗಾರ ಪ್ರಕಾಶ್ ರೈ ತೀವ್ರವಾಗಿ ಆರೋಪಿಸಿದ್ದಾರೆ. ಎಸ್‌ಐಆರ್ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಕೂಡಲೇ ಪದಚ್ಯುತಿಗೊಳಿಸಬೇಕೆಂದು ಅವರು ಆಗ್ರಹಿಸಿದ್ದಾರೆ.

ಬಳ್ಳಾರಿ ನಗರದಲ್ಲಿ ನಾಗರಿಕ ಸಂಘಟನೆಗಳು ಹಾಗೂ ಜಾತ್ಯತೀತ ಪಕ್ಷಗಳ ಮುಖಂಡರೊಂದಿಗೆ ನಡೆದ ಎಸ್‌ಐಆರ್ ವಿರೋಧಿ ಸಮಾವೇಶದಲ್ಲಿ ಮಾತನಾಡಿದ ಅವರು, ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ವ್ಯಾಪಕ ಅಕ್ರಮಗಳು ನಡೆಯುತ್ತಿವೆ ಎಂದು ದೂರಿದರು.

Advertisement

ಅರ್ಹ ಮತದಾರರ ಹೆಸರು ಕೈಬಿಡುವ ಹುನ್ನಾರ: ಸರ್ಕಾರ ಮತ್ತು ಚುನಾವಣಾ ಆಯೋಗವು ಎಸ್‌ಐಆರ್ ಹೆಸರಿನಲ್ಲಿ ಅರ್ಹ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಉದ್ದೇಶಪೂರ್ವಕವಾಗಿ ಕೈಬಿಡುವ ಸಂಚು ರೂಪಿಸಿವೆ ಎಂದ ಪ್ರಕಾಶ್ ರಾಜ್, "ಈ ಪ್ರಕ್ರಿಯೆಯು ಎಲ್ಲರನ್ನೂ ಒಳಗೊಂಡಿಲ್ಲ. ಬದುಕಿರುವ ಜನರನ್ನು ಸತ್ತವರೆಂದು ಗುರುತಿಸಲಾಗಿದೆ. ಜೀವಂತವಾಗಿರುವವರ ಹೆಸರುಗಳನ್ನು ಪಟ್ಟಿಯಿಂದ ಕೈಬಿಟ್ಟಿರುವುದನ್ನು ಪ್ರಶ್ನಿಸಿದರೆ, ಫಾರಂ-6 ತುಂಬಿ ಹೊಸದಾಗಿ ಹೆಸರು ನೋಂದಾಯಿಸಿಕೊಳ್ಳಿ ಎಂದು ಬೇಜವಾಬ್ದಾರಿಯಿಂದ ಹೇಳಲಾಗುತ್ತಿದೆ" ಎಂದು ಆಕ್ರೋಶ ವ್ಯಕ್ತಪಡಿಸಿದರು.

ದೆಹಲಿ, ಹರಿಯಾಣ ಹಾಗೂ ಪಶ್ಚಿಮ ಬಂಗಾಳದಲ್ಲಿ ನಡೆದ ಎಸ್‌ಐಆರ್ ಪ್ರಕ್ರಿಯೆಯನ್ನು ಉಲ್ಲೇಖಿಸಿದ ಅವರು, ಚುನಾವಣೆಗಳಲ್ಲಿ ಬೇಕಾದ ಫಲಿತಾಂಶವನ್ನು ತರುವ ದುರುದ್ದೇಶದಿಂದಲೇ ವಿವಿಧ ರಾಜ್ಯಗಳಲ್ಲಿ ಈ ತಂತ್ರ ಅನುಸರಿಸಲಾಗುತ್ತಿದ್ದು, ಇದರ ಹಿಂದೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ನೇರ ಪಾತ್ರವಿದೆ ಎಂದು ಆರೋಪಿಸಿದರು.

ಅಕ್ಟೋಬರ್ 15ರಂದು ದೆಹಲಿಯಲ್ಲಿ ಬೃಹತ್ ಹೋರಾಟ:
"ಎಸ್‌ಐಆರ್‌ನ ಲೋಪದೋಷಗಳನ್ನು ಜನರ ಮುಂದಿಟ್ಟು ಇದರ ವಿರುದ್ಧ ಸಾರ್ವಜನಿಕರು ಧ್ವನಿ ಎತ್ತಬೇಕಿದೆ. ಈ ಹೋರಾಟ ಈಗ ಹೊಸ ಸ್ವರೂಪ ಪಡೆದುಕೊಳ್ಳಲಿದೆ. ಜ್ಞಾನೇಶ್ ಕುಮಾರ್ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಆಗ್ರಹಿಸಿ ಅಕ್ಟೋಬರ್ 15ರಂದು ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು. ಇದು ಮತ್ತೊಂದು ಸ್ವಾತಂತ್ರ್ಯ ಹೋರಾಟದ ರೂಪ ಪಡೆಯಲಿದೆ" ಎಂದು ಅವರು ಎಚ್ಚರಿಸಿದರು.

ಫಾರಂ-7 ದುರುಪಯೋಗ, ಮುಸ್ಲಿಂ ಮತದಾರರ ಹೆಸರು ನಾಶ?:
ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ 22 ಮತಗಟ್ಟೆಗಳಲ್ಲಿ ನೂರಾರು ಮುಸ್ಲಿಂ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲು ನಕಲಿ ಹಾಗೂ ಮುಂಚಿತವಾಗಿ ಮುದ್ರಿಸಲಾದ ಫಾರಂ-7ಗಳನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಪ್ರಕಾಶ್ ರಾಜ್ ಗಂಭೀರ ಆರೋಪ ಮಾಡಿದರು. ಈ ಕುರಿತು ಸ್ಥಳೀಯರು ಮತ್ತು ಬಿಎಲ್‌ಒಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದರು.

"ಬೆಳಗಾವಿಯ ಒಂದು ಮತಗಟ್ಟೆಯಲ್ಲಿ ಬಿಜೆಪಿ ಯುವ ಮೋರ್ಚಾ ಹೆಸರಿನಲ್ಲಿ ಸುಮಾರು 200 ಮತದಾರರ ಹೆಸರುಗಳನ್ನು ಪಟ್ಟಿಯಿಂದ ಅಳಿಸಲು ಅರ್ಜಿ ಸಲ್ಲಿಸಲಾಗಿದೆ.

ಈ ಸಂಬಂಧ ಈಗಾಗಲೇ ದೂರು ದಾಖಲಾಗಿದ್ದು, ಶುಕ್ರವಾರ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ತನಿಖೆ ನಡೆಯಲಿದೆ" ಎಂದು ತಿಳಿಸಿದರು. ಮತಗಟ್ಟೆ ಮಟ್ಟದ ಅಧಿಕಾರಿಗೆ ಕರೆ ಮಾಡಿ ಮುಸ್ಲಿಂ ಸಮುದಾಯದ ನೂರಾರು ಮತದಾರರ ಹೆಸರುಗಳನ್ನು ಅಳಿಸುವಂತೆ ಒತ್ತಡ ಹೇರಲಾಗಿದೆ ಎಂಬ ಆರೋಪಗಳೂ ಕೇಳಿಬಂದಿವೆ ಎಂದರು.

ಗೃಹ ಸಚಿವರಿಗೆ ದೂರು ಹಾಗೂ ದಾಖಲೆ ಬಿಡುಗಡೆ:
"ಈ ಎಲ್ಲ ಅಕ್ರಮಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಸಂಗ್ರಹಿಸಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಗಮನಕ್ಕೆ ತಂದು ದೂರು ಸಲ್ಲಿಸಲಾಗುವುದು. ದಾಖಲೆಗಳ ಆಧಾರದ ಮೇಲೆ ಸಂಬಂಧಪಟ್ಟವರ ಹೆಸರುಗಳನ್ನು ಬಹಿರಂಗಪಡಿಸಿ ಸಮಗ್ರ ತನಿಖೆ ನಡೆಸುವಂತೆ ಒತ್ತಾಯಿಸಲಾಗುವುದು. ಇದರ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿ ಈ ಕುರಿತ ಸಂಪೂರ್ಣ ಮಾಹಿತಿಯನ್ನು ರಾಜ್ಯದ ಜನರ ಮುಂದಿಡಲಾಗುವುದು" ಎಂದು ಪ್ರಕಾಶ್ ರಾಜ್ ಸ್ಪಷ್ಟಪಡಿಸಿದರು.

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
​ ಇಮ್ರಾನ್-ಆಶಾ ಆತ್ಮಹತ್ಯೆ, ಸಾಮಾಜಿಕ ಜಾಲತಾಣದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ: 11 ಇನ್‌ಸ್ಟಾಗ್ರಾಮ್ ಖಾತೆ ಬಳಕೆದಾರರ ವಿರುದ್ಧ FIRಹಿರಿಯೂರು ತಾಲೂಕಿನ ಮೇಟಿಕುರ್ಕೆಯಲ್ಲಿ ಇಂದು ‘ಸಮಾನತೆಗಾಗಿ ಸಹಭೋಜನ’ ಕಾರ್ಯಕ್ರಮಕೊಡಗಿನ ದಸರಾ; ಕರಗೋತ್ಸವದಿಂದ ಜನೋತ್ಸವದವರೆಗೆ:….ಹನಿಟ್ರ್ಯಾಪ್ ಸಂಚು ಪ್ರಶ್ನಿಸಿದ್ದಕ್ಕೆ ಜೆಡಿಎಸ್ ಕಾರ್ಯಕರ್ತರ ಮೇಲೆ ಸರ್ಕಾರದ ದೌರ್ಜನ್ಯ: ಕುಮಾರಸ್ವಾಮಿಜೆಡಿ(ಎಸ್) ಕಾರ್ಯಕರ್ತರ ಗುರಿ: ಪೊಲೀಸ್ ಕಮಿಷನರ್ ಕಚೇರಿ ಮುಂದೆ ಎಚ್.ಡಿ ಕುಮಾರಸ್ವಾಮಿ ಪ್ರತಿಭಟನೆಗ್ರಾಮೀಣ, ನಗರ ಸ್ಥಳೀಯ ಸಂಸ್ಥೆಗಳಿಗೂ ಜಿಎಸ್‌ಟಿ ಪಾಲು: ಪ್ರಸ್ತಾವನೆ ಸಲ್ಲಿಸಲು ಸಿಎಂ ನಿರ್ಧಾರಅಮೆರಿಕದ ಹಿಂದೂ ದೇವಾಲಯದ ಮೇಲೆ ಸಾಮೂಹಿಕ ಗುಂಡಿನ ದಾಳಿಗೆ ಸಂಚು: 19 ವರ್ಷದ ಯುವಕ ಬಂಧನಧಾರ್ಮಿಕ ಮತಾಂತರಕ್ಕೆ ಸಿಗಲ್ಲ ಜಾತಿ ಮೀಸಲಾತಿ: ಸುಪ್ರೀಂ ಕೋರ್ಟ್ಹಾಲಿವುಡ್ ಗಾಯಕಿ ಮೇರಿ ಮಿಲ್‌ಬೆನ್ ಸ್ಫೋಟಕ ಆರೋಪ: ಭಾರತದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳಿಗೆ ಅಮೆರಿಕದಿಂದ ಹಣಕಾಸು ನೆರವು!ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆಗೆ ಹಾಲಿವುಡ್ ಗಾಯಕಿ ಮೇರಿ ಮಿಲ್ಬೆನ್ ಎಚ್ಚರಿಕೆ