ಚಂದ್ರವಳ್ಳಿ ನ್ಯೂಸ್, ಚನ್ನಪಟ್ಟಣ:
ಪಟ್ಟಣದ ಕೊಲ್ಲಾಪುರದಮ್ಮ ದೇವಸ್ಥಾನದ ಆವರಣದಲ್ಲಿ ಕಸ್ತೂರಿ ಕರ್ನಾಟಕ ಜನಪದ ವೇದಿಕೆ, ಮರೀಗೌಡ ಚಾರಿಟಬಲ್ ಟ್ರಸ್ಟ್ ಮತ್ತು ರೇಷ್ಮೆ ಸೀಮೆ ಕನ್ನಡ ದಿನಪತ್ರಿಕೆ ಹಾಗೂ ಮಾರುತಿ ಮೆಡಿಕಲ್ಸ್ ಬೆಂಗಳೂರು ಇವರ ಸಂಯುಕ್ತಾಶ್ರದಲ್ಲಿ ಆಯೋಜಿಸಿದ್ದ 2025-26 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆದು ಸಾಧನೆ ಮಾಡಿರುವ ವಿದ್ಯಾರ್ಥಿಗಳಿಗೆ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ವತಿಯಿಂದ ಸನ್ಮಾನಿಸಲಾಯಿತು.
ಈ ಸಮಾರಂಭದಲ್ಲಿ ವೇದಿಕೆ ರಾಜ್ಯಾಧ್ಯಕ್ಷ ರಮೇಶ್ ಗೌಡ ಮಾತನಾಡಿ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆದು ಸಾಧನೆ ಮಾಡಿದ್ದು ಅದರಲ್ಲೂ ಹೆಣ್ಣು ಮಕ್ಕಳ ಹೆಚ್ಚು ಸಾಧನೆ ಮಾಡಿರುವುದು ಶ್ಲಾಘನೀಯ, ಹೆಣ್ಣು ಎಂದರೆ ಬಹಳ ಹಿಂದೆ ಕೀಳ ಕೀಳುಹಿರಿಮೆಯಿಂದ ನೋಡುತ್ತಿದ್ದ ಕಾಲ ಹೋಗಿ ಇಂದು ಹೆಣ್ಣುಮಕ್ಕಳಿಗೆ ಸಮಾಧಾನ ಉತ್ತಮ ಸ್ನಾನಗಳು ಸಿಗುತ್ತಿದ್ದು, ಎಲ್ಲ ಕ್ಷೇತ್ರದಲ್ಲೂ ಹೆಣ್ಣುಮಕ್ಕಳು ಸಾಧನೆ ಮಾಡುತ್ತಿದ್ದಾರೆ ಎಂಬುದು ಪೋಷಕರು ಮತ್ತು ಶಿಕ್ಷಣ ಸಂಸ್ಥೆಗಳು ಸೇರಿದಂತೆ ತಾಲೂಕಿಗೆ ಹೆಮ್ಮೆಯ ಸಂಗತಿಯಾಗಿದೆ. ಸನ್ಮಾನ ಸ್ವೀಕರಿಸುವವರು ಮುಂದಿನ ದಿನಗಳಲ್ಲಿ ಶಿಕ್ಷಣದಲ್ಲಿ ಮತ್ತಷ್ಟು ಸಾಧನೆ ಮಾಡಿ ನಿಮ್ಮ ಪೋಷಕರ ಗೌರವ ಹೆಚ್ಚಿಸಿ ಎಂದು ಅಭಿಪ್ರಾಯಪಟ್ಟರು.
ಡಾ. ಟಿ.ವಿ.ಶಂಕರ್ ಅವರು ಮಾತನಾಡಿ, ಯುವಜನತೆ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸದೇ, ಆಕಸ್ಮಿಕವಾಗಿ ಸಾವುಗಳು ಹೆಚ್ಚಾಗಿದ್ದು, ವಿದ್ಯಾರ್ಥಿ ದೆಸೆಯಿಂದಲೇ ಶಿಕ್ಷಣದ ಜೊತೆಗೆ ಕ್ರೀಡಾ ಚಟುವಟಿಕೆಗಳು ಮತ್ತು ವ್ಯಾಯಾಮಗಳನ್ನು ಅಳವಡಿಸಿಕೊಂಡರೆ ದೈಹಿಕ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದರು.
ಕೊನೆಯಲ್ಲಿ ಸೈಕ್ಲಿಂಗ್ ಮೂಲಕ ಶ್ರೀಲಂಕಾ ಪ್ರವಾಸ ಮಾಡಿದ ಬಂದ ಸಾಹಸಿಗಳಿಗೆ ಸಹ ಸನ್ಮಾನಿಸಿದರು.
ಇದೇ ಸಂದರ್ಭದಲ್ಲಿ ನಗರಸಭೆ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ವಾಸಿಲ್ ಅಲಿಖಾನ್, ನಗರಸಭೆ ಪ್ರಭಾರ ಮಾಜಿ ಅಧ್ಯಕ್ಷ ಮುದ್ದುಕೃಷ್ಣೇಗೌಡ, ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಉಮಾ, ಸಾರ್ವಜನಿಕ ಒಕ್ಕಲಿಗರ ವಿದ್ಯಾಸಂಸ್ಥೆಯ ನಿರ್ದೇಶಕ ಮಹೇಶ್ವರ್, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸತೀಶ್, ಡಾ. ರಾಜಶ್ರೀ, ನಿಸರ್ಗ ಲೋಕೇಶ್, ಡಾ. ಮಲವೇಗೌಡ, ಸಂಘಟನಾ ಕಾರ್ಯದರ್ಶಿ ಜಗದಾಪುರ ಕೃಷ್ಣೇಗೌಡ, ಕ.ಕ.ಜ ವೇದಿಕೆ ಮಹಿಳಾ ಘಟಕ ಅಧ್ಯಕ್ಷೆ ಸುಮಾ, ಜೆಡಿಎಸ್ ಮುಖಂಡ ಜೆಸಿಬಿಲೋಕೇಶ್, ಜ್ಞಾನ ಸರೋವರ ಕಾಲೇಜಿನ ಪ್ರಾಂಶುಪಾಲ ಹೇಮಾಲತಾ, ಹೊಲಸಾಳಯ್ಯ, ರಮೇಶ್ ಮತ್ತು ಇನ್ನಿತರರು ಉಪಸ್ಥಿತರಿದ್ದರು.


