Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಸರ್ಕಾರಿ ಬಸ್ ಗ್ಲಾಸ್ ಒಡೆದು ಕರ್ತವ್ಯಕ್ಕೆ ಅಡ್ಡಿ; 15 ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ 

ಚಂದ್ರವಳ್ಳಿ ನ್ಯೂಸ್, ಜಗಳೂರು: 
ಜಗಳೂರು ತಾಲೂಕನ್ನು ಬರಪೀಡಿತ ಪಟ್ಟಿಯಿಂದ ಕೈಬಿಟ್ಟಿರುವುದನ್ನು ಖಂಡಿಸಿ ಸೋಮವಾರ ನಡೆದ ಪ್ರತಿಭಟನೆ ಮತ್ತು ಬಂದ್ ಉದ್ವಿಗ್ನ ಸ್ವರೂಪ ಪಡೆದುಕೊಂಡಿದ್ದು, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟ ಹಾಗೂ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ 15 ಜನ ಬಿಜೆಪಿ ಕಾರ್ಯಕರ್ತರ ವಿರುದ್ಧ ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆ ಹಿನ್ನೆಲೆ: ಜಗಳೂರು ತಾಲೂಕನ್ನು ಬರಪೀಡಿತ ಪಟ್ಟಿಗೆ ಸೇರಿಸುವಂತೆ ಆಗ್ರಹಿಸಿ ಬಿಜೆಪಿ ನಾಯಕರು ಹಾಗೂ ರೈತರು ಸೋಮವಾರ ಬಂದ್‌ಗೆ ಕರೆ ನೀಡಿದ್ದರು.
ಪ್ರತಿಭಟನೆಯ ಸ್ವರೂಪ: ಜಗಳೂರು-ದೊಣ್ಣೆಹಳ್ಳಿ ರಸ್ತೆ ತಡೆದು ಟೈರ್‌ಗಳಿಗೆ ಬೆಂಕಿ ಹಚ್ಚಿ ಪ್ರತಿಭಟನಾಕಾರರು ತೀವ್ರ ಆಕ್ರೋಶ ಹೊರಹಾಕಿದರು.

ಪೊಲೀಸರ ವಶ & ಹೈಡ್ರಾಮಾ: ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಕರೆದೊಯ್ಯಲು ಮುಂದಾದಾಗ ಬಿಗುವಿನ ವಾತಾವರಣ ನಿರ್ಮಾಣವಾಯಿತು.

Advertisement

ಸಾರ್ವಜನಿಕ ಆಸ್ತಿ ಹಾನಿ: ವಶಕ್ಕೆ ಪಡೆಯುವ ವೇಳೆ ಕೆಲ ಕಾರ್ಯಕರ್ತರು ಬಸ್‌ನ ಕಿಟಕಿ ಗಾಜುಗಳನ್ನು ಒಡೆದಿದ್ದು, ಈ ವೇಳೆ ಪೊಲೀಸರ ಕಣ್ಣಿಗೂ ಗಾಯವಾಗಿದೆ. ಅಲ್ಲದೆ, ಬಸ್‌ಗೆ ಅಡ್ಡಲಾಗಿ ರಸ್ತೆಯಲ್ಲಿ ಮಲಗಿ ಆಕ್ರೋಶ ವ್ಯಕ್ತಪಡಿಸಿದರು.

"ಜಗಳೂರಿನಲ್ಲಿ ಸೋಮವಾರ ನಡೆದ ಪ್ರತಿಭಟನೆ ವೇಳೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಕೆಎಸ್‌ಆರ್‌ಟಿಸಿ ಬಸ್ ಕಿಟಕಿ ಗಾಜು ಒಡೆದು ಸರ್ಕಾರಿ ಸ್ವತ್ತು ನಾಶಪಡಿಸಿದ ಹಿನ್ನೆಲೆಯಲ್ಲಿ ಒಟ್ಟು 15 ಜನ ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ."

ಸಿದ್ದರಾಮಯ್ಯ, ಪಿಐ, ಜಗಳೂರು ಪೊಲೀಸ್ ಠಾಣೆ.
ಪ್ರತಿಭಟನೆಯ ಆರಂಭದಲ್ಲಿ ಶಾಂತಿಯುತವಾಗಿದ್ದ ಆಂದೋಲನವು, ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ಪಡೆಯುವ ಸಂದರ್ಭದಲ್ಲಿ ತಳ್ಳಾಟ, ನೂಕಾಟ ಹಾಗೂ ವಾಗ್ವಾದಕ್ಕೆ ತಿರುಗಿ ದೊಡ್ಡ ಮಟ್ಟದ ಹೈಡ್ರಾಮಾಗೆ ಸಾಕ್ಷಿಯಾಯಿತು. ಈ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
​ ಇಮ್ರಾನ್-ಆಶಾ ಆತ್ಮಹತ್ಯೆ, ಸಾಮಾಜಿಕ ಜಾಲತಾಣದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ: 11 ಇನ್‌ಸ್ಟಾಗ್ರಾಮ್ ಖಾತೆ ಬಳಕೆದಾರರ ವಿರುದ್ಧ FIRಹಿರಿಯೂರು ತಾಲೂಕಿನ ಮೇಟಿಕುರ್ಕೆಯಲ್ಲಿ ಇಂದು ‘ಸಮಾನತೆಗಾಗಿ ಸಹಭೋಜನ’ ಕಾರ್ಯಕ್ರಮಕೊಡಗಿನ ದಸರಾ; ಕರಗೋತ್ಸವದಿಂದ ಜನೋತ್ಸವದವರೆಗೆ:….ಹನಿಟ್ರ್ಯಾಪ್ ಸಂಚು ಪ್ರಶ್ನಿಸಿದ್ದಕ್ಕೆ ಜೆಡಿಎಸ್ ಕಾರ್ಯಕರ್ತರ ಮೇಲೆ ಸರ್ಕಾರದ ದೌರ್ಜನ್ಯ: ಕುಮಾರಸ್ವಾಮಿಜೆಡಿ(ಎಸ್) ಕಾರ್ಯಕರ್ತರ ಗುರಿ: ಪೊಲೀಸ್ ಕಮಿಷನರ್ ಕಚೇರಿ ಮುಂದೆ ಎಚ್.ಡಿ ಕುಮಾರಸ್ವಾಮಿ ಪ್ರತಿಭಟನೆಗ್ರಾಮೀಣ, ನಗರ ಸ್ಥಳೀಯ ಸಂಸ್ಥೆಗಳಿಗೂ ಜಿಎಸ್‌ಟಿ ಪಾಲು: ಪ್ರಸ್ತಾವನೆ ಸಲ್ಲಿಸಲು ಸಿಎಂ ನಿರ್ಧಾರಅಮೆರಿಕದ ಹಿಂದೂ ದೇವಾಲಯದ ಮೇಲೆ ಸಾಮೂಹಿಕ ಗುಂಡಿನ ದಾಳಿಗೆ ಸಂಚು: 19 ವರ್ಷದ ಯುವಕ ಬಂಧನಧಾರ್ಮಿಕ ಮತಾಂತರಕ್ಕೆ ಸಿಗಲ್ಲ ಜಾತಿ ಮೀಸಲಾತಿ: ಸುಪ್ರೀಂ ಕೋರ್ಟ್ಹಾಲಿವುಡ್ ಗಾಯಕಿ ಮೇರಿ ಮಿಲ್‌ಬೆನ್ ಸ್ಫೋಟಕ ಆರೋಪ: ಭಾರತದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳಿಗೆ ಅಮೆರಿಕದಿಂದ ಹಣಕಾಸು ನೆರವು!ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆಗೆ ಹಾಲಿವುಡ್ ಗಾಯಕಿ ಮೇರಿ ಮಿಲ್ಬೆನ್ ಎಚ್ಚರಿಕೆ