Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಬಾಲಕಿಯರ ವೃತ್ತಿಪರ ಕಾಲೇಜು ವಿದ್ಯಾರ್ಥಿನಿಯರಿಗೆ ಬುದ್ದನ ಕಂಚಿನ ವಿಗ್ರಹಗಳ ವಿತರಣೆ

ಚಂದ್ರವಳ್ಳಿ ನ್ಯೂಸ್, ​ಚಿತ್ರದುರ್ಗ :
ಅಹಿಂಸಾ ವಾದಿ ಬುದ್ದನ ತತ್ವಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಂಡರೆ ಸಮಾನತೆ ಎನ್ನುವುದು ತನ್ನಷ್ಟಕ್ಕೆ ತಾನೆ ಸಿಗುತ್ತದೆಂದು ಆಂಗ್ಲ ಭಾಷಾ  ಉಪನ್ಯಾಸಕ ಪ್ರೊ.ಡಿ.ಹೆಚ್.ನಟರಾಜ ತಿಳಿಸಿದರು.

ರಾಜ್ಯದ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ರವರ ೭೫ ನೇ ಜನ್ಮದಿನದ ಅಂಗವಾಗಿ ಸಮಾಜ ಕಲ್ಯಾಣ ಇಲಾಖೆಯ ಡಾ.ಬಿ.ಆರ್. ಅಂಬೇಡ್ಕರ್ ಬಾಲಕಿಯರ ವೃತ್ತಿಪರ ಕಾಲೇಜು ವಿದ್ಯಾರ್ಥಿನಿಲಯದಲ್ಲಿ ಬುದ್ದನ ಕಂಚಿನ ವಿಗ್ರಹಗಳ ವಿತರಣಾ ಸಮಾರಂಭದಲ್ಲಿ ಭಾಗವಹಿಸಿ ಬುದ್ದನ ಸಂದೇಶ ಕುರಿತು ಉಪನ್ಯಾಸ ನೀಡಿದರು.

Advertisement

ಹುಟ್ಟುಹಬ್ಬವನ್ನು ಎಲ್ಲರೂ ವೈಭವೋಪೇತವಾಗಿ ಆಚರಿಸಿಕೊಳ್ಳುವ ಇಂದಿನ ಕಾಲಘಟ್ಟದಲ್ಲಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ರವರು ರಾಜ್ಯಾದ್ಯಂತ ೭೫ ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳಿಗೆ ಬುದ್ದನ ಹಿತ್ತಾಳೆ ವಿಗ್ರಹ ವಿತರಿಸುತ್ತಿರುವುದು ಹೆಮ್ಮೆಯ ಸಂಗತಿ. ಸಚಿವರಾದಾಗಿನಿಂದಲೂ ನಾಡಿನ ಅಭಿವೃದ್ದಿಗೆ ಶ್ರಮಿಸುತ್ತಿದ್ದಾರೆ. ಎಲ್ಲೆಡೆ ಕ್ರೌರ್ಯ, ಮತ್ಸರ, ಅಸೂಯೆ, ದ್ವೇಷವನ್ನು ಕಾಣುತ್ತಿರುವ ಈ ಸಂದರ್ಭದಲ್ಲಿ ಬುದ್ದನ ತತ್ವ, ಸಿದ್ದಾಂತ, ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕಿದೆ ಎಂದು ಹೇಳಿದರು.

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ರವರು ಶಿಕ್ಷಣ, ಸಂಘಟನೆ, ಹೋರಾಟಕ್ಕೆ ಒತ್ತು ಕೊಟ್ಟವರು. ಸಂವಿಧಾನದಲ್ಲಿ ಪ್ರತಿಯೊಬ್ಬರಿಗೂ ಸಮಾತನೆಯನ್ನು ನೀಡಿದ್ದಾರೆ. ಬುದ್ದ ಹಾಗೂ ಅಂಬೇಡ್ಕರ್‌ರವರ ಆಶಯಗಳು ಪ್ರಸ್ತುತ ಸಮಾಜಕ್ಕೆ ಮುಖ್ಯ. ಚಿಕ್ಕಂದಿನಿಂದಲೂ ಶೋಷಣೆ, ಅಸ್ಪೃಶ್ಯತೆ, ಅವಮಾನ ಅನುಭವಿಸಿದ ಅಂಬೇಡ್ಕರ್‌ರವರು ಹಿಂದೂ ಧರ್ಮದಲ್ಲಿ ಹುಟ್ಟಿ. ಹಿಂದೂ ಧರ್ಮದಲ್ಲಿಯೇ ಸಾಯಲಾರೆ ಎಂದು ಭೌದ್ದ ಧರ್ಮಕ್ಕೆ ಸೇರ್ಪಡೆಗೊಂಡರು ಎಂದರು.

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜಿ.ಹೆಚ್.ಮೋಹನ್ ಮಾತನಾಡಿ ಅಹಿಂಸೆಯ ಸಂದೇಶವನ್ನು ಸಮಾಜಕ್ಕೆ ಸಾರಿರುವ ಬುದ್ದನ ಆದರ್ಶ, ತತ್ವ, ಸಿದ್ದಾಂತಗಳನ್ನು ಎಲ್ಲರೂ ಜೀವನದಲ್ಲಿ ಅಳವಡಿಸಿಕೊಂಡಾಗ ಅಶಾಂತಿ ಎನ್ನುವುದೇ ಇರುವುದಿಲ್ಲ. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ರವರ ಆಶಯದಂತೆ ಶಿಕ್ಷಣವಂತರಾದಾಗ ನಿಜವಾಗಿಯೂ ಅಂಬೇಡ್ಕರ್‌ರವರ ಮೌಲ್ಯಗಳಿಗೆ ನಿಜವಾದ ಅರ್ಥ ಸಿಗುತ್ತದೆ ಎಂದು ನುಡಿದರು.

ಉಪ ವಿಭಾಗಾಧಿಕಾರಿ ಡಾ.ಕೆ.ಜೆ.ಕಾಂತರಾಜ್ ಮಾತನಾಡಿ ಹಾಸ್ಟೆಲ್ ವಿದ್ಯಾರ್ಥಿಗಳು ಬುದ್ದ ಹಾಗೂ ಅಂಬೇಡ್ಕರ್‌ರವರ ವಿಚಾರಗಳನ್ನು ತಿಳಿದುಕೊಳ್ಳಬೇಕು. ಗೌತಮ ಬುದ್ದನ ಅಹಿಂಸಾ ಮಾರ್ಗ ಇಂದಿನ ಸಮಾಜಕ್ಕೆ ಬೇಕಾಗಿದೆ. ಅದೇ ರೀತಿ ಡಾ.ಬಿ.ಆರ್.ಅಂಬೇಡ್ಕರ್‌ರವರ ಸಂವಿಧಾನದ ಮೌಲ್ಯಗಳು ನಿಮ್ಮ ಜೀವನದಲ್ಲಿ ಅಳವಡಿಕೆಯಾಗಬೇಕೆಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಮಲ್ಲಿಕಾರ್ಜುನ್, ಸಹಾಯಕ ನಿರ್ದೇಶಕ ಓ.ಪರಮೇಶ್ವರಪ್ಪ, ಬಿ.ಎಸ್.ಎನ್.ಎಲ್. ನಿವೃತ್ತ ವಿಭಾಗೀಯ ಇಂಜಿನಿಯರ್ ಬಿ.ಎ.ಪರಮೇಶ್ವರಪ್ಪ, ಬುದ್ದ ಯುವ ಪಡೆ ಅಧ್ಯಕ್ಷ ಡಿ.ಗೌತಮ್, ನಿವೃತ್ತ ಶಿಕ್ಷಕ ವೈ.ತಿಪ್ಪೇಸ್ವಾಮಿ, ವಕೀಲ ಸಂತೋಷ್, ವಿಶ್ವೇಶ್ವರಯ್ಯ, ನಿಂಗರಾಜು ಬಿವಿಕೆಎಸ್, ಕರಡಿ ಮಂಜುನಾಥ್, ಮಂಜುಳಮ್ಮ, ಕೆ.ದೇವರಾಜು, ಹೆಚ್.ಸಿ.ನಿರಂಜನಮೂರ್ತಿ, ಮೂರು ವಿದ್ಯಾರ್ಥಿನಿಲಯಗಳ ವಿದ್ಯಾರ್ಥಿನಿಯರು, ಕಚೇರಿ ಸಿಬ್ಬಂದಿ, ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ನಿಲಯ ಪಾಲಕರುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಖಾಸಗಿ ವಿವಿಗಳು ಲಾಭಕೋರ ವ್ಯಾಪಾರಿ ಸಂಸ್ಥೆಗಳಲ್ಲ: ಸುಪ್ರೀಂ ಕೋರ್ಟ್ ಖಡಕ್ ಎಚ್ಚರಿಕೆ ಪಿಎಸ್‌ಐಗೆ ಕಪಾಳಮೋಕ್ಷ: ಎಸ್‌ಐ ಸವಿತಾ ಪಾಟೀಲ್ ಬಳಿ ವಿಡಿಯೋ ಮೂಲಕ ಕ್ಷಮೆ ಕೋರಿದ ಶಾಸಕ ಸುರೇಶ್ ಗೌಡ ಪುತ್ರಿ ಐಶ್ವರ್ಯಾ ಗೌಡಸರ್ಕಾರಿ ಬಸ್ ಗ್ಲಾಸ್ ಒಡೆದು ಕರ್ತವ್ಯಕ್ಕೆ ಅಡ್ಡಿ; 15 ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ಕಾಡು ಹಂದಿ ಬೇಟೆ: ವನ್ಯಜೀವಿ ಕಾಯ್ದೆಯಡಿ ಪೊಲೀಸರೇ ನೇರ ದೂರು ದಾಖಲಿಸುವುದು ಕಾನೂನುಬಾಹಿರ-ಹೈಕೋರ್ಟ್ಬೆಳ್ಳಂಬೆಳಗ್ಗೆ ಲೋಕಾಯುಕ್ತ ಕದನ: 8 ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ200 ರೂ. ಆಸೆಗೆ ಬಿದ್ದು 9.30 ಲಕ್ಷ ರೂ. ಕಳೆದುಕೊಂಡ ಯುವತಿ: 'ವರ್ಕ್ ಫ್ರಮ್ ಹೋಮ್' ಸೈಬರ್ ವಂಚನೆ ಬಯಲುಸಾಮಾನ್ಯ ಜನರಿಗೆ ಬೆಲೆ ಏರಿಕೆ ಬಿಸಿ: ದಿಢೀರ್ ಹೆಚ್ಚಾದ ಅಕ್ಕಿ ದರ, ಒಂದೇ ತಿಂಗಳಲ್ಲಿ ಎರಡನೇ ಬಾರಿ ಏರಿಕೆಉತ್ತರ ಪ್ರದೇಶ, ಉತ್ತರಾಖಂಡ ರಾಜ್ಯಸಭಾ ಚುನಾವಣೆ ಹಾಗೂ ಬಂಗಾಳ ಉಪಚುನಾವಣೆ ಘೋಷಣೆ ಸಚಿವ ಶಿವಲಿಂಗೇಗೌಡರ ವಿವಾದಾತ್ಮಕ ಹೇಳಿಕೆ: ಲೋಕಾಯುಕ್ತಕ್ಕೆ ದೂರು ದಾಖಲು, ರಾಜೀನಾಮೆಗೆ ಆಗ್ರಹಬೆಂಗಳೂರು ವಿಮಾನ ನಿಲ್ದಾಣದಲ್ಲಿ 28 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಹಾಗೂ ಚಿನ್ನ ವಶ, 6 ಜನರ ಬಂಧನ