Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ರಾಹುಲ್ ಗಾಂಧಿ ಅವರೇ ನೀವಾದರೂ ಉತ್ತರಿಸುತ್ತೀರಾ?

ಚಂದ್ರವಳ್ಳಿ ನ್ಯೂಸ್, ಬೆಂಗಳೂರು :
ಮಾನ್ಯರಾಹುಲ್ ಗಾಂಧಿ ಅವರೇ, ಕ್ರೆಡಿಟ್‌ಗಾಗಿ ಹಪಾಹಪಿಸುವ ನಿಮ್ಮ ಪಕ್ಷದ ನಾಯಕರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಅವರು ಈಗ ನಿಮ್ಮನ್ನು ಭೇಟಿ ಮಾಡಲು ಬರುತ್ತಿದ್ದಾರೆ. ಆದರೆ ಬೆಂಗಳೂರಿನಲ್ಲಿ ಕಾಂಗ್ರೆಸ್ ಸರ್ಕಾರಿ ಪ್ರಾಯೋಜಿತ ಕಾಲ್ತುಳಿತದ ಕುರಿತು ನಾವು ಅವರಿಗೆ ಪ್ರಶ್ನೆಗಳನ್ನು ಕೇಳಿದ್ದೇವೆ ಆದರೆ ಅವರಲ್ಲಿ ಉತ್ತರವೇ ಇಲ್ಲ. ಅದಕ್ಕೆ ನೀವಾದರೂ ಉತ್ತರಿಸುತ್ತೀರಾ? ಎಂದು ಬಿಜೆಪಿ ಪ್ರಶ್ನಿಸಿದೆ.

  1. ಕರ್ನಾಟಕದಲ್ಲಿ 11 ಯುವಜನರ ಅಮೂಲ್ಯ ಜೀವವನ್ನು ಬಲಿತೆಗೆದುಕೊಂಡ, ನಿಮ್ಮ ಕಾಂಗ್ರೆಸ್ ಸರ್ಕಾರ ತಪ್ಪಿಸಬಹುದಾಗಿದ್ದ ಭೀಕರ ದುರಂತಕ್ಕೆ ಯಾರನ್ನು ಹೊಣೆಗಾರರನ್ನಾಗಿ ಮಾಡುತ್ತೀರಿ?

  2. ವಿಧಾನಸೌಧದಲ್ಲಿ ಇಂತಹ ಕಾರ್ಯಕ್ರಮವನ್ನು ಆಯೋಜಿಸುವ ನಿರ್ಧಾರವನ್ನು ಕಾಂಗ್ರೆಸ್ ಸರ್ಕಾರದಲ್ಲಿ ಯಾರು ತೆಗೆದುಕೊಂಡರು?


  3. ಪೊಲೀಸ್ ಇಲಾಖೆ ಈ ಕಾರ್ಯಕ್ರಮಕ್ಕೆ ಅಧಿಕೃತ ಅನುಮತಿ ನಿರಾಕರಿಸಿದ್ದರೂ ಕೂಡ ಉನ್ನತ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿದ್ದು ಏಕೆ? ಈ ಅವ್ಯವಸ್ಥೆಗೆ ನಿಜವಾಗಿ ಹೊಣೆಗಾರರಾದವರು ಯಾವ ಕ್ರಮವೂ ಎದುರಿಸದೇ ರಾಜಾರೋಷವಾಗಿ ಓಡಾಡಿಕೊಂಡಿರುವುದೇಕೆ?


  4. ಯಾವುದೇ ಸಮರ್ಪಕ ಸುರಕ್ಷತೆ, ಜನಸಂಚಾರ ನಿಯಂತ್ರಣ ಅಥವಾ ವೈದ್ಯಕೀಯ ವ್ಯವಸ್ಥೆಯ ಸಿದ್ಧತೆ ಇಲ್ಲದಿದ್ದರೂ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಲಕ್ಷಾಂತರ ಜನರನ್ನು ಸಾರ್ವಜನಿಕವಾಗಿ ಆಹ್ವಾನಿಸಲು ಮುಂದಾಗಿದ್ದೇಕೆ?


  5. ಕೊನೆಯದಾಗಿ, 11 ಅಮಾಯಕರು ತಮ್ಮ ಪ್ರಾಣ ಕಳೆದುಕೊಂಡ ನಂತರವೂ, ನಿಮ್ಮ ನಾಯಕರು, ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳೂ ಸೇರಿ ಹೋಟೆಲಿಗೆ ಹೋಗಿ ಮಸಾಲೆದೋಸೆ, ಬಾದಾಮ್ ಹಲ್ವಾ ತಿನ್ನಲು ಹೇಗೆ ಮನಸ್ಸು ಬಂತು?


  6. ನಾವು ನಿಮ್ಮಿಂದ ಉತ್ತರವನ್ನು ನಿರೀಕ್ಷಿಸಬಹುದೇ ಅಥವಾ ನೀವು ಪ್ರತಿ ಬಾರಿಯಂತೆ ಈ ಬಾರಿ ಕೂಡ ಜವಾಬ್ದಾರಿಯಿಂದ ನುಣುಚಿಕೊಂಡು ಓಡಿಹೋಗುತ್ತೀರಾ? ಹೆದರಬೇಡಿ ಉತ್ತರಿಸಿ ಎಂದು ಬಿಜೆಪಿ ತಾಕೀತು ಮಾಡಿದೆ.


 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು