Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Crime News

ಪತ್ನಿಗೆ ಇಂಜೆಕ್ಷನ್​ ನೀಡಿ ಕೊಂದ ವೈದ್ಯ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವೈದ್ಯನೊಬ್ಬ ತನ್ನ ಪತ್ನಿಗೆ ಇಂಜೆಕ್ಷನ್​ ನೀಡಿ ಕೊಂದು, ಇದೊಂದು ಸ್ವಾಭಾವಿಕ ಸಾವು ಎಂಬಂತೆ ಕುಟುಂಬಸ್ಥರನ್ನು ನಂಬಿಸಿದ್ದ ಆರೋಪಿ ಪೊಲೀಸರ ಅತಿಥಿಯಾಗಿ ಜೈಲು ಕಂಬಿ ಎಣಿಸುತ್ತಿದ್ದಾನೆ.


ಕೊಲೆ ನಡೆದ 6 ತಿಂಗಳ ನಂತರ ಸತ್ಯ ಹೊರಬಂದಿದ್ದು ಆರೋಪಿ ಡಾ. ಮಹೇಂದ್ರ ರೆಡ್ಡಿಯನ್ನು ಪೊಲೀಸರು ಬಂಧಿಸಿ ಹೆಚ್ಚಿನ ತನಿಖೆ ಮಾಡುತ್ತಿದ್ದಾರೆ.

ಏನಿದು ಪ್ರಕರಣ?
ವೈದ್ಯರಾದ ಡಾ.ಮಹೇಂದ್ರರೆಡ್ಡಿ ಮತ್ತು ಡಾ.ಕೃತಿಕಾರೆಡ್ಡಿ ಇವರ ವಿವಾಹ 2024ರ ಮೇ 26ರಂದು ನಡೆದಿತ್ತು.
ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಚರ್ಮರೋಗ ತಜ್ಞೆ ಡಾ.ಕೃತಿಕಾರೆಡ್ಡಿ ಅವರು
ಅಜೀರ್ಣ, ಗ್ಯಾಸ್ಟ್ರಿಕ್, ಲೋಶುಗರ್ ಸಮಸ್ಯೆಯಿಂದ ಬಳಲುತ್ತಿದ್ದರು. ಅದೇ ಆಸ್ಪತ್ರೆಯ ಜನರಲ್ ಸರ್ಜನ್ ಡಾ.ಮಹೇಂದ್ರರೆಡ್ಡಿಗೆ ಮದುವೆ ಮಾಡಿಕೊಟ್ಟಿದ್ದರು.


ಆದರೆ ಕುಟುಂಬಸ್ಥರು ಡಾ.ಕೃತಿಕಾರೆಡ್ಡಿಗಿದ್ದ ಆರೋಗ್ಯ ಸಮಸ್ಯೆ ಮುಚ್ಚಿಟ್ಟು ಮದುವೆ ಮಾಡಿದ್ದರು. ಹೆಂಡತಿಯ ಆರೋಗ್ಯ ಸಮಸ್ಯೆ ವಿಷಯ ಪತಿಗೆ ಮದುವೆ ನಂತರ ಗೊತ್ತಾಗಿತ್ತು.


ಪ್ರತಿದಿನ ವಾಂತಿ, ಇತರೆ ಸಮಸ್ಯೆಯಿಂದ ಬಳಲುತ್ತಿದ್ದ ಪತ್ನಿಯನ್ನು ಕೊಲ್ಲಲು ಮಹೇಂದ್ರರೆಡ್ಡಿ ಪ್ಲ್ಯಾನ್​ ಮಾಡಿದ್ದ. ಹುಷಾರಿಲ್ಲದೆ ತವರು ಮನೆಯಲ್ಲಿದ್ದ ವೈದ್ಯೆ ಡಾ.ಕೃತಿಕಾರೆಡ್ಡಿ ಮಲಗಿದ್ದ ವೇಳೆ ಅಲ್ಲಿಗೆ ಬಂದಿದ್ದ ಈತ ಆಕೆಗೆ ಐವಿ ಇಂಜೆಕ್ಷನ್ ಮೂಲಕ ಎರಡು ದಿನ ಒಂದಷ್ಟು ಔಷಧ ನೀಡಿದ್ದ. ಬಳಿಕ ಜ್ಞಾನ ತಪ್ಪಿದ್ದ ಕೃತಿಕಾರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅದಾಗಲೇ ಅವರು ಸಾವನ್ನಪ್ಪಿರುವ ಬಗ್ಗೆ ವೈದ್ಯರು ತಿಳಿಸಿದ್ದರು.


ಆಸ್ಪತ್ರೆಯಿಂದ ವೈದ್ಯೆಯ ಸಾವಿನ ಬಗ್ಗೆ ಡೆತ್ ಮೆಮೊ ಬಂದ ಬೆನ್ನಲ್ಲೇ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದರು. ಈ ಬಗ್ಗೆ ದೂರು ನೀಡುವಂತೆ ತಿಳಿಸಿದ್ದರು. ಕುಟುಂಬಸ್ಥರ ದೂರಿನ ಅನ್ವಯ ಯುಡಿಆರ್ ದಾಖಲು ಮಾಡಿದ್ದ ಮಾರತಹಳ್ಳಿ ಪೊಲೀಸರು, ಮೃತ ದೇಹದ ಸ್ಯಾಂಪಲ್ ಪಡೆದು FSLಗೆ ಕಳುಹಿಸಿದ್ದರು.


ಈಗ ಅದರ ವರದಿ ಕೈಸೇರಿದ್ದು, ಕೃತಿಕಾ ಸಾವಿಗೆ ದೇಹದಲ್ಲಿ ಕಂಡು ಬಂದಿರುವ ಅನಸ್ತೇಶಿಯಾ ಅಂಶ ಕಾರಣ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಹೀಗಾಗಿ ಯುಡಿಆರ್​ ಆಗಿದ್ದ ಪ್ರಕರಣವನ್ನು ಕೊಲೆ ಕೇಸ್​ ಆಗಿ ಪರಿವರ್ತಿಸಿದ ಪೊಲೀಸರು ಆರೋಪಿ ಡಾ. ಮಹೇಂದ್ರ ರೆಡ್ಡಿಯನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.

 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು