ಚಂದ್ರವಳ್ಳಿ ನ್ಯೂಸ್, ಉಡುಪಿ:
ಬೆಂಗಳೂರು ಕನ್ನಡ ಜಾನಪದ ಪರಿಷತ್ ನ ಕರಾವಳಿ ವಿಭಾಗೀಯ ಸಂಚಾಲಕರಾಗಿ ಡಾ. ಭಾರತಿ ಮರವಂತೆ ಅವರು ನೂತನವಾಗಿ ಆಯ್ಕೆಯಾಗಿದ್ದಾರೆ. ಈ ಕುರಿತು ಪರಿಷತ್ತಿನ ರಾಜ್ಯಾಧ್ಯಕ್ಷರಾದ ಡಾ. ಎಸ್. ಬಾಲಾಜಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
ಡಾ. ಭಾರತಿ ಮರವಂತೆ ಅವರು ಖ್ಯಾತ ರಂಗೋಲಿ ಕಲಾವಿದೆ, ಜಾನಪದ ಸಂಶೋಧಕಿ ಹಾಗೂ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ. ಪ್ರಸ್ತುತ ಇವರು ಡಾ. ಶಿವರಾಮ ಕಾರಂತ ಟ್ರಸ್ಟ್ಸದಸ್ಯೆಯಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಅವರ ಸಾಂಸ್ಕೃತಿಕ ಹಾಗೂ ಜಾನಪದ ಕ್ಷೇತ್ರದ ಸಾಧನೆಯನ್ನು ಗುರುತಿಸಿ ಈ ಜವಾಬ್ದಾರಿಯನ್ನು ನೀಡಲಾಗಿದೆ.




