Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Health & Fitness

ಎಂಬಿಬಿಎಸ್ ಮೊದಲ ವೃತ್ತಿಪರ ವರ್ಷದ ಪರೀಕ್ಷೆಗೆ ಮತ್ತೊಂದು ಅವಕಾಶ ನೀಡಿ-ಡಾ.ಪ್ರಭಾ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಎಂ.ಬಿ.ಬಿ.ಎಸ್ ಮೊದಲ ವೃತ್ತಿಪರ ವರ್ಷದ ಪರೀಕ್ಷೆಗೆ ಮತ್ತೊಂದು ಪ್ರಯತ್ನ, ಮರುಮೌಲ್ಯಮಾಪನಕ್ಕೆ ಅವಕಾಶ ಒದಗಿಸಬೇಕೆಂದು ನವದೆಹಲಿಯಲ್ಲಿ ಕೇಂದ್ರ ಆರೋಗ್ಯ ಸಚಿವರಾದ ಜಗತ್ ಪ್ರಕಾಶ್ ನಡ್ಡಾ ಅವರಿಗೆ ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ದಾವಣಗೆರೆ ಸಂಸದೆ ಡಾ,ಪ್ರಭಾ ಮಲ್ಲಿಕಾರ್ಜುನ್ ಮನವಿ ಸಲ್ಲಿಸಿ ಒತ್ತಾಯಿಸಿದರು.

ಪ್ರಸ್ತುತ ನಿಯಮದ ಪ್ರಕಾರ, ಎಂ.ಬಿ.ಬಿ.ಎಸ್ ಮೊದಲ ವರ್ಷದ ಪರೀಕ್ಷೆಯಲ್ಲಿ ಉತ್ತೀರ್ಣಗೊಳ್ಳಲು ವಿದ್ಯಾರ್ಥಿಗಳಿಗೆ ಗರಿಷ್ಠ ನಾಲ್ಕು ಪ್ರಯತ್ನಗಳು ಮಾತ್ರ ಸಿಗುತ್ತವೆ. ನಾಲ್ಕು ಪ್ರಯತ್ನಗಳಲ್ಲಿಯೂ ಉತ್ತೀರ್ಣರಾಗದಿದ್ದರೆ, ಅವರು ವೈದ್ಯಕೀಯ ವಿದ್ಯಾಭ್ಯಾಸವನ್ನು ಮುಂದುವರಿಸಲು ಅವಕಾಶವಿಲ್ಲ.

 ಈ ನಿಯಮದ ಕಾರಣದಿಂದ ಕರ್ನಾಟಕದಲ್ಲಿ 275 ಕ್ಕೂ ಹೆಚ್ಚು ವೈದ್ಯಕೀಯ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಲಿದೆ.

 ವಿಶೇಷವಾಗಿ ಕೋವಿಡ್–19 ಕಾಲದಲ್ಲಿ ಉಂಟಾದ ಶೈಕ್ಷಣಿಕ ವ್ಯತ್ಯಯಗಳಿಂದಾಗಿ ವಿದ್ಯಾರ್ಥಿಗಳು ಸರಿಯಾಗಿ ಓದಲು, ಪರೀಕ್ಷೆ ಬರೆಯಲು ಸಾಧ್ಯವಾಗಿಲ್ಲ. ಆದ್ದರಿಂದ ನಾಲ್ಕು ಪ್ರಯತ್ನಗಳ ನಂತರ ಅವರನ್ನು ಅನರ್ಹಗೊಳಿಸುವುದು ಅನ್ಯಾಯಕರ ಹಾಗೂ ಅಮಾನವೀಯವಾಗಿದೆ ಎಂದು ಪ್ರಭಾ ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಈ ನಿಯಮವನ್ನು ಮರುಪರಿಶೀಲಿಸಬೇಕೆಂದು ಅನೇಕ ವಿದ್ಯಾರ್ಥಿಗಳು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಈ ವಿಚಾರದಲ್ಲಿ ಕರ್ನಾಟಕದ ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ವಿಶ್ವವಿದ್ಯಾಲಯದ ಪ್ರೊಚಾನ್ಸೆಲರ್ ಕೂಡ ರಾಷ್ಟ್ರೀಯ ವೈದ್ಯಕೀಯ ಆಯೋಗಕ್ಕೆ ಪತ್ರ ಬರೆದಿದ್ದಾರೆ ಎಂದು ಅವರು ಸಚಿವರಲ್ಲಿ ಗಮನ ಸೆಳೆದರು.
ಈ ಸಮಸ್ಯೆಗೆ ಪರಿಹಾರ ಕೋರಿ ಅನೇಕ ವಿದ್ಯಾರ್ಥಿಗಳು ಈಗಾಗಲೇ  ನ್ಯಾಯಾಲಯಗಳನ್ನು ಸಂಪರ್ಕಿಸಿ ಹೆಚ್ಚುವರಿ ಪ್ರಯತ್ನಗಳಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಇದರ ಜೊತೆಗೆ
, ಕರ್ನಾಟಕ ಸರ್ಕಾರದ ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ವಿಶ್ವವಿದ್ಯಾಲಯದ ಪ್ರೊಚಾನ್ಸೆಲರ್ ಕೂಡ ಈ ವಿಷಯಕ್ಕೆ ಸಂಬಂಧಿಸಿ ರಾಷ್ಟ್ರೀಯ ವೈದ್ಯಕೀಯ ಆಯೋಗಕ್ಕೆ ಪತ್ರ ಬರೆದಿದ್ದಾರೆ.

ಕರ್ನಾಟಕ ಹೈಕೋರ್ಟ್  ಎನ್‌ಎಂಸಿ ಮಾರ್ಗಸೂಚಿಗಳ ಪ್ರಕಾರ ಸಂಪೂರ್ಣ ವಿಚಾರಣೆ ನಡೆಸಿದ ನಂತರ ಮರುಮೌಲ್ಯಮಾಪನ ಮಾಡಲು ಆದೇಶ ನೀಡಿದೆ. ಆದಾಗ್ಯೂ, ವಿಶ್ವವಿದ್ಯಾಲಯವು ಮರುಮೌಲ್ಯಮಾಪನವನ್ನು ನಿರಾಕರಿಸುತ್ತಿದೆ. ಆದ್ದರಿಂದ ಈ ಸಮಸ್ಯೆಯನ್ನು ಬಗೆಹರಿಸಿ ವಿದ್ಯಾರ್ಥಿಗಳಿಗೆ ನೆರವಾಗಬೇಕೆಂದು ಕೇಂದ್ರ ಸಚಿವರಿಗೆ ಸಂಸದೆ ಡಾ.ಪ್ರಭಾ ಅವರು ಮನವಿ ಸಲ್ಲಿಸಿ ಒತ್ತಾಯಿಸಿದರು.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಖಾಸಗಿ ವಿವಿಗಳು ಲಾಭಕೋರ ವ್ಯಾಪಾರಿ ಸಂಸ್ಥೆಗಳಲ್ಲ: ಸುಪ್ರೀಂ ಕೋರ್ಟ್ ಖಡಕ್ ಎಚ್ಚರಿಕೆ ಪಿಎಸ್‌ಐಗೆ ಕಪಾಳಮೋಕ್ಷ: ಎಸ್‌ಐ ಸವಿತಾ ಪಾಟೀಲ್ ಬಳಿ ವಿಡಿಯೋ ಮೂಲಕ ಕ್ಷಮೆ ಕೋರಿದ ಶಾಸಕ ಸುರೇಶ್ ಗೌಡ ಪುತ್ರಿ ಐಶ್ವರ್ಯಾ ಗೌಡಸರ್ಕಾರಿ ಬಸ್ ಗ್ಲಾಸ್ ಒಡೆದು ಕರ್ತವ್ಯಕ್ಕೆ ಅಡ್ಡಿ; 15 ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ಕಾಡು ಹಂದಿ ಬೇಟೆ: ವನ್ಯಜೀವಿ ಕಾಯ್ದೆಯಡಿ ಪೊಲೀಸರೇ ನೇರ ದೂರು ದಾಖಲಿಸುವುದು ಕಾನೂನುಬಾಹಿರ-ಹೈಕೋರ್ಟ್ಬೆಳ್ಳಂಬೆಳಗ್ಗೆ ಲೋಕಾಯುಕ್ತ ಕದನ: 8 ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ200 ರೂ. ಆಸೆಗೆ ಬಿದ್ದು 9.30 ಲಕ್ಷ ರೂ. ಕಳೆದುಕೊಂಡ ಯುವತಿ: 'ವರ್ಕ್ ಫ್ರಮ್ ಹೋಮ್' ಸೈಬರ್ ವಂಚನೆ ಬಯಲುಸಾಮಾನ್ಯ ಜನರಿಗೆ ಬೆಲೆ ಏರಿಕೆ ಬಿಸಿ: ದಿಢೀರ್ ಹೆಚ್ಚಾದ ಅಕ್ಕಿ ದರ, ಒಂದೇ ತಿಂಗಳಲ್ಲಿ ಎರಡನೇ ಬಾರಿ ಏರಿಕೆಉತ್ತರ ಪ್ರದೇಶ, ಉತ್ತರಾಖಂಡ ರಾಜ್ಯಸಭಾ ಚುನಾವಣೆ ಹಾಗೂ ಬಂಗಾಳ ಉಪಚುನಾವಣೆ ಘೋಷಣೆ ಸಚಿವ ಶಿವಲಿಂಗೇಗೌಡರ ವಿವಾದಾತ್ಮಕ ಹೇಳಿಕೆ: ಲೋಕಾಯುಕ್ತಕ್ಕೆ ದೂರು ದಾಖಲು, ರಾಜೀನಾಮೆಗೆ ಆಗ್ರಹಬೆಂಗಳೂರು ವಿಮಾನ ನಿಲ್ದಾಣದಲ್ಲಿ 28 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಹಾಗೂ ಚಿನ್ನ ವಶ, 6 ಜನರ ಬಂಧನ