Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Health & Fitness

ಹಕ್ಕಿ ಜ್ವರ: ಚಿತ್ರದುರ್ಗ ಜಿಲ್ಲೆಯ ಜನತೆ ಮುನ್ನೆಚ್ಚರಿಕೆ ವಹಿಸಿ-ಡಾ.ರೇಣುಪ್ರಸಾದ್

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕೋಳಿ ಮಾಂಸ ಅಥವಾ ಕೋಳಿ ಮೊಟ್ಟೆ ಸೇವಿಸುವುದರಿಂದ ಹಕ್ಕಿ ಜ್ವರ ಮನುಷ್ಯರಲ್ಲಿ ಬರುವುದಿಲ್ಲ. ಆದರೆ ಸೋಂಕು ತಗುಲಿದ ಕೋಳಿಯ ಮಾಂಸ ಚೆನ್ನಾಗಿ ಬೇಯಿಸದೆ ಹಾಗೂ ಅವುಗಳ ಹಸಿ ಮೊಟ್ಟೆಯ ಸೇವನೆಯಿಂದ ರೋಗ ತಗಲುವ ಸಾಧ್ಯತೆ ಇದೆ ಎಂದು ಜಿಲ್ಲಾ ಆರೋಗ್ಯ ಮತ್ತುಕುಟುಂಬ ಕಲ್ಯಾಣಾಧಿಕಾರಿ ಡಾ.ರೇಣು ಪ್ರಸಾದ್ ತಿಳಿಸಿದ್ದಾರೆ.

ಕೋಳಿ ಮಾಂಸ ಮತ್ತು ಮೊಟ್ಟೆಯನ್ನು 70ಡಿಗ್ರಿ ಸೆಂಟಿಗ್ರೇಡ್ಗೂ ಅಧಿಕ ಉಷ್ಣಾಂಶದಲ್ಲಿ ಬೇಯಿಸಿದ ನಂತರವೇ ಸೇವಿಸಬೇಕು ಎಂದು ಅವರು ಸೂಚಿಸಿದ್ದಾರೆ.

ಅಡುಗೆಗಾಗಿ ಕೋಳಿ ಸಿದ್ದಪಡಿಸಿದ ನಂತರ ಕೈಗಳನ್ನು ನಂಜು ನಾಶಕದಿಂದ ಸ್ವಚ್ಚವಾಗಿ ತೊಳೆದುಕೊಳ್ಳಬೇಕು. ಸೋಂಕಿತ ಹಸಿಮೊಟ್ಟೆ ಸೇವಿಸಬಾರದು. ಹಕ್ಕಿ ಜ್ವರ ಸಾಂಕ್ರಮಿಕರೋಗ. ಮುನ್ನೆಚ್ಚರಿಕೆಯಿಂದ ತಡೆಯಬಹುದಾದ ಕಾಯಿಲೆ ಆದ್ದರಿಂದ ಕಾಯಿಲೆಯ ಲಕ್ಷಣಗಳು ಕೋಳಿಗಳಲ್ಲಿ ಕಾಣಿಸಿಕೊಂಡ ಕೂಡಲೇ ಹತ್ತಿರದ ಮಾಹಿತಿಕೇಂದ್ರಅಥವಾ ಪಶು ವೈದ್ಯಕೀಯ ಸಂಸ್ಥೆಗೆ ಮಾಹಿತಿ ನೀಡಬೇಕು.ಹಕ್ಕಿ ಜ್ವರದ ಲಕ್ಷಣಗಳು ಮನುಷ್ಯರಲ್ಲಿ ಕಾಣಿಸಿಕೊಂಡರೆ ತಡಮಾಡದೇ ವೈದ್ಯರನ್ನು ಸಂಪರ್ಕಿಸಿ ಸೂಕ್ತ ಚಿಕಿತ್ಸೆ ಪಡೆಯಬೇಕುಎಂದುಅವರು ಹೇಳಿದ್ದಾರೆ.

ಶಂಕಿತ ಹಕ್ಕಿಜ್ವರ ಪೀಡಿತ ಕೋಳಿಗಳು, ಹಕ್ಕಿಗಳು ಹಾಗೂ ಬಾತುಕೋಳಿಗಳ ಸಂಪರ್ಕಕ್ಕೆ ಬರದಂತೆಎಚ್ಚರ ವಹಿಸಬೇಕು. ಬೇರೆಯವರ ಮನೆಗೆ ಭೇಟಿ ನೀಡಿದಾಗ ಶಂಕಿತ ಹಕ್ಕಿಜ್ವರ ಪೀಡಿತ ಕೋಳಿ ಅಥವಾ ಹಕ್ಕಿಗಳನ್ನು ಸ್ಪರ್ಶಿಸಬಾರದು. ಹಕ್ಕಿಜ್ವರ ಶಂಕಿತಅಥವಾ ಪೀಡಿತ ಕೋಳಿ ಫಾರಂಗಳಿಗೆ ಭೇಟಿ ನೀಡಬಾರದು. ಹಕ್ಕಿಜ್ವರ ಹರಡಿರುವ ಫಾರಂನ ವಾತವರಣದ ಸಂಪರ್ಕಕ್ಕೆ ಬಂದಲ್ಲಿತಕ್ಷಣತಮ್ಮ ಕೈಕಾಲು ಮತ್ತು ಮುಖವನ್ನು ತೊಳೆದುಕೊಂಡು ಬಟ್ಟೆಯನ್ನು ಬದಲಾಯಿಸಿಕೊಳ್ಳುವುದು ಮತ್ತು ಮುಂದಿನ 4 ದಿನಗಳವರೆಗೆ ತಮ್ಮ ದೇಹದಲ್ಲಾಗುವ ಉಷ್ಣಾಂಶದಲ್ಲಾಗುವ ಬದಲಾವಣೆಗಳನ್ನು ಗಮನಿಸಬೇಕು. ಒಂದು ವೇಳೆ ಜ್ವರದ ಲಕ್ಷಣಗಳು ಕಾಣಿಸಿಕೊಂಡಲ್ಲಿ ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು. ಮಾತ್ರವಲ್ಲ, ಸೋಕಿರುವ ಪ್ರದೇಶಗಳಲ್ಲಿ ಯಾವುದೇ ವಸ್ತುವನ್ನು ಮುಟ್ಟಿದಾಗ ಯಾವಾಗಲೂ ಕೈಗಳನ್ನು ಸೋಪಿನಿಂದ ತೊಳೆಯಬೇಕು ಎಂದು ಅವರು ಸಲಹೆ ನೀಡಿದ್ದಾರೆ.

ರೋಗ ಪೀಡಿತ ಕೋಳಿ ಅಥವಾ ಹಕ್ಕಿಗಳ ಮಾಂಸವನ್ನು ಸರಿಯಾಗಿ ಬೇಯಿಸದೇ ತಿನ್ನುವುದರಿಂದ, ಸೋಂಕಿರುವ ಹಸಿ ಮೊಟ್ಟೆಯನ್ನು ಸೇವಿಸುವುದರಿಂದ ಹಾಗೂ ಕೋಳಿಗಳ ಹಿಕ್ಕೆಗಳು, ಮನುಷ್ಯರು ಕುಡಿಯುವ ನೀರಿನೊಂದಿಗೆ ಬೆರೆತು ಕಲುಷಿತಗೊಂಡಾಗ ಕಾಯಿಲೆ ಹರಡುತ್ತದೆ ಮತ್ತು ಕೆಲವು ಸಂದರ್ಭಗಳಲ್ಲಿ ಗಾಳಿಯ ಮೂಲಕವೂ ಮನುಷ್ಯರಿಗೆ ಹರಡುತ್ತದೆ. ಹಕ್ಕಿ ಜ್ವರದ ಲಕ್ಷಣಗಳು ಸಾಮಾನ್ಯವಾಗಿ ಎಚ್ಎನ್ 1 ಜ್ವರದ ಲಕ್ಷಣಗಳಂತೆಯೆ ಇರುತ್ತದೆ. ಜ್ವರ ಮತ್ತು ಕೆಮ್ಮು, ಶೀತ, ತಲೆನೂವು, ಗಂಟಲು ಕೆರೆತ, ನೆಗಡಿ, ಸ್ನಾಯುಗಳಲ್ಲಿ ನೋವು, ಆಯಾಸ ಕಾಣಿಸಿಕೊಳ್ಳುತ್ತದೆ. ಕೆಲವೊಮ್ಮೆ ವಾಂತಿ ಮತ್ತು ಭೇದಿಯೂ ಆಗಬಹುದು.ಉಸಿರಾಟದಲ್ಲಿ ತಂದರೆ ಕಾಸಿಕೊಳ್ಳಬಹುದು ಎಂದು ಅವರು ವಿವರಿಸಿದ್ದಾರೆ.

  ಹಕ್ಕಿಜ್ವರ ಎಚ್5 ಎನ್1 ವೈರಸ್ನಿಂದ ಹರಡುವ ರೋಗ. ಇದು ಟರ್ಕಿ ಕೋಳಿ, ಗಿನಿ ಕೋಳಿ, ಗೀಜಗ ಮುಂತಾದ ಹಕ್ಕಿಗಳಲ್ಲಿ ಕಾಣಿಸಿಕೊಳ್ಳುವ ಕಾಯಿಲೆ. ಇದೊಂದು ಸಾಂಕ್ರಾಮಿಕ ಕಾಯಿಲೆಯಾಗಿದ್ದು, ಸಾಮಾನ್ಯವಾಗಿ ಹಕ್ಕಿಗಳಿಂದ ಹಕ್ಕಿಗಳಿಗೆ ಹರಡುತ್ತದೆ. ಕೆಲವೊಂದು ರೋಗ ಪೀಡಿತ ಹಕ್ಕಿಗಳ ಸಂಪರ್ಕದಿಂದ ಮನುಷ್ಯರಲ್ಲೂ ಜ್ವರದ ಲಕ್ಷಣಗಳು ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರೇಣು ಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಖಾಸಗಿ ವಿವಿಗಳು ಲಾಭಕೋರ ವ್ಯಾಪಾರಿ ಸಂಸ್ಥೆಗಳಲ್ಲ: ಸುಪ್ರೀಂ ಕೋರ್ಟ್ ಖಡಕ್ ಎಚ್ಚರಿಕೆ ಪಿಎಸ್‌ಐಗೆ ಕಪಾಳಮೋಕ್ಷ: ಎಸ್‌ಐ ಸವಿತಾ ಪಾಟೀಲ್ ಬಳಿ ವಿಡಿಯೋ ಮೂಲಕ ಕ್ಷಮೆ ಕೋರಿದ ಶಾಸಕ ಸುರೇಶ್ ಗೌಡ ಪುತ್ರಿ ಐಶ್ವರ್ಯಾ ಗೌಡಸರ್ಕಾರಿ ಬಸ್ ಗ್ಲಾಸ್ ಒಡೆದು ಕರ್ತವ್ಯಕ್ಕೆ ಅಡ್ಡಿ; 15 ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ಕಾಡು ಹಂದಿ ಬೇಟೆ: ವನ್ಯಜೀವಿ ಕಾಯ್ದೆಯಡಿ ಪೊಲೀಸರೇ ನೇರ ದೂರು ದಾಖಲಿಸುವುದು ಕಾನೂನುಬಾಹಿರ-ಹೈಕೋರ್ಟ್ಬೆಳ್ಳಂಬೆಳಗ್ಗೆ ಲೋಕಾಯುಕ್ತ ಕದನ: 8 ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ200 ರೂ. ಆಸೆಗೆ ಬಿದ್ದು 9.30 ಲಕ್ಷ ರೂ. ಕಳೆದುಕೊಂಡ ಯುವತಿ: 'ವರ್ಕ್ ಫ್ರಮ್ ಹೋಮ್' ಸೈಬರ್ ವಂಚನೆ ಬಯಲುಸಾಮಾನ್ಯ ಜನರಿಗೆ ಬೆಲೆ ಏರಿಕೆ ಬಿಸಿ: ದಿಢೀರ್ ಹೆಚ್ಚಾದ ಅಕ್ಕಿ ದರ, ಒಂದೇ ತಿಂಗಳಲ್ಲಿ ಎರಡನೇ ಬಾರಿ ಏರಿಕೆಉತ್ತರ ಪ್ರದೇಶ, ಉತ್ತರಾಖಂಡ ರಾಜ್ಯಸಭಾ ಚುನಾವಣೆ ಹಾಗೂ ಬಂಗಾಳ ಉಪಚುನಾವಣೆ ಘೋಷಣೆ ಸಚಿವ ಶಿವಲಿಂಗೇಗೌಡರ ವಿವಾದಾತ್ಮಕ ಹೇಳಿಕೆ: ಲೋಕಾಯುಕ್ತಕ್ಕೆ ದೂರು ದಾಖಲು, ರಾಜೀನಾಮೆಗೆ ಆಗ್ರಹಬೆಂಗಳೂರು ವಿಮಾನ ನಿಲ್ದಾಣದಲ್ಲಿ 28 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಹಾಗೂ ಚಿನ್ನ ವಶ, 6 ಜನರ ಬಂಧನ