ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ಸರ್ಕಾರದ ನಿವೃತ್ತ ಕಾರ್ಯದರ್ಶಿ ಡಾ. ಕೆ. ಜೈಪ್ರಕಾಶ್ ಅವರನ್ನು ಮಾನ್ಯ ಮುಖ್ಯಮಂತ್ರಿಯವರ ತಾಂತ್ರಿಕ ಸಲಹೆಗಾರರನ್ನಾಗಿ (Technical Advisor) ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಅಧಿಕೃತ ಅಧಿಸೂಚನೆ ಹೊರಡಿಸಿದೆ.
ಅನುಭವ ಹಾಗೂ ದಕ್ಷ ಆಡಳಿತಕ್ಕೆ ಹೆಸರಾಗಿರುವ ಡಾ. ಕೆ. ಜೈಪ್ರಕಾಶ್ ಅವರು ಈ ಹಿಂದೆ ವಿಶ್ವೇಶ್ವರಯ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ (MD) ಹಾಗೂ ಸರ್ಕಾರದ ಕಾರ್ಯದರ್ಶಿಗಳಾಗಿ ಅತ್ಯುತ್ತಮ ಸೇವೆ ಸಲ್ಲಿಸಿ ಗಮನ ಸೆಳೆದಿದ್ದಾರೆ.
ವಿಶೇಷವಾಗಿ ಬಯಲುಸೀಮೆಯ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸುವ ಬೃಹತ್ ನೀರಾವರಿ ಹಾಗೂ ಕುಡಿಯುವ ನೀರಿನ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವಲ್ಲಿ ಅವರ ಪಾತ್ರ ಹಿರಿದಾಗಿತ್ತು.
ಅವರ ಈ ಅನುಭವ ಹಾಗೂ ತಾಂತ್ರಿಕ ನೈಪುಣ್ಯತೆಯನ್ನು ಪರಿಗಣಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಮಾನ್ಯ ಮುಖ್ಯಮಂತ್ರಿಯವರ ಪದಾವಧಿಯವರೆಗೆ ಅಥವಾ ಮುಂದಿನ ಆದೇಶದವರೆಗೆ ಈ ಹುದ್ದೆಗೆ ನಿಯೋಜಿಸಲಾಗಿದೆ.




