Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಕರ್ನಾಟಕ ಮಾದರಿ ಆಡಳಿತ ಕುರಿತು ತ್ರಿಪುರ ರಾಜ್ಯದ ಅಧಿಕಾರಿಗಳಿಗೆ ತರಬೇತಿ- ಡಾ.ಶಾಲಿನಿ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನಮ್ಮ 'ರಾಜ್ಯದ ಉತ್ತಮ ಆಡಳಿತದ ಬಗ್ಗೆ ತಿಳಿದುಕೊಳ್ಳಲು ಬರುವ ಇತರೆ ರಾಜ್ಯಗಳ ಅಧಿಕಾರಿಗಳಿಗೆ ನಮ್ಮ ಸಂಸ್ಥೆ ವತಿಯಿಂದ ತರಬೇತಿ ನೀಡುತ್ತಿರುವುದು ನಮ್ಮ ರಾಜ್ಯದ ಹೆಮ್ಮೆಯ ವಿಷಯವಾಗಿದೆ ಎಂದು ಮೈಸೂರು ಆಡಳಿತ ತರಬೇತಿ ಸಂಸ್ಥೆಯ ಮಹಾ ನಿರ್ದೇಶಕರು ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ.ಶಾಲಿನಿ ರಜನೀಶ್ ಅವರು ಹರ್ಷ ವ್ಯಕ್ತಪಡಿಸಿದರು.

ಮೈಸೂರಿನ ಆಡಳಿತ ತರಬೇತಿ ಸಂಸ್ಥೆಯಲ್ಲಿ ಮೇ 9 ರಿಂದ 12 ರವರೆಗೆ ನಾಲ್ಕು ದಿನಗಳ ಕಾಲ 2024ನೇ ಬ್ಯಾಚ್ ತ್ರಿಪುರ ರಾಜ್ಯದ ಆಡಳಿತ ಸೇವೆಗೆ ಸೇರಿದ '' ವೃಂದದ ಒಟ್ಟು 30 ಅಧಿಕಾರಿಗಳಿಗೆ ಹಮ್ಮಿಕೊಂಡಿರುವ ತರಬೇತಿ ಕಾರ್ಯಕ್ರಮವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು ಮೈಸೂರಿನ ಆಡಳಿತ ತರಬೇತಿ ಸಂಸ್ಥೆಯಿಂದ ಪ್ರತಿ ವರ್ಷ ಸರಾಸರಿ 280 ತರಬೇತಿ ಕಾರ್ಯಕ್ರಮಗಳ ಮೂಲಕ ಸುಮಾರು ಈವರೆಗೆ 8400 ಗ್ರೂಪ್ '' ಮತ್ತು 'ಬಿ' ಅಧಿಕಾರಿಗಳಿಗೆ ಉನ್ನತ ಮಟ್ಟದ ತರಬೇತಿಯನ್ನು ನೀಡಲಾಗಿದೆ ಎಂದು ತಿಳಿಸಿದರು.

ತರಬೇತಿ ಕಾರ್ಯಕ್ರಮದಲ್ಲಿ ನಮ್ಮ ರಾಜ್ಯದ -ಆಡಳಿತ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ಉತ್ತಮ ಆಡಳಿತ (good governance) ಹಾಗೂ ನಾಗರಿಕ ಸ್ನೇಹಿ (citizen centric e-governance initiatives) ಯೋಜನೆಗಳಾದ 'ಭೂಮಿ', 'ಮೋಜಿಣಿ', 'ಸೇವಾಸಿಂಧು', 'ಏಕೀಕೃತ ಭೂ ನಿರ್ವಹಣಾ ವ್ಯವಸ್ಥೆ' (ULMS), 'ಕೂಸಿನ ಮನೆ' ಇತ್ಯಾದಿ ಯಶಸ್ವಿ ಯೋಜನೆಗಳ ಕುರಿತು ತರಬೇತಿಯನ್ನು ನೀಡಲಾಗುತ್ತದೆ.

ತರಬೇತಿ ಜೊತೆಗೆ ಪ್ರಶಿಕ್ಷಣಾರ್ಥಿಗಳು ಮೈಸೂರಿನ ಪಾರಂಪರಿಕ ಸ್ಥಳಗಳು, ಚಾಮರಾಜನಗರ ಜಿಲ್ಲೆಯ ನಿಟ್ರಿ ಗ್ರಾಮ ಪಂಚಾಯತಿ ಹಾಗೂ ನಗರಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದಂತೆ ಮೈಸೂರು ಮಹಾನಗರ ಪಾಲಿಕೆಗೆ ಭೇಟಿ ನೀಡಲಿದ್ದಾರೆ ಎಂದು ಹೇಳಿದರು.

 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು