Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Health & Fitness

ಮಕ್ಕಳ ಆಹಾರ ಸುರಕ್ಷತೆ ಬಗ್ಗೆ ಎಚ್ಚರಿಕೆ ವಹಿಸಿ: ಡಾ. ತಿಪ್ಪೇಸ್ವಾಮಿ.ಕೆ.ಟಿ

 ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಉಗ್ರಾಣದ ಪ್ರತಿಯೊಂದು ಚೀಲದಲ್ಲಿರುವ ಧಾನ್ಯವೂ ಮಗುವಿನ ಆರೋಗ್ಯ
, ಶಿಕ್ಷಣ ಮತ್ತು ಭವಿಷ್ಯಕ್ಕೆ ನೇರವಾಗಿ ಸಂಬAಧಿಸಿದೆ. ಆಹಾರ ಸುರಕ್ಷತೆಯಲ್ಲಿ ಯಾವುದೇ ಅಸಡ್ಡೆ ತೋರದೆ ಅಧಿಕಾರಿಗಳು ಸೂಕ್ಷö್ಮತೆಯಿಂದ ಕಾರ್ಯನಿರ್ವಹಿಸಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ. ಕೆ.ಟಿ.ತಿಪ್ಪೇಸ್ವಾಮಿ ತಿಳಿಸಿದರು.

ನಗರದಲ್ಲಿರುವ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಗ್ರಾಣಗಳಿಗೆ ಡಾ.ಕೆ.ಟಿ.ತಿಪ್ಪೇಸ್ವಾಮಿ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಶಾಲೆ ಮತ್ತು ವಸತಿ ನಿಲಯಗಳಿಗೆ ಸರಬರಾಜು ಮಾಡುವ ಆಹಾರವನ್ನು ಸೂಕ್ಷ್ಮ ವಿಭಾಗ ಎಂದು ಪರಿಗಣಿಸಬೇಕು. ಮಕ್ಕಳ ಆಹಾರದ ಗುಣಮಟ್ಟದ ರಾಜಿ ಅಥವಾ ನಿರ್ಲಕ್ಷ್ಯ ಸಲ್ಲದು. ಉಗ್ರಾಣಗಳ ಸ್ವಚ್ಛತೆ, ಧಾನ್ಯ ಸಂಗ್ರಹಣೆ, ಕೀಟ-ಇಲಿ ನಿಯಂತ್ರಣ ಮತ್ತು ಮೊದಲು ಬಂದ ಧಾನ್ಯವನ್ನು ಮೊದಲು ವಿತರಿಸುವ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು. ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಮಾರ್ಗಸೂಚಿಗಳು ಹಾಗೂ ಆಹಾರ ಸುರಕ್ಷತಾ ಕಾಯ್ದೆ-2006 ರ ನಿಯಮಗಳನ್ನು ಪ್ರತಿಯೊಂದು ಹಂತದಲ್ಲೂ ಪಾಲಿಸಬೇಕು.

ಹಾನಿಯಾದ ಅಥವಾ ತೇವಾಂಶದಿಂದ ಕೂಡಿದ ಆಹಾರ ಪದಾರ್ಥಗಳು ಕಂಡುಬಂದಲ್ಲಿ ಕೂಡಲೇ ಅವುಗಳನ್ನು ಪ್ರತ್ಯೇಕಿಸಲು ಕ್ರಮ ಕೈಗೊಳ್ಳಬೇಕು. ಆಹಾರ ಸಂಗ್ರಹಣೆ ಅಥವಾ ವಿತರಣೆಯಲ್ಲಿನ ಲೋಪವು ಮಕ್ಕಳ ಮೂಲಭೂತ ಹಕ್ಕುಗಳ ಉಲ್ಲಂಘನೆಗೆ ಸಮಾನ ಎಂದು ಅವರು ಎಚ್ಚರಿಸಿದರು. ಜಿಲ್ಲೆಯ ಎಲ್ಲಾ ಉಗ್ರಾಣಗಳು ಹಾಗೂ ನ್ಯಾಯಬೆಲೆ ಅಂಗಡಿಗಳ ಕಟ್ಟಡಗಳ ಮೇಲೆ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಅನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು ಎಂದು ಡಾ.ಕೆ.ಟಿ.ತಿಪ್ಪೇಸ್ವಾಮಿ ಸೂಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರೇಮಮೂರ್ತಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ್, ಉಗ್ರಾಣ ವ್ಯವಸ್ಥಾಪಕರು ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳು ಉಪಸ್ಥಿತರಿದ್ದರು.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಖಾಸಗಿ ವಿವಿಗಳು ಲಾಭಕೋರ ವ್ಯಾಪಾರಿ ಸಂಸ್ಥೆಗಳಲ್ಲ: ಸುಪ್ರೀಂ ಕೋರ್ಟ್ ಖಡಕ್ ಎಚ್ಚರಿಕೆ ಪಿಎಸ್‌ಐಗೆ ಕಪಾಳಮೋಕ್ಷ: ಎಸ್‌ಐ ಸವಿತಾ ಪಾಟೀಲ್ ಬಳಿ ವಿಡಿಯೋ ಮೂಲಕ ಕ್ಷಮೆ ಕೋರಿದ ಶಾಸಕ ಸುರೇಶ್ ಗೌಡ ಪುತ್ರಿ ಐಶ್ವರ್ಯಾ ಗೌಡಸರ್ಕಾರಿ ಬಸ್ ಗ್ಲಾಸ್ ಒಡೆದು ಕರ್ತವ್ಯಕ್ಕೆ ಅಡ್ಡಿ; 15 ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ಕಾಡು ಹಂದಿ ಬೇಟೆ: ವನ್ಯಜೀವಿ ಕಾಯ್ದೆಯಡಿ ಪೊಲೀಸರೇ ನೇರ ದೂರು ದಾಖಲಿಸುವುದು ಕಾನೂನುಬಾಹಿರ-ಹೈಕೋರ್ಟ್ಬೆಳ್ಳಂಬೆಳಗ್ಗೆ ಲೋಕಾಯುಕ್ತ ಕದನ: 8 ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ200 ರೂ. ಆಸೆಗೆ ಬಿದ್ದು 9.30 ಲಕ್ಷ ರೂ. ಕಳೆದುಕೊಂಡ ಯುವತಿ: 'ವರ್ಕ್ ಫ್ರಮ್ ಹೋಮ್' ಸೈಬರ್ ವಂಚನೆ ಬಯಲುಸಾಮಾನ್ಯ ಜನರಿಗೆ ಬೆಲೆ ಏರಿಕೆ ಬಿಸಿ: ದಿಢೀರ್ ಹೆಚ್ಚಾದ ಅಕ್ಕಿ ದರ, ಒಂದೇ ತಿಂಗಳಲ್ಲಿ ಎರಡನೇ ಬಾರಿ ಏರಿಕೆಉತ್ತರ ಪ್ರದೇಶ, ಉತ್ತರಾಖಂಡ ರಾಜ್ಯಸಭಾ ಚುನಾವಣೆ ಹಾಗೂ ಬಂಗಾಳ ಉಪಚುನಾವಣೆ ಘೋಷಣೆ ಸಚಿವ ಶಿವಲಿಂಗೇಗೌಡರ ವಿವಾದಾತ್ಮಕ ಹೇಳಿಕೆ: ಲೋಕಾಯುಕ್ತಕ್ಕೆ ದೂರು ದಾಖಲು, ರಾಜೀನಾಮೆಗೆ ಆಗ್ರಹಬೆಂಗಳೂರು ವಿಮಾನ ನಿಲ್ದಾಣದಲ್ಲಿ 28 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಹಾಗೂ ಚಿನ್ನ ವಶ, 6 ಜನರ ಬಂಧನ