Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
International News

ಒಣ ವೈಚಾರಿಕ ಪ್ರಜ್ಞೆ ಬೇಡ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೆಲವರು ಇದೊಂದು ವೈಜ್ಞಾನಿಕ ವಿದ್ಯೆ. ಗ್ರಹಗಳು, ನಕ್ಷತ್ರಗಳ ಚಲನವಲನಗಳನ್ನು ಅಭ್ಯಸಿಸಿ ಮನುಷ್ಯ ಇತಿಹಾಸದ ಅನುಭವಗಳ ಆಧಾರದ ಮೇಲೆ ಆತನ ಗುಣ ಸ್ವಭಾವಗಳನ್ನು ಗುರುತಿಸುವ ವಿಜ್ಞಾನವಿದು. ಖಚಿತ ಭವಿಷ್ಯ ಹೇಳುವುದು ಸಾಧ್ಯವಿಲ್ಲವಾದರು ಕೆಲವು ನಡೆಗಳನ್ನು ಗುರುತಿಸಬಹುದು.

ಈಗಿನ ಅನೇಕ ನಕಲಿ ಜ್ಯೋತಿಷಿಗಳ ವ್ಯಾಪಾರಿ ಮನೋಭಾವದಿಂದ ಇದು ಕಲುಷಿತಗೊಂಡಿದ್ದು ನಿಜವಾದ ಜ್ಯೋತಿಷ್ಯ ಶಾಸ್ತ್ರ ವೈಚಾರಿಕವಾದದ್ದು ಎಂದು ಸಮರ್ಥಿಸಿಕೊಳ್ಳುತ್ತಾರೆ.

ಹೌದು, ಕೆಲವೊಮ್ಮೆ ಅದರಲ್ಲೂ ನಮ್ಮ ಸಂಕಷ್ಟದ ಸಮಯದಲ್ಲಿ ಯಾರೋ ಜ್ಯೋತಿಷಿಗಳು ಮೇಲೆ ತಿಳಿಸಿದ ಅಂಶಗಳ ಆಧಾರದಲ್ಲಿ ಕೆಲವು ಊಹಾತ್ಮಕ ಅಥವಾ ಅವರು ಕಲಿತ ವಿದ್ಯೆಯ ನೆರವಿನಿಂದ ಕೆಲವು ಸಲಹೆ ಸೂಚನೆಗಳನ್ನು ನೀಡಬಹುದು. ಅದು‌ಹಲವು ಬಾರಿ ನಿಜವೂ ಆಗಬಹುದು. ಅದು ಜ್ಯೋತಿಷ್ಯದ ಮೇಲೆ ನಂಬಿಕೆ ಹೆಚ್ಚಿಸುತ್ತದೆ. ಹಾಗಾದರೆ ಜ್ಯೋತಿಷ್ಯ ನಿಜವೇ ?

ಒಣ ವೈಚಾರಿಕ ಪ್ರಜ್ಞೆಯೂ ಬೇಡ ಅಥವಾ ಹಿರಿಯರು ತೋರಿದ ಧರ್ಮ, ಸಂಪ್ರದಾಯದ ನಂಬಿಕೆಯ ದಾರಿಯೂ ಬೇಡ. ನಮ್ಮ ಇಂದಿನ ಅರಿವು ಅನುಭವದ ಮಿತಿಯಲ್ಲಿ ಇದನ್ನು ಯೋಚಿಸೋಣ.........

ಇದು ಸಾರ್ವತ್ರಿಕ ಸತ್ಯವೇ ? ವಿಶ್ವದ ಈಗಿನ ಸುಮಾರು 750 ಕೋಟಿ ಜನಸಂಖ್ಯೆಗೂ ಇದು ಅನ್ವಯವಾಗುತ್ತದೆಯೇ ? ಸೃಷ್ಟಿಯ ಎಲ್ಲಾ ಭೂ ಪ್ರದೇಶದಲ್ಲಿಯೂ  ಏಕ ಪ್ರಕಾರವಾಗಿ ಪರಿಣಾಮ ಬೀರುತ್ತದೆಯೇ ?

ಮನುಷ್ಯರಿಗೆ ಮಾತ್ರವೇ ಅಥವಾ ಸಕಲ ಚರಾಚರ ಜೀವಿಗಳಿಗೂ ಅನ್ವಯಿಸುತ್ತದೆಯೇ ? ಬಣ್ಣ, ದಿಕ್ಕು, ಸಂಖ್ಯೆಗಳು ಮನುಷ್ಯನ ವ್ಯಾವಹಾರಿಕ ಅನುಕೂಲಕ್ಕಾಗಿ ಗುರುತಿಸುವಿಕೆಯ ಕಾರಣಕ್ಕಾಗಿ ನೀಡಿದ ಹೆಸರುಗಳಲ್ಲವೇ ?

ಸಾರ್ವಜನಿಕವಾಗಿ  ಪ್ರಾಕೃತಿಕ ವಿಕೋಪಗಳನ್ನು, ವೈಯಕ್ತಿಕವಾಗಿ ಮನುಷ್ಯನ ಏಳು ಬೀಳುಗಳನ್ಮು, ಯಶಸ್ಸು ವೈಫಲ್ಯಗಳನ್ನು, ಹುಟ್ಟು ಸಾವುಗಳನ್ನು ಖಚಿತವಾಗಿ ಮೊದಲೇ ಮಾಹಿತಿ ನೀಡಲು ಸಾಧ್ಯವೇ ? ಪ್ರಕೃತಿಯ ಎಲ್ಲಾ ಅಂಶಗಳನ್ನು ಜ್ಯೋತಿಷ್ಯ ಶಾಸ್ತ್ರ ಭೇದಿಸಿದೆಯೇ ?

ಆರೋಗ್ಯವೇ ಇರಲಿ, ಆರ್ಥಿಕ ಪರಿಸ್ಥಿತಿಯೇ ಇರಲಿ, ತಂತ್ರಜ್ಞಾನವೇ ಇರಲಿ, ಮಾನಸಿಕ ಸಮತೋಲನವೇ ಇರಲಿ ಅಥವಾ ವ್ಯವಸ್ಥೆಯ ಯಾವುದೇ ವಿಷಯದಲ್ಲಿ ವಿಜ್ಞಾನ ಮತ್ತು ಜ್ಯೋತಿಷ್ಯದ ಮುಖಾಮುಖಿಯಲ್ಲಿ ಜ್ಯೋತಿಷ್ಯ ಹೆಚ್ಚು ಖಚಿತವಾದದ್ದು ಮತ್ತು ಸಾರ್ವತ್ರಿಕ ಸತ್ಯ ಎಂದು ನಿಮಗನಿಸುತ್ತದೆಯೇ ?

ಯಾವುದೋ ನಮ್ಮ ವೈಯಕ್ತಿಕ ನೆಲೆಯಲ್ಲಿ ಕೆಲವು ಘಟನೆಗಳು ಕಾಕತಾಳೀಯ ಅಥವಾ ಸಹಜ ಸ್ವಾಭಾವಿಕವಾಗಿ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ನಿಜವಾದಲ್ಲಿ ಅದನ್ನೇ ಸಂಪೂರ್ಣ ಸತ್ಯ ಎಂದು ಭಾವಿಸಬೇಕೆ ? ಈ ಕ್ಷಣದ ಆಧುನಿಕ ಸಮಾಜವನ್ನು ಗಮನಿಸಿದಾಗ ಇಡೀ ವಿಶ್ವದ ದಿನನಿತ್ಯದ ಆಗುಹೋಗುಗಳನ್ನು ಮುನ್ನಡೆಸುತ್ತಿರುವುದು ವಿಜ್ಞಾನವೇ ಅಥವಾ ಜ್ಯೋತಿಷ್ಯವೇ ?

ಸಾವಿನ ಭಯ ಪಡದೆ, ಸೋಲಿನ ಆತಂಕಕ್ಕೆ ಒಳಗಾಗದೆ, ನಿಷ್ಕಲ್ಮಶ ಮನಸ್ಸಿನಿಂದ, ವಿಶಾಲ ಮನೋಭಾವದಿಂದ, ದೀರ್ಘಕಾಲದ ಮೌನದಲ್ಲಿ ಇದರ ಬಗ್ಗೆ ನೀವು ಯೋಚಿಸಿದರೆ ಬಹುಶಃ ವಾಸ್ತವಿಕ ಸತ್ಯ ನಿಮಗೆ ಅರ್ಥವಾಗಬಹುದು.

ಬದುಕು ತುಂಬಾ ಸರಳವಾಗಿದ್ದಾಗ, ಮನುಷ್ಯ ಪ್ರಕೃತಿಯೊಂದಿಗೆ ಜೀವಿಸುತ್ತಿದ್ದಾಗ,‌ಆತನ ಬೇಡಿಕೆಗಳು ಅನ್ನ ಆಹಾರಕ್ಕೆ ಸೀಮಿತವಾಗಿದ್ದಾಗ, ಅಕ್ಷರ ಜ್ಞಾನವಿಲ್ಲದ ಸಮಯದಲ್ಲಿ, ವಿಜ್ಞಾನ ಇನ್ನೂ ಅಸ್ತಿತ್ವವಿಲ್ಲದ ಕಾಲದಲ್ಲಿ ಜ್ಯೋತಿಷ್ಯ ಒಂದು ಸಲಹಾ ರೂಪದ ಮಾರ್ಗದರ್ಶನವಾಗಿ ಇದ್ದಿರಬಹುದು....

ಆದರೆ ಇಂದಿನ ಸಂಕೀರ್ಣ ಆಧುನಿಕ ಸಮಾಜದಲ್ಲಿ ವಿಜ್ಞಾನವನ್ನು ತಿರಸ್ಕರಿಸಿ, ಜ್ಯೋತಿಷ್ಯವನ್ನು ಪುರಸ್ಕರಿಸಿ ನಮ್ಮ ದೇಶದ ಅಭಿವೃದ್ಧಿ ಸಾಧ್ಯವೇ ? ವೈಯಕ್ತಿಕ ಬದುಕಿನ ಯಶಸ್ಸು ನೆಮ್ಮದಿ ಸಾಧ್ಯವೇ ? ಯೋಚಿಸುವ ಸರದಿ ನಮ್ಮದು.........
ಲೇಖನ : ವಿವೇಕಾನಂದ. ಎಚ್. ಕೆ. 9663750451

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚಿತ್ರದುರ್ಗ: 25,000 ರೂ. ಲಂಚ ಪಡೆಯುತ್ತಿದ್ದ ಉಪವಿಭಾಗಾಧಿಕಾರಿ ಕಚೇರಿಯ ಪ್ರಥಮ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆಪಶ್ಚಿಮಘಟ್ಟ ಸಂರಕ್ಷಣೆ: ಕಸ್ತೂರಿ ರಂಗನ್ ವರದಿ ಸ್ಯಾಟಲೈಟ್ ಮ್ಯಾಪಿಂಗ್ ಒಪ್ಪಲು ಸಾಧ್ಯವಿಲ್ಲ; ಬಿ.ಕೆ.ಹರಿಪ್ರಸಾದ್ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶಶಾಸಕ ಎಸ್. ಸುರೇಶ್ ಕುಮಾರ್ ಅವರು "ಸಜ್ಜನ" ಎಂಬ ಮುಖವಾಡ ಧರಿಸಿದ ದುರ್ಜನಸರ್ಕಾರದ ಅನುದಾನಕ್ಕೆ ಕಾಯದೆ ಸ್ವಂತ ಖರ್ಚಿನಲ್ಲಿ ಕಾಲುವೆ ದುರಸ್ತಿಗೆ ಮುಂದಾದ ಎಚ್.ಡಿ. ರೇವಣ್ಣಹೈಕೋರ್ಟ್‌ನಿಂದ ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ ಎಸ್‌ಐಟಿ ತನಿಖೆಗೆ ಆದೇಶಆಲಮಟ್ಟಿ ಜಲಾಶಯ ಎತ್ತರ ಹೆಚ್ಚಳ: ಯುಕೆಪಿ ಹಂತ-3ರ ಭೂಸ್ವಾಧೀನ ಪ್ರಕ್ರಿಯೆಗೆ ಚುರುಕುವ್ಯಾಪಕ ಭ್ರಷ್ಟಾಚಾರ: ಕಾಮಗಾರಿಗಳ ಶ್ವೇತಪತ್ರ ಹೊರಡಿಸಲು ಆಂಜನೇಯ ಆಗ್ರಹ‘ಗೌರವಯುತ ಲಂಚ’: ಕಾಂಗ್ರೆಸ್ ಸರ್ಕಾರದ ಹೊಸ 'ಪ್ರಜಾಸೇವಾ ಶುಲ್ಕ' ಎಂದು ಆರ್. ಅಶೋಕ್ಸ್ವಪಕ್ಷೀಯರ ಆಕ್ರೋಶವೇ ಕಾಂಗ್ರೆಸ್ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿ: ಆರ್. ಅಶೋಕ್ ವಾಗ್ದಾಳಿ