E-PAPER
25 Nov 2026, 01:36:23 AM|
Gold₹12519/gGold24K ₹12,519/g - 22K ₹11,465/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ

ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು :
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 30 ವಿದ್ಯಾರ್ಥಿಗಳಿಗೆ ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ ಆಯೋಜಿಸಿ ಖಾಸಗಿ ಶಾಲೆಗಳಿಗೆ ಸವಾಲು ಹಾಕಿರುವಂತಹ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮುತ್ತಿಗೆಪುರ ಗ್ರಾಮದಲ್ಲಿ ನಡೆದಿದೆ.


ಸರ್ಕಾರಿ ಶಾಲೆ ಅಂದ್ರೆ ಅಸಡ್ಡೆ ತೋರುವವರೇ ಹೆಚ್ಚು. ಹೀಗಾಗಿ, ಮಲೆನಾಡ ಇತಿಹಾಸದಲ್ಲಿ ಸರ್ಕಾರಿ ಶಾಲೆಯೊಂದು ಹೈಟೆಕ್ ಆಗಿ ವಿಮಾನದಲ್ಲಿ ಪ್ರವಾಸ ಹೊರಟು ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡಿದೆ.
ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಮೂಡಿಗೆರೆ ತಾಲೂಕಿನ ಮುತ್ತಿಗೆಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಶೈಕ್ಷಣಿಕ ಸಾಧನೆ ಮಾಡುತ್ತಿದ್ದಾರೆ ಹಾಗೂ ಸೌಲಭ್ಯಗಳ ಮೂಲಕ ಖಾಸಗಿ ಶಾಲೆಗಳಿಗೆ ಸವಾಲು ಹಾಕುವ ಕಾರ್ಯ ಮಾಡಿ ಗಮನ ಸೆಳೆದಿದೆ.


ಖಾಸಗಿ ಶಾಲೆಗಳಲ್ಲಿ ದೊರೆಯುವ ಎಲ್ಲ ರೀತಿಯ ಗುಣಮಟ್ಟದ ಶಿಕ್ಷಣ, ಶೈಕ್ಷಣಿಕ ಸೌಲಭ್ಯಗಳು ಸೇರಿದಂತೆ ಶೈಕ್ಷಣಿಕ ವಾತಾವರಣವನ್ನು ಈ ಸರ್ಕಾರಿ ಶಾಲೆಯಲ್ಲೇ ಒದಗಿಸಲಾಗುತ್ತಿದೆ. ಜಿಲ್ಲೆಯ ಸರ್ಕಾರಿ ಶಾಲಾ ಮಕ್ಕಳಿಗೆ ಇದೇ ಮೊದಲ ಬಾರಿಗೆ ವಿಮಾನ ಪ್ರಯಾಣದ ಅವಕಾಶ ದೊರಕಿರುವುದು ವಿಶೇಷವಾಗಿದೆ.

ಸರ್ಕಾರಿ ಶಾಲಾ ಮಕ್ಕಳಿಗೆ ವಿಮಾನದಲ್ಲಿ ಪ್ರಯಾಣಿಸುವ ಅವಕಾಶ ಕಲ್ಪಿಸುವಲ್ಲಿ ಸ್ಥಳೀಯ ಗ್ರಾಮ ಪಂಚಾಯತ್​, ಎಸ್‍ಡಿಎಂಸಿ ಸದಸ್ಯರು, ದಾನಿಗಳು ಹಾಗೂ ಶಾಲಾ ಶಿಕ್ಷಕರು ಪ್ರಮುಖ ಪಾತ್ರ ವಹಿಸಿದ್ದಾರೆ. ಅವರ ಸಹಕಾರ ಮತ್ತು ಸಮರ್ಪಿತ ಪ್ರಯತ್ನಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಇತ್ತೀಚಿಗೆ ಪ್ರವಾಸಕ್ಕೆ ಹೊರಟಿದ್ದ ಶಾಲಾ ಮಕ್ಕಳ ಸಂತಸಕ್ಕೆ ಮಿತಿಯೇ ಇರಲಿಲ್ಲ. ವಿಮಾನ ಪ್ರಯಾಣದ ಅನುಭವವು ಮಕ್ಕಳಲ್ಲಿ ಹೊಸ ಉತ್ಸಾಹ, ಆತ್ಮವಿಶ್ವಾಸ ಹಾಗೂ ಭವಿಷ್ಯದ ಕನಸುಗಳನ್ನು ಬೆಳೆಸುವಲ್ಲಿ ಸಹಕಾರಿಯಾಗಲಿದೆ ಎಂದು ಶಿಕ್ಷಕರು ಅಭಿಪ್ರಾಯಪಟ್ಟಿದ್ದಾರೆ.



ಒಟ್ಟು 30 ವಿದ್ಯಾರ್ಥಿಗಳು ಪ್ರವಾಸಕ್ಕೆ ತೆರಳಿದ್ದಾರೆ. ಚಿಕ್ಕಮಗಳೂರಿನಿಂದ ಕಳೆದ ಜನವರಿ-7ರಂದು ಬುಧವಾರ ಶಿವಮೊಗ್ಗಕ್ಕೆ ಬಸ್​​ನಲ್ಲಿ ತೆರಳಿ ಅಲ್ಲಿಂದ ಬೆಂಗಳೂರಿಗೆ ವಿಮಾನ ಪ್ರಯಾಣ ಮಾಡಿದ್ದಾರೆ. ಶಾಲಾ ಎಸ್‍ಡಿಎಂಸಿ ಸದಸ್ಯರು ಹಾಗೂ ದಾನಿಗಳ ನೆರವಿನಿಂದ ಈ ಪ್ರವಾಸ ಕೈಗೊಳ್ಳಲಾಗಿದೆ. ಬೆಂಗಳೂರಿನಲ್ಲಿ ವಿಧಾನಸೌಧ, ವಿಮಾನ ನಿಲ್ದಾಣವನ್ನು ತೋರಿಸಿ ಅಲ್ಲಿಂದ ಬಸ್​​ನ ಮೂಲಕ ಚಿಕ್ಕಮಗಳೂರಿಗೆ ವಾಪಸ್ ಆಗಿದ್ದಾರೆ.

ಮಾದರಿ ಶಾಲೆಯಾಗಿ ಹೊರಹೊಮ್ಮಿದೆ:
ಮುದ್ರೆ ಮನೆ ಕಾಫಿ ಕ್ಯೂರಿಂಗ್ ಮಾಲೀಕ ಬಿ. ಎಸ್. ಸಂತೋಷ್ ಸಹಕಾರದಿಂದ ಸುಸಜ್ಜಿತ ಕಟ್ಟಡ ನಿರ್ಮಿಸಿಕೊಟ್ಟಿದ್ದಾರೆ. ಈಗ ಶಾಲೆ ಇಡೀ ರಾಜ್ಯವೇ ಹೆಮ್ಮೆಪಡುವಂತೆ ಮಾದರಿಯಾಗಿ ಹೊರಹೊಮ್ಮಿದೆ.
ಮುತ್ತಿಗೆಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯಾವುದೇ ಹೈಟೆಕ್ ಖಾಸಗಿ ಶಾಲೆಗೆ ಕಮ್ಮಿ ಇಲ್ಲದಂತೆ ರೂಪಾಂತರಗೊಂಡಿದೆ. ಮಕ್ಕಳು ಸಹ ಹೆಚ್ಚಿನ ಸಾಧನೆ ಮಾಡುತ್ತಿದ್ದು ಈ ಸರ್ಕಾರಿ ಶಾಲೆಗಳ ಶಕ್ತಿಯನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.


 

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಾರಣಾಂತಿಕ ರಸ್ತೆ ಅಪಘಾತ ಪ್ರಕರಣ: ಇಬ್ಬರು ಆರೋಪಿಗಳಿಗೆ ಸಾದಾ ಶಿಕ್ಷೆ ಮತ್ತು ದಂಡ ವಿಧಿಸಿದ ನ್ಯಾಯಾಲಯಕುವೆಂಪು ಕಂಡ ಕ್ರಾಂತಿವೀರ, ಶಿವರುದ್ರಪ್ಪ ಮೆಚ್ಚಿದ ಮಹಾಚೇತನ! ಬಸವಣ್ಣನವರನ್ನು ಅಳೆಯುವ ಅರ್ಹತೆ ಯಾರಿಗಿದೆ?ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿ: 1:3 ಅನುಪಾತದಲ್ಲಿ ಅಭ್ಯರ್ಥಿಗಳ ಪಟ್ಟಿ ಪ್ರಕಟರಾಷ್ಟ್ರೀಯ ಮತದಾರರ ದಿನಾಚರಣೆ: ಜಿಲ್ಲಾಮಟ್ಟದ ಪ್ರಬಂಧ, ರಸಪ್ರಶ್ನೆ ಸ್ಪರ್ಧೆ ಆಯೋಜನೆಆರ್.ಆರ್. ನಗರದಲ್ಲಿ ರಾಜಕೀಯ ಬೆಳವಣಿಗೆ; ಮುನಿರತ್ನ ಆಪ್ತರು ಕಾಂಗ್ರೆಸ್ ಸೇರ್ಪಡೆರೇಣುಕಾಸ್ವಾಮಿ ಕೊಲೆ ಕೇಸ್: ಕೋರ್ಟ್‌ನಲ್ಲಿ ಉಲ್ಟಾ ಹೊಡೆದ ಪಟ್ಟಣಗೆರೆ ಶೆಡ್ ಗಾರ್ಡ್, ಪ್ರಾಸಿಕ್ಯೂಷನ್‌ಗೆ ಹಿನ್ನಡೆ!ಕಾಡಾನೆ ಸ್ಥಳಾಂತರಕ್ಕೆ ತೀವ್ರ ವಿರೋಧ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ನಯನಾ ಮೋಟಮ್ಮಏಷ್ಯಾ ಪವರ್ ಇಂಡೆಕ್ಸ್ 2026: 3ನೇ ಸ್ಥಾನ ಉಳಿಸಿಕೊಂಡ ಭಾರತ; ಪ್ರಾದೇಶಿಕ ನಾಯಕತ್ವದಲ್ಲಿ ಮೋದಿಗೆ 2ನೇ ಸ್ಥಾನಮುಖ್ಯಮಂತ್ರಿಗಳ ಮಾತಿನ ಮೇಲೆ ವಿಶ್ವಾಸವಿಡಿ: ಡಿಸಿಎಂ ಜಿ. ಪರಮೇಶ್ವರ್ಚೆಕ್ ಬೌನ್ಸ್ ಪ್ರಕರಣ: ಹೈಕೋರ್ಟ್ ಮಹತ್ವದ ತೀರ್ಪು