Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Health & Fitness

ಶಿಶು ಹಾಗೂ ತಾಯಿ ಮರಣ ನಿಯಂತ್ರಣಕ್ಕೆ ಪರಿಣಾಮಕಾರಿ ಯೋಜನೆ ಅಗತ್ಯ-ಜಿ.ಪಂ ಸಿಇಒ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲೆಯಲ್ಲಿ ಶಿಶು ಮತ್ತು ತಾಯಿ ಮರಣ ಪ್ರಮಾಣ ನಿಯಂತ್ರಣಕ್ಕೆ ಪರಿಣಾಮಕಾರಿ ಹಾಗೂ ಸೂಕ್ತ ಯೋಜನೆ ರೂಪಿಸುವುದು ಅಗತ್ಯವಾಗಿದ್ದು, ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಕ್ರಮಕ್ಕೆ ಮುಂದಾಗಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ ನೀಡಿದರು.
ನಗರದ ಐಶ್ವರ್ಯ ಫೋರ್ಟ್ ಹೋಟೆಲ್  ಸಭಾಂಗಣದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೆಹೆಚ್ಪಿಟಿ ಸಹಯೋಗದಲ್ಲಿ ಬುಧವಾರ ಆಯೋಜಿಸಿದ್ದ ಐಸಿಎಂಆರ್ ಪ್ರಾಜೆಕ್ಟ್ ಲಾಂಚ್ ಹಾಗೂ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿಯೊಂದು ಮಗುವಿಗೆ ಹುಟ್ಟಿನಿಂದ 1000 ದಿನಗಳ ಜೀವಿತಾವಧಿ ಅತ್ಯಂತ ಪ್ರಮುಖ ಘಟ್ಟವಾಗಿದೆ.  ಅವಧಿಯಲ್ಲಿ ಮಗುವಿನ ದೈಹಿಕ, ಮಾನಿಸಿಕ ಬೆಳವಣಿಗೆ ಪ್ರಮುಖ ಹಂತ ದಾಟುವುದರಿಂದ, ಮಗುವಿನ ಸಮಗ್ರ ಆರೋಗ್ಯ ಕಾಯ್ದುಕೊಳ್ಳುವುದು ಅತ್ಯಂತ ಅಗತ್ಯವಾಗಿದೆ.  ಶಿಶು ಮರಣ, ತಾಯಿ ಮರಣ ನಿಯಂತ್ರಣಕ್ಕಾಗಿ ಈಗಾಗಲೆ ಸರ್ಕಾರ ಹಲವಾರು ಕಾರ್ಯಕ್ರಮಗಳು, ಯೋಜನೆಗಳು, ಜಾಗೃತಿ ಕಾರ್ಯಕ್ರಮಗಳು ಜಾರಿಯಲ್ಲಿದ್ದರೂ, ಇನ್ನೂ ಶಿಶು ಹಾಗೂ ತಾಯಿ ಮರಣಕ್ಕೆ ಪರಿಣಾಮಕಾರಿಯಾಗಿ ಕಡಿವಾಣ ಹಾಕಲು ಸಾಧ್ಯವಾಗುತ್ತಿಲ್ಲ.  ಹೀಗಾಗಿ ತಾಯಿ ಮರಣ,  ಶಿಶು ಮರಣ ಕುರಿತು ಸಮಗ್ರವಾಗಿ ಚರ್ಚೆಯಾಗಬೇಕು.

 ಗ್ರಾಮ ಪಂಚಾಯತಿ ಮಟ್ಟದಲ್ಲಿ ಈಗಾಗಲೆ ಗ್ರಾಮ ಆರೋಗ್ಯ ಕಾರ್ಯಕ್ರಮವಿದೆ. ಉದ್ಯೋಗಖಾತ್ರಿ ಯೋಜನೆಯಲ್ಲಿ ಮಹಿಳಾ ಕೂಲಿ ಕಾರ್ಮಿಕರ ಮಕ್ಕಳ ಹಿತಕಾಯಲು ಕೂಸಿನ ಮನೆ ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಪೂರಕ ಪೌಷ್ಠಿಕ ಆಹಾರ, ಅಪೌಷ್ಠಿಕತೆ ನಿವಾರಣೆ ಕಾರ್ಯಕ್ರಮಗಳು ಕೂಡ ಜಾರಿಯಲ್ಲಿವೆ.  ಆರೋಗ್ಯ ಇಲಾಖೆಯಲ್ಲಿಯೂ ಕೂಡ ಹಲವಾರು ಯೋಜನೆಗಳು ಜಾರಿಯಲ್ಲಿವೆ.  ಆದಾಗ್ಯೂ  ಶಿಶು ಮರಣ, ತಾಯಿ ಮರಣ ಸಂಭವಿಸುವುದು ತಪ್ಪಿಲ್ಲ.  ಅಪೌಷ್ಠಿಕ ಮಕ್ಕಳು, ಬೆಳವಣಿಗೆಯಲ್ಲಿ ಕುಂಠಿತ ಇರುವ ಮಕ್ಕಳು, ಕಡಿಮೆ ತೂಕದ ಮಕ್ಕಳು ಜಿಲ್ಲೆಯ ಎಲ್ಲೆಡೆ ಪತ್ತೆಯಾಗುತ್ತಾರೆ.  ಹೀಗಾಗಿ ವ್ಯವಸ್ಥೆ ಹಾಗೂ ಯೋಜನೆಗಳ ಪರಿಣಾಮಕಾರಿ ಜಾರಿಯಲ್ಲಿನ ಲೋಪದೋಷಗಳನ್ನು ಪತ್ತೆ ಮಾಡುವ ಕಾರ್ಯ ಆಗಬೇಕಿದೆ.  

ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಮಟ್ಟದಲ್ಲಿ ಯೋಜನೆಗಳ ಗ್ರೌಂಡ್ಲೆವೆಲ್ ಫೀಡ್ ಬ್ಯಾಕ್ ಪಡೆಯುವುದು ಅಗತ್ಯವಾಗಿದೆ.  ಇದರಿಂದಾಗಿ ಪರಿಹಾರ ಯೋಜನೆಗಳನ್ನು ರೂಪಿಸಲು ಸಾಧ್ಯವಾಗುತ್ತದೆ.   ನಿಟ್ಟಿನಲ್ಲಿ ಕ್ಷೇತ್ರಮಟ್ಟದ ವೈದ್ಯಾಧಿಕಾರಿಗಳು ತರಬೇತಿಯ ಪ್ರಯೋಜನ ಪಡೆದು ಶಿಶು ಮರಣ ದರ, ತಾಯಿ ಮರಣ ದರ ನಿಯಂತ್ರಿಸಲು ಸೂಕ್ತ ಯೋಜನೆ ತಯಾರಿಸಿ ಎಂದು ಹೇಳಿದರು.

     ಜಿಲ್ಲಾ ಆರ್ಸಿಹೆಚ್ ಅಧಿಕಾರಿ ಡಾ.ಡಿ.ಎಂ. ಅಭಿನವ್ ಮಾತನಾಡಿ,  ತಾಯಿ ಮರಣ, ಶಿಶು ಮರಣ ತಪ್ಪಿಸುವುದು,  ಗರ್ಭಿಣಿಯರು, ಮಕ್ಕಳಲ್ಲಿನ ರಕ್ತಹೀನತೆ ಮತ್ತು ಅಪೌಷ್ಟಿಕತೆ ತೊಲಗಿಸುವುದು ಆರೋಗ್ಯ ಇಲಾಖೆಯ ಪ್ರಮುಖ ಆದ್ಯತೆ ಆಗಬೇಕು.   ನಿಟ್ಟಿನಲ್ಲಿ ಇಂತಹ ತರಬೇತಿ ಕಾರ್ಯಗಾರಗಳು ಉಪಯುಕ್ತವಾಗಿವೆ ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್ ಮಾತನಾಡಿ,  ಪೋಷಣ್ ಅಭಿಯಾನ ಜಾರಿಯಲ್ಲಿದ್ದು, ಅಪೌಷ್ಟಿಕ ಮಕ್ಕಳನ್ನು ಗುರುತಿಸುವ, ಚಿಕಿತ್ಸೆ ಕೊಡಿಸುವ ಕೆಲಸ ನಮ್ಮ ಅಂಗನವಾಡಿ ಕೇಂದ್ರಗಳ ಮೂಲಕ ನಡೆಯುತ್ತಿದೆ. ಆರೋಗ್ಯ ಇಲಾಖೆಯೊಂದಿಗೆ ಎಲ್ಲಾ ಸಹಕಾರ ನೀಡಿ ಮಗುವಿನ ಜೀವಿತದ ಪ್ರಥಮ ಸಾವಿರ ದಿನಗಳನ್ನು ತಾಯಿ ಮಗು ಉಳಿವಿಗಾಗಿ, ತರಬೇತಿಯ ನಂತರ ಕ್ರಿಯಾ ಯೋಜನೆ ತಯಾರಿಸಿ ಒಗ್ಗೂಡಿ ಕೆಲಸ ಮಾಡೋಣ ಎಂದರು.

ಸೆಂಟ್ ಜಾನ್ಸ್ ಆಸ್ಪತ್ರೆಯ ಡಾ.ಸುಮನ ರಾವ್ ಪ್ರಾಸ್ತಾವಿಕವಾಗಿ ಮಾತನಾಡಿ ತರಬೇತಿ ಕಾರ್ಯಗಾರದ ಉದ್ದೇಶ ಮತ್ತು ಇತರೆ ವಿಷಯ ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ರವೀಂದ್ರ,  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಜಿ.ಪಿ ರೇಣುಪ್ರಸಾದ್, ಸೆಂಟ್ ಜಾನ್ಸ್ ರಿಸರ್ಚ್ ಇನ್ಸಿಟ್ಯೂಟ್ ಕೋ ಡೈರೆಕ್ಟರ್ ಡಾ.ಮರಿಯನ್, ಸೆಂಟ್ ಜಾನ್ಸ್ ಮೆಡಿಕಲ್ ಕಾಲೇಜು ಮುಖಸ್ಥ ಹಾಗೂ ಪ್ರಾಧ್ಯಾಪಕ ಟಿಂಕುಥಾಮಸ್, ಕೆಹೆಚ್ಪಿಟಿ ಐಸಿಎಂಆರ್ ಟೆಕ್ನಿಕಲ್ ಲೀಡ್ ಡಾ.ಪ್ರಾರ್ಥನಾ, ಸೀನಿಯರ್ ಮ್ಯಾನೇಜರ್ ಡಾ.ಆಯುಷ, ಐಸಿಎಂಆರ್ ಪ್ರಾಜೆಕ್ಟ್ ಜಿಲ್ಲಾ ಸಂಯೋಜಕಿ ಬಿ.ವೀಣಾ, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ್ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲ್ಲೂಕು ಆರೋಗ್ಯ ಅಧಿಕಾರಿಗಳು, ಜಿಲ್ಲಾಸ್ಪತ್ರೆಯ ವೈದ್ಯಾಧಿಕಾರಿಗಳು, ಸಮುದಾಯ ಆರೋಗ್ಯ ಕೇಂದ್ರದ ಆರೋಗ್ಯ ಅಧಿಕಾರಿಗಳು, ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಅಧಿಕಾರಿಗಳು,  ಸೆಂಟ್ ಜಾನ್ಸ್ ಆಸ್ಪತ್ರೆಯ ಸಿಬ್ಬಂದಿಗಳು, ಕೆಹೆಚ್ಪಿಟಿ ಸಿಬ್ಬಂದಿಗಳು ಇದ್ದರು.

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಖಾಸಗಿ ವಿವಿಗಳು ಲಾಭಕೋರ ವ್ಯಾಪಾರಿ ಸಂಸ್ಥೆಗಳಲ್ಲ: ಸುಪ್ರೀಂ ಕೋರ್ಟ್ ಖಡಕ್ ಎಚ್ಚರಿಕೆ ಪಿಎಸ್‌ಐಗೆ ಕಪಾಳಮೋಕ್ಷ: ಎಸ್‌ಐ ಸವಿತಾ ಪಾಟೀಲ್ ಬಳಿ ವಿಡಿಯೋ ಮೂಲಕ ಕ್ಷಮೆ ಕೋರಿದ ಶಾಸಕ ಸುರೇಶ್ ಗೌಡ ಪುತ್ರಿ ಐಶ್ವರ್ಯಾ ಗೌಡಸರ್ಕಾರಿ ಬಸ್ ಗ್ಲಾಸ್ ಒಡೆದು ಕರ್ತವ್ಯಕ್ಕೆ ಅಡ್ಡಿ; 15 ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ಕಾಡು ಹಂದಿ ಬೇಟೆ: ವನ್ಯಜೀವಿ ಕಾಯ್ದೆಯಡಿ ಪೊಲೀಸರೇ ನೇರ ದೂರು ದಾಖಲಿಸುವುದು ಕಾನೂನುಬಾಹಿರ-ಹೈಕೋರ್ಟ್ಬೆಳ್ಳಂಬೆಳಗ್ಗೆ ಲೋಕಾಯುಕ್ತ ಕದನ: 8 ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ200 ರೂ. ಆಸೆಗೆ ಬಿದ್ದು 9.30 ಲಕ್ಷ ರೂ. ಕಳೆದುಕೊಂಡ ಯುವತಿ: 'ವರ್ಕ್ ಫ್ರಮ್ ಹೋಮ್' ಸೈಬರ್ ವಂಚನೆ ಬಯಲುಸಾಮಾನ್ಯ ಜನರಿಗೆ ಬೆಲೆ ಏರಿಕೆ ಬಿಸಿ: ದಿಢೀರ್ ಹೆಚ್ಚಾದ ಅಕ್ಕಿ ದರ, ಒಂದೇ ತಿಂಗಳಲ್ಲಿ ಎರಡನೇ ಬಾರಿ ಏರಿಕೆಉತ್ತರ ಪ್ರದೇಶ, ಉತ್ತರಾಖಂಡ ರಾಜ್ಯಸಭಾ ಚುನಾವಣೆ ಹಾಗೂ ಬಂಗಾಳ ಉಪಚುನಾವಣೆ ಘೋಷಣೆ ಸಚಿವ ಶಿವಲಿಂಗೇಗೌಡರ ವಿವಾದಾತ್ಮಕ ಹೇಳಿಕೆ: ಲೋಕಾಯುಕ್ತಕ್ಕೆ ದೂರು ದಾಖಲು, ರಾಜೀನಾಮೆಗೆ ಆಗ್ರಹಬೆಂಗಳೂರು ವಿಮಾನ ನಿಲ್ದಾಣದಲ್ಲಿ 28 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಹಾಗೂ ಚಿನ್ನ ವಶ, 6 ಜನರ ಬಂಧನ