E-PAPER
24 Nov 2026, 04:48:50 AM|
Gold₹12536/gGold24K ₹12,536/g - 22K ₹11,481/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಮತದಾರರ ಪಟ್ಟಿ ಅಕ್ರಮ: ಬಿಜೆಪಿ ಬಿಎಲ್‌ಎಗಳ ವಿರುದ್ಧ ಎಫ್‌ಐಆರ್ ದಾಖಲು

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿಯಿಂದ 5,698 ಮತದಾರರ ಹೆಸರುಗಳನ್ನು ಅಕ್ರಮವಾಗಿ ತೆಗೆದುಹಾಕಲು ಸುಳ್ಳು ಫಾರಂ-7 ಅರ್ಜಿಗಳನ್ನು ಸಲ್ಲಿಸಿದ ಆರೋಪದಡಿ ಭಾರತೀಯ ಜನತಾ ಪಕ್ಷದ ಇಬ್ಬರು ಬೂತ್ ಮಟ್ಟದ ಏಜೆಂಟ್‌ಗಳು ಹಾಗೂ ಇತರರ ವಿರುದ್ಧ ಜಯನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಹಾಗೂ ಕಾಂಗ್ರೆಸ್ ನಾಯಕಿ ಸೌಮ್ಯಾ ರೆಡ್ಡಿ ಅವರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಈ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಅಕ್ರಮದ ಅವಧಿ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ನಡೆದ ಜೂನ್ 16ರಿಂದ ಅಕ್ಟೋಬರ್ 5ರ ನಡುವಿನ ಅವಧಿಯಲ್ಲಿ ಈ ಕೃತ್ಯ ಎಸಗಲಾಗಿದೆ.

ಫಾರಂ-7 ದುರ್ಬಳಕೆ: ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕಲು ಅಥವಾ ಆಕ್ಷೇಪಣೆ ಸಲ್ಲಿಸಲು ಬಳಸುವ ಫಾರಂ-7 ಅರ್ಜಿಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ಜಯನಗರ ಕ್ಷೇತ್ರದ 5,698 ಮತದಾರರು ಶಾಶ್ವತವಾಗಿ ಬೇರೆಡೆಗೆ ವಲಸೆ ಹೋಗಿದ್ದಾರೆ ಎಂದು ಸುಳ್ಳು ಮಾಹಿತಿ ನೀಡಿ ಬೂತ್ ಮಟ್ಟದ ಅಧಿಕಾರಿಗಳಿಗೆ ಈ ಅರ್ಜಿಗಳನ್ನು ಸಲ್ಲಿಸಲಾಗಿತ್ತು.

ಪ್ರಮುಖ ಆರೋಪಿಗಳು: ಬಿಜೆಪಿ ಬಿಎಲ್‌ಎಗಳಾದ ರಾಮಕೃಷ್ಣ ಮತ್ತು ಯೋಗೇಶ್ ಹಾಗೂ ಇತರೆ ವ್ಯಕ್ತಿಗಳ ಮೇಲೆ ಪ್ರಕರಣ ದಾಖಲಾಗಿದೆ.

ಸೌಮ್ಯಾ ರೆಡ್ಡಿ ಆರೋಪ: ಬಿಜೆಪಿ ಮತ್ತು ಮೈತ್ರಿ ಕೂಟದ ಪಕ್ಷಗಳಿಗೆ ರಾಜಕೀಯವಾಗಿ ಬೆಂಬಲ ನೀಡದ ಸಮುದಾಯಗಳು ಹಾಗೂ ಅಲ್ಪಸಂಖ್ಯಾತ ಸಮುದಾಯಗಳ ಮತದಾರರನ್ನು ಗುರಿಯಾಗಿಸಿಕೊಂಡು ಉದ್ದೇಶಪೂರ್ವಕವಾಗಿ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲು ಸಂಚು ರೂಪಿಸಲಾಗಿದೆ ಎಂದು ಸೌಮ್ಯಾ ರೆಡ್ಡಿ ದೂರಿನಲ್ಲಿ ಗಂಭೀರ ಆರೋಪ ಮಾಡಿದ್ದಾರೆ.

ದಾಖಲಾದ ಕಾನೂನು ಸೆಕ್ಷನ್‌ಗಳು: ಆರೋಪಿಗಳಾದ ರಾಮಕೃಷ್ಣ, ಯೋಗೇಶ್ ಮತ್ತು ಇತರರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ 2023ರ ಕಾಯ್ದೆಯಡಿ ಸೆಕ್ಷನ್ 61(2)(b), ಸೆಕ್ಷನ್ 217(b), ಸೆಕ್ಷನ್ 319(2), ಸೆಕ್ಷನ್ 336(2), ಸೆಕ್ಷನ್ 340(2) ಈ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಸ್ಪಷ್ಟನೆ: ಈ ಬೆಳವಣಿಗೆಯ ಕುರಿತು ಸೋಮವಾರ ನಡೆದ ಮಾಧ್ಯಮಗೋಷ್ಟಿಯಲ್ಲಿ ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಮಾಹಿತಿ ನೀಡಿದ್ದಾರೆ.

ಎಸ್ಐಆರ್ ಅಂತಿಮ ಮತದಾರರ ಪಟ್ಟಿ ಪ್ರಕಟಗೊಂಡ ಬಳಿಕ ಹೊಸ ಸೇರ್ಪಡೆಗಾಗಿ ವಿಶೇಷ ಅಭಿಯಾನ ನಡೆಸಲಾಗುವುದು.
ಫಾರಂ-7 ಅನ್ನು ಸಾಮೂಹಿಕವಾಗಿ ಅರ್ಜಿ ಸಲ್ಲಿಕೆ ಮಾಡಿದವರ ವಿರುದ್ಧ ಮತದಾರರ ನೋಂದಣಾಧಿಕಾರಿಗಳು ವಿಚಾರಣೆ ನಡೆಸಿ ಕಠಿಣ ಕ್ರಮ ಕೈಗೊಳ್ಳಲಿದ್ದಾರೆ.

ರಾಜ್ಯದಲ್ಲಿ ಜೂನ್ 16, 2026ರಿಂದ ಅಕ್ಟೋಬರ್ 4, 2026ರವರೆಗೆ ಒಟ್ಟು 91,278 ಫಾರಂ-7 ಅರ್ಜಿಗಳು ಸಲ್ಲಿಕೆಯಾಗಿವೆ.

ಸೆಪ್ಟಂಬರ್ 23ರವರೆಗೆ ಸಲ್ಲಿಕೆಯಾದ 58,220 ಫಾರಂ-7 ಅರ್ಜಿಗಳ ಬಗ್ಗೆ ವಿಚಾರಣೆ ನಡೆಸಿ ಅಕ್ಟೋಬರ್ 22ರೊಳಗೆ ವಿಲೇವಾರಿ ಮಾಡಲಾಗುವುದು ಹಾಗೂ ಇವುಗಳನ್ನು ಅಕ್ಟೋಬರ್ 27ರಂದು ಪ್ರಕಟವಾಗುವ ಅಂತಿಮ ಪಟ್ಟಿಯಲ್ಲಿ ಪರಿಗಣಿಸಲಾಗುತ್ತದೆ.

ಉಳಿದ ಅರ್ಜಿಗಳನ್ನು ಅಂತಿಮ ಪಟ್ಟಿ ಪ್ರಕಟಗೊಂಡ ಬಳಿಕ ಕಾಲಾನುಕ್ರಮವಾಗಿ ವಿಲೇವಾರಿ ಮಾಡಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯ ಚುನಾವಣಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೂರು ಕರಡಿಗಳೊಂದಿಗೆ ಹೋರಾಡಿ ಪ್ರಾಣ ಉಳಿಸಿಕೊಂಡ ರೈತ; ತಲೆಗೆ ಗಂಭೀರ ಗಾಯ, ಸ್ಥಿತಿ ಚಿಂತಾಜನಕ!ಹಿರಿಯೂರಿನಲ್ಲಿ ಪುಂಗಿ ಊದಿ ಹೋದ ಸಿಎಂ: ಗೋವಿಂದ ಕಾರಜೋಳ ಕಿಡಿಸಂಭ್ರದಿಂದ ನಡೆದ ತುಳಸಿ ಹಬ್ಬದ ಆಚರಣೆಭೀಕರ ರಸ್ತೆ ಅಪಘಾತ: ದೇಗುಲ ದರ್ಶನ ಮುಗಿಸಿ ಮರಳುತ್ತಿದ್ದ ಒಂದೇ ಕುಟುಂಬದ 9 ಮಂದಿ ದುರ್ಮರಣಹಿರಿಯೂರು ಉಪಚುನಾವಣೆ: ಅಮಿತ್ ಶಾ ಅಂಗಳಕ್ಕೆ ಅಭ್ಯರ್ಥಿ ಆಯ್ಕೆ ಚೆಂಡುಡಿ.ಕೆ. ಶಿವಕುಮಾರ್ ಔತಣಕೂಟ ವಿವಾದ: ಬಿ.ವೈ ವಿಜಯೇಂದ್ರ ಅಸಮಾಧಾನಕ್ಕೆ ಜನಾರ್ದನ ರೆಡ್ಡಿ ತಿರುಗೇಟುಭಾರತ್ ಜೋಡೋ ಯೋಜನೆಯಲ್ಲಿ ಪಕ್ಷಪಾತ ಆರೋಪ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ6ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ: ಪ್ರತಿಭಟನೆ ಮತ್ತಷ್ಟು ತೀವ್ರಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣ ಕಡ್ಡಾಯ ಜಾಮೀನಿಗೆ ಹೈಕೋರ್ಟ್ ಅಸ್ತು!ರೌಡಿಗಳಿಗೆ ಖಾಕಿ ಶಾಕ್: 30ಕ್ಕೂ ಹೆಚ್ಚು ಕಡೆ ಏಕಕಾಲಕ್ಕೆ ದಾಳಿ, ಆರ್ಥಿಕ ಮೂಲಗಳಿಗೂ ಕತ್ತರಿ!