Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಮಾವು ಬೆಳೆಗಾರರಿಗೆ ಸಂತಸ ಸುದ್ದಿ:ಮಾವು ಖರೀದಿ ಕೇಂದ್ರ ಸ್ಥಾಪನೆ

ಚಂದ್ರವಳ್ಳಿ ನ್ಯೂಸ್, ಬೆಂ.ಗ್ರಾ.ಜಿಲ್ಲೆ:
ತೋಟಗಾರಿಕೆ ಇಲಾಖೆ, ಕೃಷಿ ಮಾರಾಟ ಇಲಾಖೆ, ಕೃಷಿ ಮಾರಾಟ ಮಂಡಳಿ ಹಾಗೂ ಸಹಕಾರ ಇಲಾಖೆ ಸಹಯೋಗದೊಂದಿಗೆ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ ನಿಯಮಿತ ಬೆಂಗಳೂರು ವತಿಯಿಂದ 2025-26ನೇ ಸಾಲಿನ ಕೇಂದ್ರ ಸರ್ಕಾರದ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆಯಡಿ (MIS-PDPS) ಮಾವು ಖರೀದಿಸಲು ಕೇಂದ್ರ ಸರ್ಕಾರವು ಪ್ರತಿ ಕ್ವಿಂಟಾಲ್ ಗೆ ರೂ,1616 ದರ ನಿಗದಪಡಿಸಿದ್ದು ಅದರಂತೆ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ನಿಯಮಿತ ವತಿಯಿಂದ ಮಾವು ಖರೀದಿ ಮಾಡಲಾಗುತ್ತಿದೆ.

ನೋಂದಣಿ ಕೇಂದ್ರ/ ಖರೀದಿ ಕೇಂದ್ರದ ಸ್ಥಳ-
ಹೊಸಕೋಟೆ-ಬೆಂಗಳೂರು ಹೈವೆ, ಬೆಂಗಳೂರು ದಕ್ಷಿಣ ತಾಲ್ಲೂಕಿನ ವೈಟ್ ಫೀಲ್ಡ್ ನ ಖಾಜಿ ಸೊಣ್ಣೇನಹಳ್ಳಿ ಬಳಿಯ ಸಫಲ್ ಮಾರುಕಟ್ಟೆ(ಯುನಿಟ್ ಆಫ್ ಮದರ್ ಡೈರಿ ಫ್ರೂಟ್ ಅಂಡ್ ವೆಜಿಟೇಬಲ್ಸ್ )ಯಲ್ಲಿ ಮಾವು ನೋಂದಣಿ, ಖರೀದಿ ಕೇಂದ್ರ ಸ್ಥಾಪಿಸಲಾಗಿದ್ದು ಮಾವು ಬೆಳೆಗಾರರು ಅಗತ್ಯ ದಾಖಲೆಗಳೊಂದಿಗೆ ಇಲ್ಲಿಗೆ ಭೇಟಿ ನೀಡಿ ಮಾವು ಮಾರಾಟ ಮಾಡಬಹುದಾಗಿದೆ.


ಜೂನ್ 27 ರಿಂದ ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುತ್ತಿದ್ದು, ನೋಂದಣಿ ಪ್ರಕ್ರಿಯೆಗೆ ರೈತರು ಪಹಣಿ ಅಥವಾ ಆರ್.ಟಿ.ಸಿ ಆಧಾರ್ ಮತ್ತು ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿ (ಆಧಾರ್ ಜೋಡಣೆ ಕಡ್ಡಾಯ), ಭಾವಚಿತ್ರ ಹಾಗೂ FRUITS ತಂತ್ರಾಂಶದ ರೈತ ನೋಂದಣಿ ಸಂಖ್ಯೆ (FID)ಯನ್ನು ಕಡ್ಡಾಯವಾಗಿ ನೀಡಬೇಕು. FRUITS ತಂತ್ರಾಂಶದ
ರೈತ ನೋಂದಣಿ ಸಂಖ್ಯೆಯನ್ನು ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರ ಅಥವಾ ತಾಲ್ಲೂಕಿನ ಕೃಷಿ ಇಲಾಖೆಯಿಂದ ಪಡೆಯಬಹುದು.

ಮಾವು ಬೆಳೆದು ಬೆಳೆ ಸಮೀಕ್ಷೆಯಲ್ಲಿ ಮಾವು ಬೆಳೆ ಎಂದು ಆರ್.ಟಿ.ಸಿ ವಾರು ನಮೂದಾಗಿರುವ ರೈತರು ಮಾತ್ರ ಅರ್ಹರಾಗಿರುತ್ತಾರೆ. ಈ ಯೋಜನೆಯಡಿ ಎಕರೆಗೆ 20 ಕ್ವಿಂಟಾಲ್ ನಂತೆ ಗರಿಷ್ಠ 5 ಎಕರೆಗೆ 100 ಕ್ವಿಂಟಾಲ್ ವರೆಗೆ ಮಿತಿಗೊಳಿಸಿ ವ್ಯತ್ಯಾಸದ ಮೊತ್ತವನ್ನು ನೀಡತಕ್ಕದ್ದು, ರೈತರ ಹೆಸರಿನ ಆಧಾರ್ ಸಂಖ್ಯೆಗೆ ಜೋಡಣೆಗೊಂಡ ಬ್ಯಾಂಕ್ ಖಾತೆಗೆ ಮಾತ್ರ DBT ಮೂಲಕ ಹಣ ಪಾವತಿಸಲಾಗುವುದು.


ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರು 94489 99214, ಹೊಸಕೋಟೆ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು 98802 10892, ದೇವನಹಳ್ಳಿ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು 94804 61234, ದೊಡ್ಡಬಳ್ಳಾಪುರ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು 94821 29648, ನೆಲಮಂಗಲ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು 98804 61607, ಹೊಸಕೋಟೆ ಎ.ಪಿ.ಎಂ.ಸಿ ಕೃಷಿ ಉತ್ಪನ್ನ ಮಾರುಕಟ್ಟೆಯ ಕಾರ್ಯದರ್ಶಿಗಳು 82173 81079 ಗೆ ಸಂಪರ್ಕಿಸಹುದು ಎಂದು ಜಿಲ್ಲೆಯ ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು